ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ

ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ ರೂ.50 ಕೋಟಿ ಘೋಷಿಸಿದ ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇದಕ್ಕಾಗಿ ರೂ.50 ಕೋಟಿ ಒದಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. 

ಬೆಂಗಳೂರು: ರಾಜ್ಯದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇದಕ್ಕಾಗಿ ರೂ.50 ಕೋಟಿ ಒದಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. 

ಈ ಸಂಬಂಧ ಯಡಿಯೂರಪ್ಪ ಅವರು ರಾಜ್ಯದ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿಯವರಿಗೆ ಟಿಪ್ಪಣಿ ಕಳುಹಿಸಿದ್ದು, ರಾಜ್ಯದಲ್ಲಿ ಮರಾಠ ಜನಾಂಗ ಸಮುದಾಯ ಹೆಚ್ಚಿನ ಸಂಖಅಯೆಯಲ್ಲಿದ್ದು ಮರಾಠ ಸಮುದಾಯ ಆರ್ಥಿಕ ಶೈಕ್ಷಣಿಕ ಸಾಮಾಜಿಕ ಧಾರ್ಮಿಕ ಅಭಿವೃದ್ಧಿಗಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸುವ ಅವಶ್ಯಕತೆ ಇದೆ. ಅದರಂತೆ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಾಗುತ್ತಿದೆ. ಇದಕ್ಕಾಗಿ ರೂ.50 ಕೋಟಿ ಒದಗಿಸಲಾಗುವುದು ಎಂದು ಹೇಳಿದ್ದಾರೆ. 

ಈ ನಡುವೆ ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮೇಲೆ ಕಣ್ಣಿಟ್ಟು ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸುವ ನಿರ್ಧಾರಕ್ಕೆ ಸರ್ಕಾರ ಬಂದಿದೆ ಎಂದು ಹೇಳಲಾಗುತ್ತಿದೆ. 

ಬಸವಕಲ್ಯಾಣ ಕ್ಷೇತ್ರದಲ್ಲಿ ಮರಾಠ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಸಮುದಾಯದ ಮತ ಸೆಳೆಯಲು ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಾಗುತ್ತಿದೆ ಎಂದು ಹೇಳಲಾಗಿದೆ. 

ಈ ಹಿಂದೆ ಶಿರಾ ವಿಧಾನಸಭಾ ಉಪಚುನಾವಣೆ ಮುನ್ನ ಶಿರಾ ಕ್ಷೇತ್ರದಲ್ಲಿ ಹೆಚ್ಚಿರುವ ಕಾಡುಗೊಲ್ಲರ ಮತ ಸೆಳೆಯಲು ರಾಜ್ಯದ ಬಿಜೆಪಿ ಸರ್ಕಾರ ಕಾಡುಗೊಲ್ಲರ ಅಭಿವೃದ್ಧಿ ನಿಗಮದ ಸ್ಥಾಪನೆ ನಿರ್ಧಾರ ಪ್ರಕಟಿಸಿತ್ತು. ಇದೀಗ ಬಸವಕಲ್ಯಾಣ ಕ್ಷೇತ್ರದ ಗೆಲುವಿಗಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಮುಂದಾಗಿದೆ.

Related Stories

No stories found.

Advertisement

X
Kannada Prabha
www.kannadaprabha.com