ರಾಜ್ಯಸಭೆ ಚುನಾವಣೆಯಲ್ಲಿ ಮತ್ತೆ ಜೆಡಿಎಸ್ -ಕಾಂಗ್ರೆಸ್ ದೋಸ್ತಿ: ಸುಳಿವು ನೀಡಿದ ಕೈ-ತೆನೆ ನಾಯಕರು!

ಕೊರೋನಾ ವೈರಸ್ ಮಧ್ಯೆ ರಾಜ್ಯ ರಾಜಕಾರಣ ರಂಗೇರಿದ್ದು, ರಾಜ್ಯಸಭಾ ಚುನಾವಣೆ ಗೆಲ್ಲಲು ಕಾಂಗ್ರೆಸ್ ಮತ್ತು ಜೆಡಿಎಸ್ ದೋಸ್ತಿ ಮಾಡಿಕೊಳ್ಳಲು ಮತ್ತೊಮ್ಮೆ ಮುಂದಾಗಿವೆ. ಇದಕ್ಕೆ ಪುಷ್ಠಿ ನೀಡುವಂತೆ ಇತ್ತೀಚೆಗೆ ದೇವೇಗೌಡರ ಹುಟ್ಟು ಹಬ್ಬದಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇಬ್ಬರು ಜೊತೆಗೂಡಿ ಊಟ ಮಾಡಿದ್ದರು.
ದೇವೇಗೌಡ ಮತ್ತು ಖರ್ಗೆ
ದೇವೇಗೌಡ ಮತ್ತು ಖರ್ಗೆ

ಬೆಂಗಳೂರು: ಕೊರೋನಾ ವೈರಸ್ ಮಧ್ಯೆ ರಾಜ್ಯ ರಾಜಕಾರಣ ರಂಗೇರಿದ್ದು, ರಾಜ್ಯಸಭಾ ಚುನಾವಣೆ ಗೆಲ್ಲಲು ಕಾಂಗ್ರೆಸ್ ಮತ್ತು ಜೆಡಿಎಸ್ ದೋಸ್ತಿ ಮಾಡಿಕೊಳ್ಳಲು ಮತ್ತೊಮ್ಮೆ ಮುಂದಾಗಿವೆ. ಇದಕ್ಕೆ ಪುಷ್ಠಿ ನೀಡುವಂತೆ ಇತ್ತೀಚೆಗೆ ದೇವೇಗೌಡರ ಹುಟ್ಟು ಹಬ್ಬದಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇಬ್ಬರು ಜೊತೆಗೂಡಿ ಊಟ ಮಾಡಿದ್ದರು.

ರಾಜ್ಯ ಸಭೆ ಚುನಾವಣೆಯಲ್ಲಿ  ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆ ಹಾಗೂ ಜೆಡಿಎಸ್ ನಿಂದ ದೇವೇಗೌಡರು ಆಯ್ಕೆ ಬಯಸಿದ್ದಾರೆ. ಹೀಗಾಗಿ ಸೋನಿಯಾ ಗಾಂಧಿ ಅವರ ವಿಡಿಯೋ ಸಂವಾದದಲ್ಲಿ ಖರ್ಗೆ ಮತ್ತು  ದೇವೇಗೌಡ ಇಬ್ಬರು ಭಾಗವಹಿಸಿದ್ದರು.

ರಾಜ್ಯಸಭೆಗೆ ಆಯ್ಕೆಯಾಗಲು 45 ಸದಸ್ಯರ ಅವಶ್ಯಕತೆಯಿದೆ. ಜೆಡಿಎಸ್ ಕೇವಲ 34 ಸದಸ್ಯರನ್ನು ಹೊಂದಿದೆ, ಹೀಗಾಗಿ ಸ್ವಂತ ಶಕ್ತಿಯಿಂದ ಜೆಡಿಎಸ್ ಗೆ ಸಾಧ್ಯವಿಲ್ಲ, ಉಳಿದ ಮತಗಳಿಗಾಗಿ ಜೆಡಿಎಸ್ ಗೆ ಕಾಂಗ್ರೆಸ್ ಸಹಾಯ ಬೇಕಿದೆ.  ರಾಜ್ಯಸಭೆಯಲ್ಲಿ ಕಾಂಗ್ರೆಸ್ ನೆರವು ಪಡೆಯುವ ಜೆಡಿಎಸ್ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜೆಡಿಎಸ್ ನೆರವಿನ ಹಸ್ತ ನೀಡಲಿದೆ.

16 ಪರಿಷತ್ ಸ್ಥಾನಗಳಲ್ಲಿ ಪದವೀದರ ಮತ್ತು ಶಿಕ್ಷಕರ 4 ಕ್ಷೇತ್ರಗಳಿಗೆ ಚುನಾವಣೆ ನಡೆಯಬೇಕಿದೆ,ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಬಿಜೆಪಿ ಸ್ವೀಪ್ ಮಾಡುವುದನ್ನು ತಡೆಯಲು ಯತ್ನಿಸುತ್ತಿವೆ.

ಕಾಂಗ್ರೆಸ್ ಬಿಕೆ ಹರಿ ಪ್ರಸಾದ್ ಮತ್ತು ಪ್ರೊ, ರಾಜೀವ್ ಗೌಡ ಹಾಗೂ ಜೆಡಿಎಸ್ ನ ಕುಪೇಂದ್ರ ರೆಡ್ಡಿ ಅವರ ಅಧಿಕಾರವದಿ ಪೂರ್ಣಗೊಂಡಿದೆ. ಹೀಗಾಗಿ ನಾಮಪತ್ರ ಸಲ್ಲಿಕೆಗೆ ತೊಡಕುಂಟಾಗಬಹುದು, ಬಿಜೆಪಿ ನಾಯಕ ಪ್ರಭಾಕರ್ ಕೋರೆ ಮರು ನಾಮಕರಣವಾಗುವ ಸಾಧ್ಯತೆಯಿದೆ. ಚುನಾವಣೆ ನಡೆಸಲು ನಾವು ಸಿದ್ದರಿದ್ದು, ಕೇಂದ್ರ ಚುನಾವಣಾ ಆಯೋಗದ
ಅನುಮತಿಗಾಗಿ ಕಾಯುತ್ತಿರುವುದಾಗಿ ರಾಜ್ಯ ಚುನಾವಣಾ ಆಯೋಗದ ಮುಖ್ಯಸ್ಥ ಸಂಜೀವ್ ಕುಮಾರ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com