ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಬಿಎಸ್ ವೈ ಮಾಜಿ ಆಪ್ತ ಸಹಾಯಕ ಸಂತೋಷ್ ನೇಮಕ

ಆಪರೇಷನ್‌ ಕಮಲದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಸಂಬಂಧಿ ಹಾಗೂ ಮಾಜಿ ಆಪ್ತ ಸಹಾಯಕ ಎನ್‌ಆರ್‌ ಸಂತೋಷ್‌ ಅವರನ್ನು ಮುಖ್ಯಮಂತ್ರಿಗಳ ನಾಲ್ಕನೇ  ರಾಜಕೀಯ ಕಾರ್ಯದರ್ಶಿಯಾಗಿ ಶನಿವಾರ ನೇಮಿಸಲಾಗಿದೆ. 

Published: 30th May 2020 06:27 PM  |   Last Updated: 30th May 2020 06:27 PM   |  A+A-


santhos1

ಸಂತೋಷ್

Posted By : lingaraj
Source : Online Desk

ಬೆಂಗಳೂರು: ಆಪರೇಷನ್‌ ಕಮಲದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಸಂಬಂಧಿ ಹಾಗೂ ಮಾಜಿ ಆಪ್ತ ಸಹಾಯಕ ಎನ್‌ಆರ್‌ ಸಂತೋಷ್‌ ಅವರನ್ನು ಮುಖ್ಯಮಂತ್ರಿಗಳ ನಾಲ್ಕನೇ  ರಾಜಕೀಯ ಕಾರ್ಯದರ್ಶಿಯಾಗಿ ಶನಿವಾರ ನೇಮಿಸಲಾಗಿದೆ. 

ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಗ್ರಾಮದ ಎನ್ಆರ್ ಸಂತೋಷ್ ಅವರನ್ನು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಸಿ ರಾಜ್ಯ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ.

ಈಗಾಗಲೇ ಯಲಹಂಕ ಶಾಸಕ ಎಸ್ಆರ್ ವಿಶ್ವನಾಥ್, ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಮತ್ತು ಶಂಕರಗೌಡ ಪಾಟೀಲ್ ಅವರು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕಗೊಂಡಿದ್ದಾರೆ. ಇದೀಗ ನಾಲ್ಕನೇ ರಾಜಕೀಯ ಕಾರ್ಯದರ್ಶಿಯಾಗಿ ಸಂತೋಷ್‌ ನೇಮಕವಾಗಿದ್ದಾರೆ.

ಸಂತೋಷ್‌ ಅವರು ಹಲವು ವರ್ಷಗಳ ಕಾಲ ಯಡಿಯೂರಪ್ಪ ಅವರ ಆಪ್ತ ಸಹಾಯಕರಾಗಿದ್ದರು. ಸಂಬಂಧದಲ್ಲಿ ಇವರು ಯಡಿಯೂರಪ್ಪ ಸಹೋದರಿಯ ಮೊಮ್ಮಗನಾಗಿದ್ದಾರೆ.

Stay up to date on all the latest ರಾಜಕೀಯ news
Poll
Farmers_ride_tractors1

ರೈತರು ದೆಹಲಿಯಲ್ಲಿ ತಮ್ಮ ಗಣರಾಜ್ಯೋತ್ಸವ ದಿನದ ಟ್ರಾಕ್ಟರ್ ರ್ಯಾಲಿಯನ್ನು ನಿಲ್ಲಿಸಬೇಕೇ?


Result
ಹೌದು
ಬೇಡ
flipboard facebook twitter whatsapp