ನವೆಂಬರ್ 20ರ ನಂತರ ಸಂಪುಟ ವಿಸ್ತರಣೆ ಸಾಧ್ಯತೆ!
ಉಪಚುನಾವಣೆ ಪೂರ್ಣಗೊಂಡ ಕೂಡಲೇ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರು ಭರವಸೆ ನೀಡಿದ್ದರು. ಆದರೆ, ಇದೀಗ ನವೆಂಬರ್ 20ಕ್ಕೆ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
Published: 13th November 2020 07:28 AM | Last Updated: 13th November 2020 12:35 PM | A+A A-

ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ
ಬೆಂಗಳೂರು: ಉಪಚುನಾವಣೆ ಪೂರ್ಣಗೊಂಡ ಕೂಡಲೇ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರು ಭರವಸೆ ನೀಡಿದ್ದರು. ಆದರೆ, ಇದೀಗ ನವೆಂಬರ್ 20ಕ್ಕೆ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಬಿಹಾರ ರಾಜ್ಯದಲ್ಲಿ ಸರ್ಕಾರ ರಚನೆ ಹಾಗೂ ದೀಪಾವಳಿ ಹಬ್ಬ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ತಡವಾಗುತ್ತಿದೆ ಎಂದು ಹೇಳಲಾಗುತ್ತಿದೆ.
ಕೇಂದ್ರೀಯ ನಾಯಕರು ಸಂಪುಟ ವಿಸ್ತರಣಗೆ ಗ್ರೀನ್ ಸಿಗ್ನಲ್ ನೀಡುವವರೆಗೂ ಮುಖ್ಯಂತ್ರಿಗಳು ಏನನ್ನೂ ಮಾಡಲು ಸಾಧ್ಯವಿಲ್ಲ. ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರೀಯ ನಾಯಕರನ್ನು ಭೇಟಿ ಮಾಡಿ ಈ ಬಗ್ಗೆ ಅನುಮತಿ ಕೋರಿದ್ದಾರೆ. ಆದರೆ, ನವೆಂಬರ್ 20ರವರೆಗೂ ಅನುಮತಿ ನೀಡಲು ಸಾಧ್ಯವಿಲ್ಲ ಎಂದಿದ್ದು, ಬಿಹಾರ ರಾಜ್ಯದಲ್ಲಿ ಸರ್ಕಾರ ರಚನೆಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆಂದು ಮೂಲಗಳು ತಿಳಿಸಿವೆ.
ಈ ನಡುವೆ ಸಚಿವಾಕಾಂಕ್ಷಿಗಳಾದ ಎಂಎಲ್'ಸಿ ಆರ್.ಶಂಕರ್ ಹಾಗೂ ಹೆಚ್.ವಿಶ್ವನಾಥ್ ಅವರು ಬುಧವಾರವಷ್ಟೇ ದೆಹಲಿಯಿಂದ ರಾಜ್ಯಕ್ಕೆ ಆಗಮಿಸಿತ್ತು, ಅಮಿತ್ ಶಾ ಅವರನ್ನು ಭೇಟಿ ಮಾಡಲು ಸಾಧ್ಯವಾಗಿಲ್ಲ ಎನ್ನಲಾಗಿದೆ. ಬಳಿಕ ವಿಶ್ವನಾಥ್ ಅವರು ಬಂಡಾಯ ಶಾಸಕರ ನಾಯಕ ಜಾರಕಿಹೊಳಿಯವರನ್ನು ಭೇಟಿ ಮಾಡಿದ್ದಾರೆಂದು ತಿಳಿದುಬಂದಿದೆ.
ಈ ನಡುವೆ ಶಾಸಕ ಮುನಿರತ್ನ ಕೂಡ ಜಾರಕಿಹೊಳಿಯವರನ್ನು ಭೇಟಿ ಮಾಡಿದ್ದು, ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ. ಕಾಂಗ್ರೆಸ್ ನಿಂದ ಬಂದ ಬಂಡಾಯಶಾಸಕರು ಆಡಳಿತಾರೂಢ ಬಿಜೆಪಿ ಪಕ್ಷದ ಮೇಲೆ ಒತ್ತಡ ಹೇರುತ್ತಿದ್ದಾರೆಂದು ಹೇಳಲಾಗುತ್ತಿದೆ. ಸಂಪುಟ ವಿಸ್ತರಣೆ ಕುರಿತು ಕೇಂದ್ರೀಯ ನಾಯಕತ್ವ ಮುಖ್ಯಮಂತ್ರಿಗಳ ಕೈಗಳನ್ನು ಕಟ್ಟಿಹಾಕಿದಂತಾಗಿದೆ.
ಕಳೆದ ಬಾರಿ ಕೂಡ ಸಂಪುಟ ವಿಸ್ತರಣೆ ಮಾಡಲು ಯಡಿಯೂರಪ್ಪ ಅವರಿಗೆ ಕೇಂದ್ರೀಯ ನಾಯಕರು ಒಪ್ಪಿಗೆ ನೀಡಿರಲಿಲ್ಲ. ದೆಹಲಿಗೆ ಯಡಿಯೂರಪ್ಪ ಅವರು ಭೇಟಿ ನೀಡಿದಾಗಲೇ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಬಿಜೆಪಿಗೆ ಹೊಸದಾಗಿ ಸೇರ್ಪಡೆಗೊಂಡಿರುವ ಮುನಿರತ್ನ ಹಾಗೂ ಮೂವರು ಎಂಎಲ್'ಸಿಗಳ ಹೊರತಾಗಿ ಉಮೇಶ್ ಕತ್ತಿಯವರಿಗೂ ಸಚಿವ ಸ್ಥಾನ ನೀಡಬೇಕೆಂಬ ಆಗ್ರಹಗಳು ಕೇಳಿ ಬರುತ್ತಿವೆ.