ಲವ್ ಜಿಹಾದ್ ತಡೆಗೆ ಕಾನೂನು ರೂಪಿಸುವ ಉದ್ದೇಶ ದುರುದ್ದೇಶಪೂರಿತ : ವಿಪಕ್ಷ ನಾಯಕ ಸಿದ್ದರಾಮಯ್ಯ

ಲವ್ ಜಿಹಾದ್' ತಡೆಗೆ ಕಾನೂನು ರೂಪಿಸುವುದಾಗಿ ಮುಖ್ಯ ಮಂತ್ರಿ ಅವರ ಘೋಷಣೆ ಮಾಡಿದ್ದಾರೆ.ಆಡಳಿತದ ವೈಫಲ್ಯ ದಿಂದ ಜನಮನವನ್ನು ಬೇರೆಡೆ ಸೆಳೆಯುವ ಹತಾಶ ಪ್ರಯತ್ನವಲ್ಲದೇ ಇನ್ನೇನಲ್ಲ.ಕೋಮುದ್ವೇಷವನ್ನು ಹುಟ್ಟುಹಾಕಿ ರಾಜ ಕೀಯದ ಬೇಳೆ ಬೇಯಿಸುವ ದುರುದ್ದೇಶವಲ್ಲದೇ ಬೇರೆ ಯಾವ ಸದುದ್ದೇಶ ಘೋಷಣೆಗೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ನಡೆಯನ್ನು ಖಂಡಿಸಿ ದ್
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಲವ್ ಜಿಹಾದ್' ತಡೆಗೆ ಕಾನೂನು ರೂಪಿಸುವುದಾಗಿ ಮುಖ್ಯ ಮಂತ್ರಿ ಅವರ ಘೋಷಣೆ ಮಾಡಿದ್ದಾರೆ.ಆಡಳಿತದ ವೈಫಲ್ಯ ದಿಂದ ಜನಮನವನ್ನು ಬೇರೆಡೆ ಸೆಳೆಯುವ ಹತಾಶ ಪ್ರಯತ್ನವಲ್ಲದೇ ಇನ್ನೇನಲ್ಲ.ಕೋಮುದ್ವೇಷವನ್ನು ಹುಟ್ಟುಹಾಕಿ ರಾಜ ಕೀಯದ ಬೇಳೆ ಬೇಯಿಸುವ ದುರುದ್ದೇಶವಲ್ಲದೇ ಬೇರೆ ಯಾವ ಸದುದ್ದೇಶ ಘೋಷಣೆಗೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ನಡೆಯನ್ನು ಖಂಡಿಸಿ ದ್ದಾರೆ.

ಬಿಜೆಪಿ ಕಾರ್ಯಕಾರಿಣಿಯಲ್ಲಿ ಲವ್ ಜಿಹಾದ್ ತಡೆಯಲು ಕಾಯ್ದೆ ತರುವುದಾಗಿ ಮುಖ್ಯಮಂತ್ರಿ ಪ್ರಕಟಿಸಿದ್ದಾರೆ.ಜೊತೆಗೆ ಕಾನೂನು ರೂಪಿಸಲು ಆತುರ ಪ್ರದರ್ಶಿಸುತ್ತಿರುವ ಅನುಮಾನಕ್ಕೆ ಕಾರಣ ವಾಗಿದೆ.'ಲವ್ ಜಿಹಾದ್' ಎಂದರೆ ಏನು ಎನ್ನುವುದೇ ಸ್ಪಷ್ಟ ಇಲ್ಲದೆ ಇರುವಾಗ,ಯಾವ ಕಾನೂನು ಕೂಡಾ ಲವ್ ಜಿಹಾದ್ ಅನ್ನು ವ್ಯಾಖ್ಯಾನಿಸಿಲ್ಲ ಎಂದು ಕೇಂದ್ರ ಗೃಹಸಚಿವಾಲಯವೇ ಸ್ಪಷ್ಟಪ ಡಿಸಿರುವಾಗ ಮುಖ್ಯಮಂತ್ರಿ ಯಾವ ಆಧಾರದಲ್ಲಿ ಕಾನೂನು ರೂಪಿಸಲು ಹೊರಟಿ ದ್ದಾರೆ? ಎಂದು ಅವರು ಪ್ರಶ್ನಿಸಿದ್ದಾರೆ.

ಅಲಹಾಬಾದ್ ಹೈಕೋರ್ಟ್   ತೀರ್ಪನ್ನು ತಮ್ಮ ರಾಜಕೀಯ ಅನುಕೂಲತೆಗೆ ತಕ್ಕಂತೆ ತಪ್ಪಾಗಿ ವಿಶ್ಲೇಷಿಸುವ ಪ್ರಯತ್ನವನ್ನು ಕರ್ನಾಟಕ ಬಿಜೆಪಿ ಸರ್ಕಾರದ
ನಾಯಕರು ಮಾಡುತ್ತಿದ್ದಾರೆ. 'ಮತಾಂತರ ಎನ್ನುವುದು ಅಂತರಧರ್ಮೀಯ ಮದುವೆಗೆ ಅಸ್ತ್ರವಾಗಬಾರದು' ಎಂದು ತೀರ್ಪು ಹೇಳಿದೆಯೇ ಹೊರತು ಅಂತರಧರ್ಮೀಯ ಮದುವೆಯೇ ಅಕ್ರಮ ಎಂದು ಹೇಳಿಲ್ಲ.

ಅಲ್ಲದೆ "ಕರ್ನಾಟಕದ ಮುಖ್ಯಮಂತ್ರಿಗಳು ಮತ್ತು ಕೆಲವು ಸಚಿವರು ಉತ್ತರಪ್ರದೇಶದ ಮುಖ್ಯಮಂತ್ರಿಯವರಿಂದ ಪ್ರೇರಿತರಾಗಿರುವುದು ದುರದೃಷ್ಟಕರ. ಪ್ರಗತಿಪರ ಚಿಂತಕರ ಪರಂಪರೆಯ ಕರ್ನಾಟಕಕ್ಕೆ ‘ಗೂಂಡಾರಾಜ್ಯ’ ಎಂಬ ಕುಖ್ಯಾತಿಯ ಉತ್ತರಪ್ರದೇಶ  ಮಾದರಿ ಅಲ್ಲ, ಅಲ್ಲಿನ ಮುಖ್ಯಮಂತ್ರಿ ಪ್ರೇರಣೆಯೂ ಆಗಬಾರದು." ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com