ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತವಿಲ್ಲ, ಕಟೀಲ್ ಆದೇಶದಂತೆ ಕೆಲಸ ನಿರ್ವಹಿಸುವೆ: ವಿಜಯೇಂದ್ರ
ಬೀದರ್ ನ ಬಸವ ಕಲ್ಯಾಣ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ತಮಗೆ ಇಷ್ಟವಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಸ್ಪಷ್ಟ ಪಡಿಸಿದ್ದಾರೆ.
Published: 14th November 2020 08:07 AM | Last Updated: 14th November 2020 08:07 AM | A+A A-

ವಿಜಯೇಂದ್ರ
ಕಲಬುರಗಿ: ಬೀದರ್ ನ ಬಸವ ಕಲ್ಯಾಣ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ತಮಗೆ ಇಷ್ಟವಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಸ್ಪಷ್ಟ ಪಡಿಸಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು,ಬೀದರ್ ನ ಬಸವಕಲ್ಯಾಣದ ಟಿಕೆಟ್ ಆಕಾಂಕ್ಷಿ ನಾನಲ್ಲ, ಪಕ್ಷದ ಆಣತಿಯಂತೆ ಕೆಲಸ ಮಾಡುತ್ತೇನೆ ಎಂದು ಸ್ಪಷ್ಟ ಪಡಿಸಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನಿರ್ದೇಶನದಂತೆ ಕೆಲಸ ಮಾಡುವುದಾಗಿ ವಿಜಯೇಂದ್ರ ತಿಳಿಸಿದ್ದಾರೆ. ಮಸ್ಕಿ ಮತ್ತು ಬಸವ ಕಲ್ಯಾಣ ಸೇರಿದಂತೆ ಎಲ್ಲ ಚುನಾವಣೆಗಳು ಕೂಡ ಸವಾಲುಗಳಿಂದ ಕೂಡಿದ್ದಾಗಿರುತ್ತವೆ, ಚುನವಾಣೆಯಲ್ಲಿ ಗೆಲ್ಲಲು ಕೆಲವೊಂದು ತಂತ್ರ ಬಳಸಬೇಕಾಗುತ್ತದೆ ಎಂದರು.
ಶಿರಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಅಧಿಕಾರ ದುರುಪಯೋಗ ಕಾರಣ ಎಂದು ಸಿದ್ದರಾಮಯ್ಯ ನೀಡಿದ ಹೇಳಿಕೆಯನ್ನು ವಿಜಯೇಂದ್ರ ಸಾರಾಸಗಟಾಗಿ ತಿರಸ್ಕರಿಸಿದ್ದಾರೆ. ಶಿರಾದಲ್ಲಿ ತಾವು ಕಾಂಗ್ರೆಸ್ ಮತ್ತು ಜೆಡಿಎಸ್ನ ವೈಫಲ್ಯಗಳನ್ನ ಎತ್ತಿತೋರಿಸಿದ್ದೇವೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆಗಳನ್ನ ಜನರಿಗೆ ತಿಳಿಸಿಕೊಟ್ಟಿದ್ದೇವೆ. ಎಲ್ಲಿಯೂ ಅಧಿಕಾರ ದುರ್ಬಳಕೆ ಮಾಡಿಕೊಂಡಿಲ್ಲ. ಸೋಲಿನ ಹತಾಶೆಯಿಂದ ಸಿದ್ದರಾಮಯ್ಯ ಹೀಗೆಲ್ಲಾ ಮಾತನಾಡುತ್ತಿದ್ದಾರೆ ಎಂದು ಬಿ.ವೈ. ವಿಜಯೇಂದ್ರ ತಿರುಗೇಟು ನೀಡಿದರು.