ಜ್ಯೋತಿಷಿಗಳ ಮಾತು ನಂಬಿ ಕಾಂಗ್ರೆಸ್ ಹೀನಾಯವಾಗಿ ಸೋತಿದೆ: ಡಾ.ಕೆ. ಸುಧಾಕರ್ ವ್ಯಂಗ್ಯ

ಉಪಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಪಕ್ಷದ ಅಭ್ಯರ್ಥಿ ಡಾ. ರಾಜೇಶ್ ಗೌಡ ಹಾಗೂ ಮುನಿರತ್ನ ಅವರಿಗೆ ಮತ್ತು ಅಭೂತಪೂರ್ವ ವಿಜಯ ಸಾಧಿಸಲು ಶ್ರಮಿಸಿದ ಪಕ್ಷದ ಎಲ್ಲಾ ನಾಯಕರಿಗೂ ಮತ್ತು ಕಾರ್ಯಕರ್ತರಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅಭಿನಂದನೆ ಸಲ್ಲಿಸಿದ್ದಾರೆ.
ಕೆ ಸುಧಾಕರ್
ಕೆ ಸುಧಾಕರ್

ಬೆಂಗಳೂರು: ಉಪಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಪಕ್ಷದ ಅಭ್ಯರ್ಥಿ ಡಾ. ರಾಜೇಶ್ ಗೌಡ ಹಾಗೂ ಮುನಿರತ್ನ ಅವರಿಗೆ ಮತ್ತು ಅಭೂತಪೂರ್ವ ವಿಜಯ ಸಾಧಿಸಲು ಶ್ರಮಿಸಿದ ಪಕ್ಷದ ಎಲ್ಲಾ ನಾಯಕರಿಗೂ ಮತ್ತು ಕಾರ್ಯಕರ್ತರಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅಭಿನಂದನೆ ಸಲ್ಲಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಜ್ಯೋತಿಷಿಗಳ ಮಾತು ಕೇಳಿ ಅಭ್ಯರ್ಥಿ ಹಾಕದೆ ಜನರ ನಾಡಿಮಿಡಿತ ಅರಿತು ಅಭ್ಯರ್ಥಿ ಹಾಕಿದ್ದರೆ ಬಹುಶಃ ಕಾಂಗ್ರೆಸ್ ಪಕ್ಷಕ್ಕೆ ಇಷ್ಟು ಹೀನಾಯ ಸೋಲು ಅನುಭವಿಸುವ ಪರಿಸ್ಥಿತಿ ಬರುತ್ತಿರಲಿಲ್ಲವೇನೋ. ಮುನಿರತ್ನ ಅವರ ಜನಪರ ಕಾರ್ಯಗಳು ಆರ್ ಆರ್ ನಗರದ ಜನತೆಯ ಮನ ಗೆದ್ದಿದ್ದು ಹ್ಯಾಟ್ರಿಕ್ ಗೆಲುವು ಸಾಧಿಸಿ ಮತ್ತೊಮ್ಮೆ ತಮ್ಮ ಸಾಮರ್ಥ್ಯ ಸಾಬೀತುಪಡಿಸಿದ್ದಾರೆ ಎಂದಿದ್ದಾರೆ.

ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಮುನಿರತ್ನ ಅವರು ಅಂತಿಮವಾಗಿ 57,672 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ. ಬಿಜಿಪಿಯ ಮುನಿರತ್ನ ಅವರು ಒಟ್ಟು 125665 ಮತಗಳನ್ನು ಪಡೆದರೆ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಅವರು 67993 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ.

ಶಿರಾ ಉಪಚುನಾವಣೆಯಲ್ಲಿ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಮುನಿರತ್ನ ಅವರು ಅಂತಿಮವಾಗಿ 57,672 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ. ಬಿಜಿಪಿಯ ಮುನಿರತ್ನ ಅವರು ಒಟ್ಟು 125665 ಮತಗಳನ್ನು ಪಡೆದರೆ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಅವರು 67993 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com