'ಶಿರಾ ಕಾಂಗ್ರೆಸ್ ಅಭ್ಯರ್ಥಿ ಸೋಲಿಸಲು ಡಿಕೆಶಿ ಮಗ್ನ, ಆರ್ ಆರ್ ನಗರ ಕೈ ಅಭ್ಯರ್ಥಿ ಸೋಲಿಸಲು ಸಿದ್ದರಾಮಯ್ಯ ಪಣ'
ಕಾಂಗ್ರೆಸ್ ಪಕ್ಷದ ಆಂತರಿಕ ಜಗಳದಿಂದ ಬಿಜೆಪಿಗೆ ಪ್ರಯೋಜನವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಲೇವಡಿ ಮಾಡಿದ್ದಾರೆ.
Published: 09th November 2020 08:18 AM | Last Updated: 09th November 2020 12:47 PM | A+A A-

ನಳಿನ್ ಕುಮಾರ್ ಕಟೀಲ್
ತುಮಕೂರು: ಕಾಂಗ್ರೆಸ್ ಪಕ್ಷದ ಆಂತರಿಕ ಜಗಳದಿಂದ ಬಿಜೆಪಿಗೆ ಪ್ರಯೋಜನವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಲೇವಡಿ ಮಾಡಿದ್ದಾರೆ.
ತುಮಕೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಟೀಲ್, ಶಿರಾ ಹಾಗೂ ಆರ್.ಆರ್ ನಗರ ಕ್ಷೇತ್ರ ಸೇರಿದಂತೆ ನಾಲ್ಕು ವಿಧಾನ ಪರಿಷತ್ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ.
ಶಿರಾದಲ್ಲಿ 25 ಸಾವಿರ, ಆರ್.ಆರ್ ನಗರದಲ್ಲಿ 40 ಸಾವಿರ ಅಂತರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಕಾಂಗ್ರೆಸ್ಸಿನ ಒಳಜಗಳ ಬಿಜೆಪಿ ಗೆಲುವಿಗೂ ಕಾರಣವಾಗಲಿದೆ ಎಂದರು.
ರಾಜರಾಜೇಶ್ವರಿ ನಗರವನ್ನ ಡಿಕೆ ಶಿವಕುಮಾರ್ ಉಸ್ತುವಾರಿ ವಹಿಸಿಕೊಂಡಿದ್ದರು. ಶಿರಾವನ್ನು ಸಿದ್ದರಾಮಯ್ಯ ಉಸ್ತುವಾರಿ ವಹಿಸಿಕೊಂಡಿದ್ದರು. ಶಿರಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರ ಸೋಲಿಸುವುದಕ್ಕೆ ಡಿ.ಕೆ ಶಿವಕುಮಾರ್ ತಲೆಬಿಸಿ ಮಾಡಿಕೊಂಡಿದ್ದರು. ಆರ್‍ಆರ್ ನಗರದಲ್ಲಿ ಕಾಂಗ್ರೆಸ್ ಸೋಲಿಸುವುದಕ್ಕೆ ಸಿದ್ದರಾಮಯ್ಯ ತಲೆಬಿಸಿ ಮಾಡಿಕೊಂಡಿದ್ದರು. ಕಾಂಗ್ರೆಸ್ಸಿನ ಆಂತರಿಕ ಜಗಳ ಈಗ ಬಿಜೆಪಿಗೆ ವರವಾಗಲಿದೆ ಎಂದರು.