ಉಪಚುನಾವಣೆ ಫಲಿತಾಂಶದ ಬೆನ್ನಲ್ಲೇ ಬಿಎಸ್ ವೈ- ಕುಮಾರಸ್ವಾಮಿ ಭೇಟಿ: ಕುತೂಹಲ ಕೆರಳಿಸಿದ ಚರ್ಚೆ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಭೇಟಿ ಮಾಡಿದ್ದು, ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
Published: 14th November 2020 08:48 AM | Last Updated: 14th November 2020 12:10 PM | A+A A-

ಕುಮಾರಸ್ವಾಮಿ ಮತ್ತು ಯಡಿಯೂರಪ್ಪ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಭೇಟಿ ಮಾಡಿದ್ದು, ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಸೆಪ್ಟೆಂಬರ್‌ನಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲೆ ಸಿಎಂ ಬಿಎಸ್‌ವೈ ಅವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದರು. ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ಉಭಯರ ನಡುವೆ ಮಾತುಕತೆ ನಡೆದಿತ್ತು. ಅಧಿವೇಶನ ನಡೆಯುವಾಗ ವಿಧಾನಸೌಧದ ಸಿಎಂ ಕೊಠಡಿಯಲ್ಲೂ ಇಬ್ಬರು ನಾಯಕರು ಮುಖಾಮುಖಿಯಾಗಿದ್ದರು.
ಉಪಚುನಾವಣೆ ಬಳಿಕ ಇಬ್ಬರು ನಾಯಕರ ಮುಖಾಮುಖಿಯಾಗಿದ್ದು, ಜತೆಗೆ ಮೇಲುಕೋಟೆ ಶಾಸಕ ಸಿ.ಎಸ್.ಪುಟ್ಟರಾಜು ಜತೆಗಿದ್ದರು. ಇಬ್ಬರೂ ನಾಯಕರು ಸುಮಾರು 15 ನಿಮಿಷಗಳ ಕಾಲ ಮಾತುಕತೆ ನಡೆಸಿದರು ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.