ಉಪಚುನಾವಣೆಯಲ್ಲಿ ನಾವು ಸೋಲಿನ ನಿರೀಕ್ಷೆ ಮಾಡಿರಲಿಲ್ಲ: ಡಿಕೆ.ಶಿವಕುಮಾರ್

ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಜನಾದೇಶವನ್ನು ನಾವು ಒಪ್ಪಿಕೊಳ್ಳುತ್ತೇವೆ. ಆದರೆ, ಚುನಾವಣೆಯಲ್ಲಿ ಈ ಮಟ್ಟದ ಸೋಲನ್ನು ನಿರೀಕ್ಷಿಸಿರಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. 
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಮಂಗಳೂರು: ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಜನಾದೇಶವನ್ನು ನಾವು ಒಪ್ಪಿಕೊಳ್ಳುತ್ತೇವೆ. ಆದರೆ, ಚುನಾವಣೆಯಲ್ಲಿ ಈ ಮಟ್ಟದ ಸೋಲನ್ನು ನಿರೀಕ್ಷಿಸಿರಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. 

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರಿಗೆ ಮಾತೃವಿಯೋಗ ಹಿನ್ನೆಲೆಯಲ್ಲಿ ಬುಧವಾರ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಜೊತೆ ಡಿ.ಕೆ.ಶಿವಕುಮಾರ್ ಅವರು ಕೇರಳದ ಕಣ್ಣೂರಿಗೆ ತೆರಳಿದ್ದರು. 

ಅಲ್ಲಿಂದ ತಡರಾತ್ರಿ ಮಂಗಳೂರಿಗೆ ಆಗಮಿಸಿ ತಂಗಿದ್ದರು. ಮರದುನ ಗುರುವಾರ ಬೆಂಗಳೂರಿಗೆ ಹೊರಡುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಪ್ರಜಾಪ್ರಭುತ್ವದ ಸೋಲು. ಚುನಾವಣೆಯಲ್ಲಿ ಹಣದ ದುರುಪಯೋಗ ನಡೆದಿದ್ದು, ಎಲ್ಲೆಲ್ಲಿ ಹಣ ಹಂಚಿಕೆ ನಡೆದಿದೆ ಎಂಬ ಬಗ್ಗೆ ನಮ್ಮಲ್ಲಿಮಾಹಿತಿ ಇದೆ. ಮತಗಳ ಅಂತರ ವಿಚಾರದಲ್ಲಿ ನಾವು ಸೋಲನ್ನು ಒಪ್ಪಿಕೊಳ್ಳುತ್ತೇವೆ. ವಿದ್ಯಾವಂತರು, ಯವಕರು, ಮಹಿಳೆಯರು ಕಾಂಗ್ರೆಸ್'ಗೆ ಮತಹಾಕಿದ್ದಾರೆಂದು ಹೇಳಿದ್ದಾರೆ. 

ರಾಜರಾಜೇಶ್ವರಿ ನಗರದಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಮತಗಳು ನಮಗೆ ಬರಬೇಕಾಗಿತ್ತು. ಆದರೆ, ಅಲ್ಲಿ ನಾವು ಸೋಲಿನ ನಿರೀಕ್ಷೆ ಮಾಡಿರಲಿಲ್ಲ, ಈಗ ಮತದಾರರು ಹೇಳಿದ್ದು ತಪ್ಪಿದೆಯಾ, ಮತ ಬಿದ್ದೀರೋದು ತಪ್ಪಿದೆಯಾ ಎಂಬ ಬಗ್ಗೆ ತನಿಖೆ ನಡೆಸುತ್ತೇವೆ. ಮತಯಂತ್ರದ ಬಗ್ಗೆ ಸಾಕಷ್ಟು ಜನರು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ನಮ್ಮ ತಜ್ಞರನ್ನು ಕರೆಸಿ ಮಾತುಕತೆ ನಡೆಸುತ್ತೇನೆ. ಇದು ಚುನಾವಣೆಯಲ್ಲಿ ಸೋತ ಕಾರಣಕ್ಕೆ ಅಲ್ಲ. ಯಾವೆಲ್ಲಾ ಬೂತ್ ಗಳಲ್ಲಿ ಕಾಂಗ್ರೆಸ್ ಮತಗಳು ಹೆಚ್ಚಿನ ರೀತಿಯಲ್ಲಿ ಏರುಪೇರಾಗಿದೆಯೋ ಅಂತಹ ಕಡೆಗಳಲ್ಲಿ ಮತಯಂತ್ರದ ಲೋಪ ಕಾರಣವೇ ಎಂಬ ಬಗ್ಗೆ ತನಿಖೆ ನಡೆಸುತ್ತೇವೆಂದು ತಿಳಿಸಿದ್ದಾರೆ. 

ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಗೆ ಸಂಬಂಧಿಸಿ ತಲೆಮರೆಸಿರುವ ಆರೋಪಿ ಸಂಪತ್ ರಾಜ್ ನ್ನು ಕಾಂಗ್ರೆಸ್ ಅಡಗಿಸಿದೆ ಎಂಬ ಆರೋಪದ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಏನು ಗೃಹ ಸಚಿವರಾ.. ಎಂದು ಪ್ರಶ್ನಿಸಿದ್ದಾರೆ. ಹಾಗಾದರೆ ಡಿಕೆಶಿಯನ್ನು ಕೂಡ ಅವರು ಬಂಧಿಸಬಹುದಲ್ಲವೇ? ಈಗಾಗಲೇ ನನ್ನನ್ನು ಬಂಧಿಸಿಯಾಗಿದೆ. ಮತ್ತೆ ಬಂಧಿಸುವುದಾದರೆ ಬಂಧಿಸಲಿ ಎಂದರು ಮತ್ತೆ ನನಗೆ ತೊಂದರೆ ಕೊಡಲು ಏನೇನು ಮಾಡುತ್ತಿದ್ದಾರೆ ಎಂದು ನನಗೆ ಗೊತ್ತಿದೆ. ನನಗೆ ನೋಟಿಸ್ ಕೂಡ ಬರುತ್ತಾ ಇದೆ ಎಂದಿದ್ದಾರೆ. 

ಬಳಿಕ ಇನ್ನು ಹತ್ತಾರು ವರ್ಷ ಬಿಜೆಪಿಯೇ ಅಧಿಕಾರದಲ್ಲಿದೆ ಎಂಬ ಕಟೀಲ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಹೀಗೆ ಹೇಳಿರುವ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅವರ ಹೇಳಿಕೆ 10 ವರ್ಷಕ್ಕೆ ಮಾತ್ರ ಸೀಮಿತವಾಗುವುದು ಬೇಡ, ನೂರು ವರ್ಷ ಅವ ಪಕ್ಷವೇ ಅಧಿಕಾರದಲ್ಲಿರಲಿ. ಮಾನವಜೀವಿ ಕೊನೆಯಾಗುವವರೆಗೂ ಅವರೇ ಅಧಿಕಾರದಲ್ಲಿ ಇರಲಿ ಎಂದು ಟಾಂಗ್ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com