ಶಿರಾದಲ್ಲೂ ಗೆಲುವಿನ ನಗೆ ಬೀರಿದ ಬಿಜೆಪಿ, 12,418 ಮತಗಳ ಅಂತರದಿಂದ ರಾಜೇಶ್ ಗೌಡ ಗೆಲುವು
ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದ್ದ ಆರ್‌ಆರ್ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಎರಡೂ ಕ್ಷೇತ್ರಗಳಲ್ಲೂ ಕೇಸರಿ ಪಡೆ ಗೆಲುವಿನ ನಗೆ ಬೀರಿದೆ.
Published: 10th November 2020 04:14 PM | Last Updated: 10th November 2020 04:14 PM | A+A A-

ರಾಜೇಶ್ ಗೌಡ
ಬೆಂಗಳೂರು: ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದ್ದ ಆರ್‌ಆರ್ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಎರಡೂ ಕ್ಷೇತ್ರಗಳಲ್ಲೂ ಕೇಸರಿ ಪಡೆ ಗೆಲುವಿನ ನಗೆ ಬೀರಿದೆ.
ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದಲ್ಲಿ ಇದೆ ಮೊದಲ ಬಾರಿಗೆ ಬಿಜೆಪಿ ಗೆಲುವು ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.
ತುಮಕೂರಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಬಿಜೆಪಿಯ ರಾಜೇಶ್ ಗೌಡ ಅವರು 72,739 ಮತಗಳನ್ನ ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರ 60,321 ಮತ್ತು ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ 34,707 ವೋಟ್ಗಳನ್ನ ಪಡೆದಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ 12,418 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಈ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿತ್ತು. ಆದರೆ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಮೊದಲಿನಿಂದಲೂ ಸತತ ಮುನ್ನಡೆ ಸಾಧಿಸುವ ಮೂಲಕ ಗೆಲುವು ಪಡೆದುಕೊಂಡು ಶಿರಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಕಮಲ ಅರಳಿದೆ.