ಚುನಾವಣಾ ದಿನಾಂಕ ಘೋಷಣೆಯಾಗದಿದ್ದರೂ ಬಸವಕಲ್ಯಾಣ ಉಪಚುನಾವಣೆ ಕದನಕ್ಕೆ ಮೂರು ಪಕ್ಷಗಳ ಭರ್ಜರಿ ಸಿದ್ಧತೆ!

ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ಪೂರ್ಣಗೊಂಡು ಫಲಿತಾಂಶ ಘೋಷಣೆಯಾದ ಬಳಿಗ ಇದೀಗ ರಾಜಕೀಯ ಪಕ್ಷಗಳ ಚಿತ್ತ ಬಸವಕಲ್ಯಾಣ ಮತ್ತು ಮಸ್ಕಿ ಕ್ಷೇತ್ರಗಳತ್ತ ಹೊರಳಿದೆ.
ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.
ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.

ಕಲಬುರಗಿ: ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ಪೂರ್ಣಗೊಂಡು ಫಲಿತಾಂಶ ಘೋಷಣೆಯಾದ ಬಳಿಗ ಇದೀಗ ರಾಜಕೀಯ ಪಕ್ಷಗಳ ಚಿತ್ತ ಬಸವಕಲ್ಯಾಣ ತ್ತು ಮಸ್ಕಿ ಕ್ಷೇತ್ರಗಳತ್ತ ಹೊರಳಿದೆ. ಈ ಎರಡೂ ಕ್ಷೇತ್ರಗಳಲ್ಲಿ ನಡೆಯಬೇಕಿರುವ ಉಪಚುನಾವಣೆಗೆ ಅಧಿಸೂಚನೆ ಪ್ರಕಟವಾಗದಿದ್ದರೂ ರಾಜ್ಯದ ಪ್ರಮುಖ ಮೂರು ಪಕ್ಷಗಳು ಪ್ರಚಾರ ಕಾರ್ಯಗಳಿಗೆ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿದೆ. 

ಬಿಜೆಪಿಯ ಗೆಲುವಿನ ಸೂತ್ರಧಾರಿ ಎಂದೇ ಕರೆಯಲ್ಪಡುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶುಕ್ರವಾರ ಬಸವಕಲ್ಯಾಣ ಕ್ಷೇತ್ರಕ್ಕೆ ಭೇಟಿ ನೀಡುತ್ತಿರುವುದು ಇದಕ್ಕೆ ಮತ್ತಷ್ಟು ಪುಷ್ಟಿ ನೀಡುತ್ತಿದೆ. 

ಇದೇ ರೀತಿಯಲ್ಲಿ ಮಸ್ಕಿಗೂ ಅವರು ಆಗಮಿಸಿ ಉಪಕದನದ ಜವಾಬ್ದಾರಿವಹಿಸಬೇಕೆಂಬುದು ಅಲ್ಲಿನ ಮುಖಂಡರ ಮತ್ತು ಕಾರ್ಯಕರ್ತರ ಆಪೇಕ್ಷೆಯಾಗಿದೆ. 

ಕಳೆದ ಬಾರಿ ಸ್ಪರ್ಧಿಸಿ ಬಸವಕಲ್ಯಾಣದಲ್ಲಿ ಸೋಲು ಕಂಡಿದ್ದ ಮಾಜಿ ಶಾಸಕರಾದ ಮಲ್ಲಿಕಾರ್ಜಿನ ಖೂಬಾ ಹಾಗೂ ಸಂಜಯ್ ಪಟವಾರಿಯವರು ಈ ಬಾರಿ ಚುನಾವಣೆಯಲ್ಲಿ ಮತ್ತೆ ಸ್ಪರ್ಧಿಸಲು ಟಿಕೆಟ್ ಪಡೆಯಲು ಸಾಕಷ್ಟು ಪ್ರಯತ್ನಗಳನ್ನು ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. 

ಈ ನಡುವೆ ಮಾಜಿ ಸಚಿವ ದಿವಂಗತ ಗುರುಪದಪ್ಪ ನಾಗಮರಪಲ್ಲಿ ಅವರ ಪುತ್ರ ಸೂರ್ಯಕಾಂತ್ ನಾಗಮರಪಲ್ಲಿ ಅವರೂ ಕೂಡ. ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವಂತೆ ಬಿಜೆಪಿ ನಾಯಕತ್ವದ ಮೇಲೆ ಒತ್ತಡ ಹೇರುತ್ತಿದ್ದಾರೆಂದು ಮೂಲಗಳು ತಿಳಿಸಿವೆ. 

ಇನ್ನು ರಾಜ್ಯ ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಸಹಾನುಭೂತಿ ಮತ ಗಳಿಸಲು ದಿವಂಗತ ನಾರಾಯಣ ರಾವ್ ಅವರ ಪತ್ನಿ ಮಲ್ಲಮ್ಮ ಅಥವಾ ಅವರ ಪುತ್ರ ಗೌತಮ್ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ. 

ಶಾಸಕ ವಿಜಯ್ ಸಿಂಗ್ ಮತ್ತು ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ಬಸವರಾಜ್ ಬುಳ್ಳಾ ಕೂಡ ಕಣಕ್ಕಿಳಿಯಲು ಪ್ರಯತ್ನ ನಡೆಸುತ್ತಿದ್ದಾರೆನ್ನಲಾಗುತ್ತಿದ್ದು, ಈ ಕುರಿತು ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ರಾಜ್ಯ ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಅಧ್ಯಕ್ಷ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಗುರುವಾರ ಸಮಿತಿಯೊಂದನ್ನು ರಚನೆ ಮಾಡಿದ್ದಾರೆಂದು ತಿಳಿದುಬಂದಿದೆ. 

ಈ ಸಮಿತಿಯಲ್ಲಿ ಮಾಜಿ ಸಚಿವರಾದ ರಾಜಶೇಖರ್ ಪಾಟೀಲ್, ಶರಣಪ್ರಕಾಶ್ ಪಾಟೀಲ್ ಮತ್ತು ಪ್ರಿಯಾಂಕ್ ಖಂಡ್ರೆ, ಬೀದರ್ ಶಾಸಕ ರಹೀಂ ಖಾನ್ ಮತ್ತು ಮಾಜಿ ಶಾಸಕ ಬಿ.ಆರ್. ಪಾಟೀಲ್ ಇದ್ದಾರೆಂದು ವರದಿಗಳು ತಿಳಿಸಿವೆ. 

ಈ ನಡುವೆ ಜೆಡಿಎಸ್ ಕೂಡ ಉಪಕದನಕ್ಕೆ ಸಿದ್ಧತೆಗಳನ್ನು ನಡೆಸುತ್ತಿದೆ. ಈಗಾಗಲೇ ಚುನಾವಣಾ ಕಣಕ್ಕಿಳಿಯಲು 8 ಮಂದಿ ಆಕಾಂಕ್ಷಿಗಳು ಮುಂದಾಗಿದ್ದಾರೆಂದು ವರದಿಗಳು ತಿಳಿಸಿವೆ.

ಪಕ್ಷವು ಈ ಬಾರಿ ಹಿರಿಯ ನಾಯಕ ಪಿ ಜಿ ಆರ್ ಸಿಂಧಿಯಾ ಅವರನ್ನು ಸಂಪರ್ಕಿಸದಿರಬಹುದು ಎಂದು ರಾಜ್ಯ ವಿಧಾನಸಭೆಯಲ್ಲಿ ಜೆಡಿಎಸ್ ಉಪನಾಯಕ ಬಂಡೆಪ್ಪ ಕಶೆಂಪೂರ್ ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com