ಶಿಸ್ತು ಉಲ್ಲಂಘನೆ: ಜಮೀರ್, ಸೌಮ್ಯಾ, ಹುಕ್ಕೇರಿಗೆ ನೋಟಿಸ್ ಸಾಧ್ಯತೆ

ಶಾಸಕರಾದ ಜಮೀರ್ ಅಹಮದ್ ಹಾಗೂ ಸೌಮ್ಯಾ ರೆಡ್ಡಿ ಮತ್ತು ಮಾಜಿ ಸಚಿವ ಪ್ರಕಾಶ್ ಹುಕ್ಕೇರಿಗೆ ರಾಜ್ಯ ಕಾಂಗ್ರೆಸ್ ಶಿಸ್ತು ಸಮಿತಿ ನೋಟಿಸ್ ನೀಡುವ ಸಾಧ್ಯತೆಯಿದೆ.
ಜಮೀರ್ ಅಹ್ಮದ್ ಖಾನ್, ಪ್ರಕಾಶ್ ಹುಕ್ಕೇರಿ, ಸೌಮ್ಯರೆಡ್ಡಿ
ಜಮೀರ್ ಅಹ್ಮದ್ ಖಾನ್, ಪ್ರಕಾಶ್ ಹುಕ್ಕೇರಿ, ಸೌಮ್ಯರೆಡ್ಡಿ

ಬೆಂಗಳೂರು: ಶಾಸಕರಾದ ಜಮೀರ್ ಅಹಮದ್ ಹಾಗೂ ಸೌಮ್ಯಾ ರೆಡ್ಡಿ ಮತ್ತು ಮಾಜಿ ಸಚಿವ ಪ್ರಕಾಶ್ ಹುಕ್ಕೇರಿಗೆ ರಾಜ್ಯ ಕಾಂಗ್ರೆಸ್ ಶಿಸ್ತು ಸಮಿತಿ ನೋಟಿಸ್ ನೀಡುವ ಸಾಧ್ಯತೆಯಿದೆ.

ಮಾಜಿ ಕೇಂದ್ರ ಸಚಿವ ರೆಹಮಾನ್ ಖಾನ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದೆ ಎಂದು ತಿಳಿದು ಬಂದಿದ್ದು, ಮೂವರೂ ನಾಯಕರು ನೀಡಿರುವ ಹೇಳಿಕೆ ಮಾಧ್ಯಮಗಳಲ್ಲಿ ಪ್ರಕಟಗೊಂಡಿದೆ.

 ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಆಗುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಜಯನಗರ ಶಾಸಕಿ ಸೌಮ್ಯಾ ರೆಡ್ಡಿ, ಆರ್.ಆರ್.ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾರನ್ನು ಗೆಲ್ಲಿಸಿದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗುತ್ತಾರೆ ಎಂದಿದ್ದರು.

ಮಾಜಿ ಸಚಿವ ಪ್ರಕಾಶ್ ಹುಕ್ಕೇರಿ ಕೇಂದ್ರದ ಮಾಜಿ ಸಚಿವ ದಿವಂಗತ ಸುರೇಶ್ ಅಂಗಡಿ ಅವರ ಕುಟುಂಬಕ್ಕೆ ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟನ್ನು ಬಿಜೆಪಿ ನೀಡಿದರೆ ಅವರಿಗೆ ಬೆಂಬಲ ಸೂಚಿಸುವುದಾಗಿ ಹೇಳಿದ್ದರು. 

ಈ ಮೂರು ಪ್ರಕರಣದಲ್ಲಿ ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ ಎಂದು ಪರಿಗಣಿಸಿ ಶಿಸ್ತು ಸಮಿತಿಯಿಂದ ಅವರಿಗೆ ಕಾರಣ ಕೇಳಿ ನೊಟೀಸ್ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com