ಬೆಂಗಳೂರು: ಜೂನ್ 7ರಂದು ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಪದಗ್ರಹಣ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕವಾದ ಮೂರು ತಿಂಗಳ ಬಳಿಕ ಡಿಕೆ ಶಿವಕುಮಾರ್ ಜೂನ್ 7 ರಂದು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

Published: 26th May 2020 07:49 AM  |   Last Updated: 26th May 2020 07:49 AM   |  A+A-


DK Shiva Kumar

ಶಿವಕುಮಾರ್

Posted By : Shilpa D
Source : The New Indian Express

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕವಾದ ಮೂರು ತಿಂಗಳ ಬಳಿಕ ಡಿಕೆ ಶಿವಕುಮಾರ್ ಜೂನ್ 7 ರಂದು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕರು, ದೆಹಲಿಯ ಮುಖಂಡರು ಹಾಗೂ ನೆರೆ ರಾಜ್ಯದ ಆಪ್ತ ರಾಜಕಾರಣಿಗಳು ಸೇರಿದಂತೆ ಸುಮಾರು 200 ಮಂದಿ ಭಾಗವಹಿಸುವ ಸಾಧ್ಯತೆಯಿದೆ.

ಕಳೆದ ವರ್ಷದ ಅಕ್ಟೋಬರ್ ತಿಂಗಳಲ್ಲಿ ಡಿಕೆ ಶಿವಕುಮಾರ್ ತಿಹಾರ್ ಜೈಲಿನಿಂದ ಬಿಡುಗಡೆಯಾದ ಬಳಿಕ ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಅವರ ಹೆಸರು ಕೇಳಿ ಬಂದಿತ್ತು. ಸುಮಾರು ದಿನಗಳ ವಿಳಂಬದ ನಂತರ ಮಾರ್ಚ್ ತಿಂಗಳಲ್ಲಿ ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಿ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದರು.

ಮೇ ತಿಂಗಳಲ್ಲಿಯೇ ಶಿವಕುಮಾರ್ ಅಧಿಕಾರ ಸ್ವೀಕರಿಸಬೇಕಿತ್ತು, ಆದರೆ ಲಾಕ್ ಡೌನ್ ಕಾರಣದಿಂದಾಗಿ ಮುಂದೂಡಲಾಗಿತ್ತು. ಮೇ 31 ರಂದು ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ಹೇಳಲಾಗಿತ್ತು, ಆದರೆ ಜೂನ್ 7ಕ್ಕೆ ಕಾರ್ಯಕ್ರಮ ನಿಗದಿ ಪಡಿಸಲಾಗಿದೆ.


 

Stay up to date on all the latest ರಾಜಕೀಯ news with The Kannadaprabha App. Download now
Poll
coronadead

ಕೊರೋನಾ ವೈದ್ಯಕೀಯ ಸಲಕರಣೆ ಖರೀದಿ ಹೆಸರಿನಲ್ಲಿ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂಬ ಆರೋಪಗಳು ಕೇಳಿಬಂದಿವೆ. ನೀವು ಏನಂತೀರಿ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp