'ಬಂಡಾಯ ಶಾಸಕರ ನಾಯಕ' ರಮೇಶ್ ಜಾರಕಿಹೊಳಿ ಭೇಟಿಯಾದ ಮುನಿರತ್ನ

ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕನಾಗಿ ನೂತನವಾಗಿ ಆಯ್ಕೆಯಾಗಿರುವ ಎನ್.ಮುನಿರತ್ನ ಅವರು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರನ್ನು ಗುರುವಾರ ಭೇಟಿ ಮಾಡಿದ್ದಾರೆ. 
ರಮೇಶ್ ಜಾರಕಿಹೊಳಿ
ರಮೇಶ್ ಜಾರಕಿಹೊಳಿ

ಬೆಂಗಳೂರು: ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕನಾಗಿ ನೂತನವಾಗಿ ಆಯ್ಕೆಯಾಗಿರುವ ಎನ್.ಮುನಿರತ್ನ ಅವರು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರನ್ನು ಗುರುವಾರ ಭೇಟಿ ಮಾಡಿದ್ದಾರೆ. 

ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವುದರಿಂದ ಮತ್ತಷ್ಟು ಶಕ್ತಿ ಹೆಚ್ಚಿಸಿಕೊಂಡಿರುವ ಬಿಜೆಪಿಯಲ್ಲಿ ಮಹತ್ತರ ಬೆಳವಣಿಗೆಗಳು ನಡೆಯುತ್ತಿದೆ. 

ಕೆಲವೇ ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಹೇಳಿದ್ದು, ಸಚಿವ ಸ್ಥಾನ ಆಕಾಂಕ್ಷಿಗಳ ಓಡಾಟ ಹೆಚ್ಚಿಸುವಂತೆ ಮಾಡಿದೆ.

ಈ ಹಿಂದೆ ಸಂಪುಟ ವಿಸ್ತರಣೆ ವಿಚಾರ ಬರುತ್ತಿದ್ದಂತೆ ಆಕಾಂಕ್ಷಿಗಳು, ಸಿಎಂ ಬಿಎಸ್ ವೈ ಮನೆ ಅಥವಾ ಡೆಲ್ಲಿಗೆ ದೌಡಾಯಿಸುತ್ತಿದ್ದರು. ಈ ಮೂಲಕ ಸಚಿವ ಸ್ಥಾನ ರೇಸ್ ನಲ್ಲಿ ತಾವೂ ಇದ್ದೇವೆ ಎಂದು ಗುರುತಿಸಿಕೊಳ್ಳುತ್ತಿದ್ದರು. ಅದರೆ ಇದೀಗ ಹೊಸ ಬಿಜೆಪಿ ಶಾಸಕರಿಗೆ ಹೊಸ ದಾರಿ ಕಂಡುಕೊಂಡಿದ್ದಾರೆ. ಅದುವೇ ಸಚಿವ ರಮೇಶ್ ಜಾರಕಿಹೊಳಿ.

ಹೌದು, ಕಾಂಗ್ರೆಸ್ ನಿಂದ ಬಿಜೆಪಿಗೆ ವಲಸೆ ಬಂದು ಸಚಿವರಾಗಿರುವ ‘ಸಾಹುಕಾರ್’ ರಮೇಶ್ ಜಾರಕಿಹೊಳಿ ಈಗ ಪಕ್ಷದಲ್ಲಿ ಪ್ರಭಾವ ಹೆಚ್ಚಿಸಿಕೊಂಡಿದ್ದಾರೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಶಾಸಕರಾದ ರಾಜುಗೌಡ, ಪೂರ್ಣಿಮಾ ಶ್ರೀನಿವಾಸ್‌, ಶಿವರಾಜ್‌ ಪಾಟೀಲ್‌ ಇತರರು ರಮೇಶ್‌ ಜಾರಕಿಹೊಳಿ ಅವರ ಸದಾಶಿವನಗರ ನಿವಾಸದಲ್ಲಿ ಬುಧವಾರ ಮಧ್ಯಾಹ್ನ ಸಭೆ ನಡೆಸಿದ್ದರು. ಸಭೆ ಬಳಿಕ ರಮೇಶ್‌ ಜಾರಕಿಹೊಳಿ ಸೇರಿದಂತೆ ಇತರರು ಗುರುವಾರ ಸಚಿವ ಸಂಪುಟ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಚರ್ಚಿಸಲಾಗಿದೆ. ಸಚಿವ ಸ್ಥಾನ, ಪುನಾರಚನೆ ಇತರೆ ವಿಚಾರಗಳ ಬಗ್ಗೆ ಚರ್ಚಿಸಿಲ್ಲ ಎಂದು ಹೇಳಿಕೆ ನೀಡಿದ್ದರೂ ದಿಢೀರ್‌ ಭೋಜನಕೂಟಗಳು ಇದೀಗ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗಷ್ಟೇ ಉಪಚುನಾವಣೆಯಲ್ಲಿ ಜಯ ಸಾಧಿಸಿದ ಮುನಿರತ್ನ ಅವರು ಕೂಡಾ ಗುರುವಾರ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದಾರೆ. ಈ ಎಲ್ಲಾ ಬೆಳವಣಿಗೆಗಳು ಕೆಲವರ ಹುಬ್ಬೇರುವಂತೆ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com