ಗ್ರಾಮ ಪಂಚಾಯಿತಿ ಚುನಾವಣೆ ಮೇಲೆ ಬಿಜೆಪಿ ಕಣ್ಣು: 'ಪಂಚ ರತ್ನ' ಸಮಿತಿ ಕಾರ್ಯಾರಂಭ

2015 ರ ಗ್ರಾಮಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ -ಜೆಡಿಎಸ್ ಅಭ್ಯರ್ಥಿಗಳು  ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಿದ್ದರು. ಬಿಜೆಪಿ ಮೂರನೇ ಸ್ಥಾನಕ್ಕೆ ಕುಸಿದಿತ್ತು. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಹೆಚ್ಚಿನ ಸೀಟುಗಳನ್ನು ಪಡೆಯಲು ಸೂಕ್ಷ್ಮವಾಗಿ ಕೆಲಸ ಮಾಡುತ್ತಿದೆ. 

2015 ರ ಗ್ರಾಮಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ -ಜೆಡಿಎಸ್ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಿದ್ದರು. ಬಿಜೆಪಿ ಮೂರನೇ ಸ್ಥಾನಕ್ಕೆ ಕುಸಿದಿತ್ತು. 

ಈ ಬಾರಿ ಪಕ್ಷ ಅಧಿಕಾರದಲ್ಲಿದೆ, ಹೀಗಾಗಿ ಗ್ರಾಮೀಣ ಭಾಗದಲ್ಲಿ ತಮ್ಮ ಸ್ಥಾನವನ್ನು ಮತ್ತಷ್ಟು ಭದ್ರಗೊಳಿಸಲು ಬಿಜೆಪಿ ನಿರ್ಧರಿಸಿದೆ.

ಬಿಜೆಪಿಯು ಗ್ರಾಪಂ ಮಾತ್ರವಲ್ಲದೆ, ರಾಜ್ಯದಲ್ಲಿ ನಡೆಯುವ ಎಲ್ಲ ಚುನಾವಣೆಗಳಲ್ಲೂ ಬೂತ್‌ ಮಟ್ಟದಲ್ಲಿ ಸಕ್ರಿಯ ಕಾರ್ಯ ನಿರ್ವಹಿಸುವ “ಪಂಚ ರತ್ನ’ ಸಮಿತಿ ರಚನೆಕಾರ್ಯ ಸದ್ದಿಲ್ಲದೆ ಶುರು ಮಾಡಿದೆ.

90 ಸಾವಿರ ಗ್ರಾಮ ಪಂಚಾಯತಿಗಳಲ್ಲಿ ಈ ಬಾರಿ ಶೇ,35 ರಷ್ಟು ಸೀಟು ಗೆಲ್ಲುವುದಾಗಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ. ನಾವು ಶೇ.65 ರಷ್ಟು ಸೀಟು ಗೆಲ್ಲುವ ಗುರಿ ಹೊಂದಿದ್ದೇವೆ,  ರಾಜ್ಯ ಬಿಜೆಪಿ ಅಧ್ಯಕ್ಷರಾದ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರ ಚಿಂತನೆಯಂತೆ ರಾಜ್ಯದಲ್ಲಿನ 54,000ಕ್ಕೂ ಹೆಚ್ಚು ಬೂತ್‌ಗಳಲ್ಲಿ ತಲಾ ಐದು ಮಂದಿಯ “ಪಂಚರತ್ನ ಸಮಿತಿ’ ಪಡೆ ರಚನೆಯಾಗುತ್ತಿದ್ದು, ಈಗಾಗಲೇ 30,000 “ರತ್ನ’ಗಳ ಗುಂಪು ರಚನೆಯಾಗಿದೆ ಎಂದು ಹೇಳಿದ್ದಾರೆ.

ಒಟ್ಟು 2.70 ಲಕ್ಷ ಮಂದಿಯ “ಪಂಚರತ್ನ ಸಮಿತಿ’ ಯು ಸಂಘಟನೆ ಜತೆಗೆ ಗ್ರಾಪಂ ಚುನಾವಣೆಯಲ್ಲಿ ಗೆಲುವಿಗೆ ಶ್ರಮಿಸಲು ಸಜ್ಜಾಗುತ್ತಿದೆ. 16 ಜಿಲ್ಲೆಗಳಲ್ಲಿ ಈಗಾಗಲೇ ಸಮಿತಿ ರಚನೆಯಾಗಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com