ರಾಜರಾಜೇಶ್ವರಿ ನಗರ ಉಪಚುನಾವಣೆ: ಟೆಂಪಲ್ ರನ್ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಮತ ಚಲಾವಣೆ

ಆರ್.ಆರ್.ನಗರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ಅವರು ಮಂಗಳವಾರ ತಮ್ಮ ಮತ ಚಲಾಯಿಸಿದ್ದಾರೆ. 
ಮತ ಚಲಾಯಿಸಿದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ
ಮತ ಚಲಾಯಿಸಿದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ

ಬೆಂಗಳೂರು: ಆರ್.ಆರ್.ನಗರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ಅವರು ಮಂಗಳವಾರ ತಮ್ಮ ಮತ ಚಲಾಯಿಸಿದ್ದಾರೆ. 

ಚುನಾವಣೆ ಹಿನ್ನೆಲೆಯಲ್ಲಿ ಕುಸುಮಾ ಅವರು ಮತದಾನ ಮಾಡುವ ಸಲುವಾಗಿ ಮನೆಯಿಂದ ಹೊರಬಂದಿದ್ದು, ಈ ವೇಳೆ ತಂದೆ-ತಾಯಿ ಆಶೀರ್ವಾದ ಪಡೆದುಕೊಂಡರು. ನಂತರ ವಿಜಯನಗರದಲ್ಲಿರುವ ಆದಿ ಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಜ್ಞಾನಭಾರತಿ ವಾರ್ಡ್​ನ 304ನೇ ಮತಗಟ್ಟೆಯಲ್ಲಿ ಕುಟುಂಬ ಸಮೇತವಾಗಿ ಬಂದು ಮತ ಚಲಾಯಿಸಿದ್ದಾರೆ. 

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್.ಆರ್.ನಗರ ಕ್ಷೇತ್ರದಲ್ಲಿ ಶೇಕಡಾ 100ರಷ್ಟು ಗೆಲ್ಲುವ ವಿಶ್ವಾಸವಿದೆ. ಈ ದಿನ ತಮಗೆ ಬಹಳ ವಿಶೇಷ ದಿನವಾಗಿದೆ. ನನಗೆ ನಾನೇ ಮತ ಚಲಾಯಿಸಿದ್ದೇನೆ. ಕ್ಷೇತ್ರದ ಜನರು ನೊಂದವರ ಪರವಾಗಿ ಕೆಲಸ ಮಾಡುವ ಹೆಣ್ಣು ಮಗಳಿಗೆ ಮತ ಹಾಕಬೇಕು. ಕೊರೊನಾ ಹಿನ್ನೆಲೆಯಲ್ಲಿ ಚುನಾವಣೆ ಆಯೋಗ ಎಲ್ಲ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದೆ. ಹೀಗಾಗಿ ಜನರು ನಿರಾತಂಕವಾಗಿ ಮತದಾನ ಮಾಡಬೇಕು ಎಂದು ಹೇಳಿದ್ದಾರೆ.

ಮತದಾರರು ನೊಂದವರ ಪರ, ಅಭಿವೃದ್ಧಿ ಪರ ಕೆಲಸ ಮಾಡುವವರಿಗೆ ಜನ ಮತ ಹಾಕುತ್ತಾರೆ ಎಂಬ ವಿಶ್ವಾಸ ಇದೆ. ಯುವಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ ಚಲಾಯಿಸಬೇಕು. ಮತ ಚಲಾವಣೆ ಯುವಕರ ಹಕ್ಕು. ಎಲ್ಲರೂ ಬಂದು ಯುವ ಜನತೆ ಪ್ರತಿನಿಧಿಯಾದ ನನಗೆ ಮತ ಚಲಾವಣೆ ಮಾಡಬೇಕು ಎಂದು ಮನವಿ ಮಾಡಿದರು.

ಶಿರಾ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಮತದಾನ
ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಮತದಾನ ಮಾಡಿದ್ದಾರೆ.

ಮತದಾನಕ್ಕೂ ಮುನ್ನ ಹಾಲೇನಹಳ್ಳಿಯ ಆಂಜನೇಯಸ್ವಾಮಿ ದೇಗುಲ ಕಿರಂದಟ್ಟಿಯ ಕೋಟೆ ಮಾರಮ್ಮ ದೇಗುಲ ಹಾಗೂ ಶಿರಾದ ಆರ್.ಟಿ.ರಸ್ತೆಯಲ್ಲಿರುವ ರಾಘವೇಂದ್ರ ಮಠಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. 

ನಂತರ ಶಿರಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪತ್ನಿ ಜೊತೆ ಆಗಮಿಸಿ ಹಕ್ಕು ಚಲಾಯಿಸಿದ್ದಾರೆಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com