ಶಿರಾ ಚುನಾವಣೆಯಿಂದ ಪ್ರೀತಮ್ ಗೌಡಗೆ ಹೊಸ ಜವಾಬ್ದಾರಿ: ಸಿಟಿ ರವಿ ಸ್ಥಾನಕ್ಕೆ ಹಾಸನ ಶಾಸಕ?
ಶಿರಾದಲ್ಲಿ ಬಿಜೆಪಿಯ ಡಾ.ರಾಜೇಶ್ ಗೌಡ ವಿಜಯದ ಮೂಲಕ ಹಾಸನ ಬಿಜೆಪಿ ಶಾಸಕ ಪ್ರೀತಮ್ ಗೌಡ ಅವರ ವೃತ್ತಿಗೆ ಹೊಸ ಹುರುಪು ನೀಡಿದ್ದು. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸಿಟಿ ರವಿ ನೇಮಕಗೊಂಡಿದ್ದು, ಅವರು ನಿರ್ವಹಿಸುತ್ತಿದ್ದ ಪ್ರವಾಸೋದ್ಯಮ ಖಾತೆಯನ್ನು ಪ್ರೀತಂ ಗೌಡ ಅವರಿಗೆ ನೀಡುವ ಸಾಧ್ಯತೆಯಿದೆ.
Published: 13th November 2020 09:00 AM | Last Updated: 13th November 2020 12:36 PM | A+A A-

ಪ್ರೀತಮ್ ಗೌಡ
ಹಾಸನ: ಶಿರಾದಲ್ಲಿ ಬಿಜೆಪಿಯ ಡಾ.ರಾಜೇಶ್ ಗೌಡ ವಿಜಯದ ಮೂಲಕ ಹಾಸನ ಬಿಜೆಪಿ ಶಾಸಕ ಪ್ರೀತಮ್ ಗೌಡ ಅವರ ವೃತ್ತಿಗೆ ಹೊಸ ಹುರುಪು ನೀಡಿದ್ದು. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸಿಟಿ ರವಿ ನೇಮಕಗೊಂಡಿದ್ದು, ಅವರು ನಿರ್ವಹಿಸುತ್ತಿದ್ದ ಪ್ರವಾಸೋದ್ಯಮ ಖಾತೆಯನ್ನು ಪ್ರೀತಂ ಗೌಡ ಅವರಿಗೆ ನೀಡುವ ಸಾಧ್ಯತೆಯಿದೆ.
ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಜೊತೆ ಶಾಸಕ ಪ್ರೀತಂ ಗೌಡ ಶಿರಾ ಮತ್ತು ಕೆಆರ್ ಪೇಟೆ ಉಪ ಚುನಾವಣೆಗಳಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಹೀಗಾಗಿ ಒಕ್ಕಲಿಗ ಖೋಟಾದಲ್ಲಿ ಪ್ರೀತಂ ಗೌಡರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆಯಿದೆ.
ಪ್ರೀತಂ ಗೆ ಸಚಿವ ಸ್ಥಾನ ಕೊಡಿಸಲು ಸಿಎಂ ಪುತ್ರ ವಿಜಯೇಂದ್ರ ಲಾಬಿ ನಡೆಸುತ್ತಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಮತ್ತು ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಬಿಜೆಪಿಯನ್ನು ಸಮರ್ಥಗೊಳಿಸಲು ಪ್ರೀತಂ ಗೌಡ ಅವರಿಗೆ ಸಾಮರ್ಥ್ಯವಿದೆ ಎಂದು ಸಿಎಂ ಯಡಿಯೂರಪ್ಪ ಭಾವಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
39 ವರ್ಷದ ಪ್ರೀತಂ ಗೌಡ ಟ್ರಬಲ್ ಶೂಟರ್ ಕೌಶಲ್ಯ ಹೊಂದಿದ್ದು, ಪಕ್ಷ ಮತ್ತು ಪಕ್ಷದ ಕಾರ್ಯಕರ್ತರ ವಿಶ್ವಾಸ ತೆಗೆದುಕೊಳ್ಳುವಲ್ಲಿ ಸಫಲರಾಗಿದ್ದಾರೆ. ಆದರೆ ತಾವು ಎಂದೂ ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿಲ್ಲ ಎಂದು ಪ್ರೀತಂ ಗೌಡ ತಿಳಿಸಿದ್ದಾರೆ.
ಮುಖ್ಯಮಂತ್ರಿ ತಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡುವ ಮೂಲಕ ನನಗೆ ಬೆಂಬಲ ನೀಡುತ್ತಿದ್ದಾರೆ, ಅವರ ನಿರ್ದೇಶನದಂತೆ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.