ಹೆಚ್.ಡಿ.ಕುಮಾರಸ್ವಾಮಿ ಜೊತೆಗಿನ ಭೇಟಿ ಹಿಂದೆ ಯಾವುದೇ ಕಾರಣಗಳಿಲ್ಲ; ಸಿಎಂ ಯಡಿಯೂರಪ್ಪ

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಜೊತೆಗಿನ ಭೇಟಿ ಹಿಂದೆ ಯಾವುದೇ ಕಾರಣಗಳೂ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. 
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಜೊತೆಗಿನ ಭೇಟಿ ಹಿಂದೆ ಯಾವುದೇ ಕಾರಣಗಳೂ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ತಮ್ಮ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನಡುವಿನ ಸಬೆ ಬಗ್ಗೆ ಹೆಚ್ಚಿನ ವ್ಯಾಖ್ಯಾನ ಮಾಡಬೇಡಿ, ಶುಕ್ರವಾರ ಮಂಡ್ಯ ಡಿಸಿಸಿ ಬ್ಯಾಂಕ್ ಚುನಾವಣೆ ಸಂಬಂಧ ಚರ್ಚಿಸಲು ಕುಮಾರಸ್ವಾಮಿ ಭೇಟಿ ಮಾಡಿದ್ದರು. ಇದನ್ನು ಬಿಟ್ಟು ಬೇರೆ ವಿಚಾರ ಚರ್ಚಿಸಿಲ್ಲ. ಅವರನ್ನು ಭೇಟಿಯಾಗಿರುವುದಕ್ಕೆ ಹೆಚ್ಚಿನ ವ್ಯಾಖ್ಯಾನ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ. 

ಇದೇ ವೇಳೆ ನೆರೆ ಪರಿಹಾರ ಬಿಡುಗಡೆ ಕುರಿತಂತೆ ಮಾತನಾಡಿ, ಕೇಂದ್ರವು ರಾಜ್ಯಕ್ಕೆ ನೆರೆ ಪರಿಹಾರವಾಗಿ ರೂ.577 ಕೋಟಿ ಬಿಡುಗಡೆ ಮಾಡಿದೆ. ಇದು ಮೊದಲ ಕಂತು ಅಷ್ಟೇ. ಮುಂದಿನ ದಿನಗಳಲ್ಲಿ ಕೇಂದ್ರದಿಂದ ಇನ್ನಷ್ಟು ನೆರವು ದೊರೆಯುವ ವಿಶ್ವಾಸವಿದೆ. ಕೇಂದ್ರ ಸರ್ಕಾರದಿಂದ ಹೆಚ್ಚಿನ ಪರಿಹಾರ ಪಡೆಯಲು ಎಲ್ಲಾ ರೀತಿಯ ಪ್ರಯತ್ನ ರಾಜ್ಯ ಸರ್ಕಾರ ಮಾಡಲಿದೆ ನಮ್ಮ ನಿರೀಕ್ಷೆಯಂತೆ ಪರಿಹಾರ ದೊರೆಯುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com