ಬಿಜೆಪಿಯ ಹೇಳಿಕೆಗಳಿಗೆ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಮಾತ್ರ ಪ್ರತಿಕ್ರಿಯಿಸಲು ಫರ್ಮಾನು!

ಬಿಜೆಪಿಯಲ್ಲಿ ಭುಗಿಲೆದ್ದಿರುವ ಅಸಮಾಧಾನ, ಬಿಜೆಪಿ ನಾಯಕರ ಹೇಳಿಕೆಗೆ ತಾವು ಹಾಗೂ ವಿಪಕ್ಷ ನಾಯಕರು ಮಾತ್ರ ಪ್ರತಿಕ್ರಿಯೆ ನೀಡಬೇಕೇ ಹೊರತು ಕಾರ್ಯಕರ್ತರಾಗಲೀ, ಉಳಿದ ನಾಯಕರಾಗಲೀ ಯಾರೂ ಹೇಳಿಕೆ ಕೊಡುವಂತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಫರ್ಮಾನು ಹೊರಡಿಸಿದ್ದಾರೆ.
ಕಾಂಗ್ರೆಸ್ ನಾಯಕರು
ಕಾಂಗ್ರೆಸ್ ನಾಯಕರು

ಬೆಂಗಳೂರು: ಬಿಜೆಪಿಯಲ್ಲಿ ಭುಗಿಲೆದ್ದಿರುವ ಅಸಮಾಧಾನ, ಬಿಜೆಪಿ ನಾಯಕರ ಹೇಳಿಕೆಗೆ ತಾವು ಹಾಗೂ ವಿಪಕ್ಷ ನಾಯಕರು ಮಾತ್ರ ಪ್ರತಿಕ್ರಿಯೆ ನೀಡಬೇಕೇ ಹೊರತು ಕಾರ್ಯಕರ್ತರಾಗಲೀ, ಉಳಿದ ನಾಯಕರಾಗಲೀ ಯಾರೂ ಹೇಳಿಕೆ ಕೊಡುವಂತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಫರ್ಮಾನು ಹೊರಡಿಸಿದ್ದಾರೆ.

ಬಿಜೆಪಿಯ ಆಂತರಿಕೆ ಬೆಳವಣಿಗೆಗಳು ಮತ್ತು ಸರ್ಕಾರದ ನಡೆ ಮೇಲೆ ಕಣ್ಣಿಟ್ಟಿರುವ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅಳೆದು ತೂಗಿ ನೋಡಿ ಮುಂದಿನ ಹೆಜ್ಜೆ ಇಡಲು ನಿರ್ಧರಿಸಿದ್ದಾರೆ.

ಈ ನಡುವೆ ಯಾರೇ ಆಗಲೀ ಪಕ್ಷಕ್ಕೆ ಮುಜುಗರವಾಗುವಂತಹ ಹೇಳಿಕೆಗಳನ್ನಾಗಲೀ ಅಥವಾ ಬಿಜೆಪಿಯನ್ನು ವಿರೋಧಿಸುವ ಭರದಲ್ಲಿ ಎಡವಟ್ಟು ಮಾಡಿಕೊಳ್ಳುವುದಾಗಲೀ ಅಥವಾ ಪಕ್ಷಕ್ಕೆ ಚ್ಯುತಿ ಬರುವಂತೆ ನಡೆದುಕೊಳ್ಳುವುದಾಗಲೀ ಮಾಡಬಾರದು. ಬಿಜೆಪಿ ಬಗ್ಗೆ ತಾವು ಹಾಗೂ ಸಿದ್ದರಾಮಯ್ಯ ಮಾತ್ರ ಮಾತನಾಡಬೇಕು. ಮಾಧ್ಯಮಗಳಿಗೆ ಹೇಳಿಕೆಗಳನ್ನು ಪ್ರತಿಕ್ರಿಯೆಗಳನ್ನು ನೀಡಬೇಕೆಂದು ಖಡಕ್ ಆಗಿ ತಿಳಿಸಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಪಕ್ಷದ ಎಲ್ಲಾ ನಾಯಕರು, ಕಾರ್ಯಕರ್ತರಿಗೆ ಸೂಚನೆ ನೀಡಿರುವ ಶಿವಕುಮಾರ್, ಬಿಜೆಪಿ ಆಂತರಿಕ ವಿಚಾರದ ಬಗ್ಗೆ ನಾವು ಮಾತಾಡುವುದು ಬೇಡ. ತಮಗೂ ಬಿಜೆಪಿಯ ಆಂತರಿಕ ವಿಚಾರಕ್ಕೂ ಸಂಬಂಧ ಇಲ್ಲ. ಈ ಬಗ್ಗೆ ಹೇಳಿಕೆಗಳನ್ನು ನೀಡದಂತೆ ಸಹೋದರ ಹಾಗೂ ಸಂಸದರೂ ಆಗಿರುವ ಡಿ.ಕೆ.ಸುರೇಶ್ ಗೂ ಸೂಚಿಸುವುದಾಗಿ ಹೇಳಿದ್ದಾರೆ.

ಶುಕ್ರವಾರ ರಾಮನಗರದಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಪಾಲ್ಗೊಂಡಿದ್ದ ಡಿ.ಕೆ.ಸುರೇಶ್, ಸದ್ಯದಲ್ಲಿ ಚುನಾವಣೆ ನಡೆಯಲಿದ್ದು, ಪಕ್ಷ ಸಂಘಟನೆಗೆ ಸಜ್ಜಾಗುವಂತೆ ಕಾರ್ಯಕರ್ತರಿಗೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಗೊಂದಲವುಂಟಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com