ಮಂಡ್ಯ ಡಿಸಿಸಿ ಬ್ಯಾಂಕ್ ಚುನಾವಣೆ: ಕಾಂಗ್ರೆಸ್ ಗೆ ಅಧಿಕಾರ ತಪ್ಪಿಸಲು ಬಿಜೆಪಿ ನೆರವು ಕೋರಿದ ಜೆಡಿಎಸ್

 ನವೆಂಬರ್ 17 ರಂದು ನಡೆಯಲಿರುವ ಮಂಡ್ಯ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರ ಚುನಾವಣೆ ಹಿನ್ನೆಲೆ ಜಾತ್ಯಾತೀತ ಜನತಾ ದಳ (ಜೆಡಿಎಸ್) ತನ್ನ ಹಳೆ ಮಿತ್ರ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತೊಮ್ಮೆ ತಮ್ಮ ಮಿತ್ರತ್ವವನ್ನು ಸ್ಥಾಪಿಸುವ ನಿರೀಕ್ಷೆ ಇದೆ. ಕಾಂಗ್ರೆಸ್ ಅನ್ನು ಅಧ್ಯಕ್ಷ ಸ್ಥಾನದಿಂದ ದೂರವಿಡಲು ಎರಡೂ ಪಕ್ಷಗಳು ಮತ್ತೆ ಒಂದಾಗಲಿದೆ ಎನ್ನಲಾಗಿದೆ,
ಮಂಡ್ಯ ಡಿಸಿಸಿ ಬ್ಯಾಂಕ್ ಚುನಾವಣೆ: ಕಾಂಗ್ರೆಸ್ ಗೆ ಅಧಿಕಾರ ತಪ್ಪಿಸಲು ಬಿಜೆಪಿ ನೆರವು ಕೋರಿದ ಜೆಡಿಎಸ್

ಮೈಸೂರು: ನವೆಂಬರ್ 17 ರಂದು ನಡೆಯಲಿರುವ ಮಂಡ್ಯ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರ ಚುನಾವಣೆ ಹಿನ್ನೆಲೆ ಜಾತ್ಯಾತೀತ ಜನತಾ ದಳ (ಜೆಡಿಎಸ್) ತನ್ನ ಹಳೆ ಮಿತ್ರ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತೊಮ್ಮೆ ತಮ್ಮ ಮಿತ್ರತ್ವವನ್ನು ಸ್ಥಾಪಿಸುವ ನಿರೀಕ್ಷೆ ಇದೆ. ಕಾಂಗ್ರೆಸ್ ಅನ್ನು ಅಧ್ಯಕ್ಷ ಸ್ಥಾನದಿಂದ ದೂರವಿಡಲು ಎರಡೂ ಪಕ್ಷಗಳು ಮತ್ತೆ ಒಂದಾಗಲಿದೆ ಎನ್ನಲಾಗಿದೆ,

ಡಿಸಿಸಿ ಬ್ಯಾಂಕ್ ನಿರ್ದೇಶಕರಲ್ಲಿ ಎಂಟು ಮಂದಿ ಕಾಂಗ್ರೆಸ್ ಮೂಲದವರಾಗಿದ್ದರೆ, ನಾಲ್ವರು ಜೆಡಿಎಸ್ ಮೂಲದವರಾಗಿದ್ದು, ಇದೀಗ ಮೂರು ಸರ್ಕಾರಿ ನಾಮನಿರ್ದೇಶಿತರ ಬೆಂಬಲ ಪಡೆಯಲು ಅವರು ಬಿಜೆ[ಇ ಕದ ತಟ್ಟಿದ್ದಾರೆ. ಇದರೊಂದಿಗೆ, ಜೆಡಿಎಸ್ ಗೆ ಏಳು ನಿರ್ದೇಶಕರು ಸಿಕ್ಕು ಬಹುಮತದ ಕೊರತೆಯಾಗಲಿದೆ. ಆದರೆ ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿರುವ ಒಬ್ಬ ನಿರ್ದೇಶಕ ಇವರ ಬಣಕ್ಕೆ ಸೇರಿಕೊಳ್ಳುವ ಸಾಧ್ಯತೆ ಇದೆ.

ಇನ್ನು ಈ ಬೆಳವಣಿಗೆಗಳೀಂಡ ಆತಂಕಗೊಂಡಿರುವ ಸ್ಥಳೀಯ ಕಾಂಗ್ರೆಸ್ ನಾಯಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಹಾಯ ಕೋರಿದ್ದಾರೆ. . ತನ್ನ ನಿಷ್ಠೆಯನ್ನು ಜೆಡಿಎಸ್-ಬಿಜೆಪಿಗೆ ಬದಲಾಯಿಸಲು ಬಯಸಿದ್ದ ನಿರ್ದೇಶಕರನ್ನು ಸಿದ್ದರಾಮಯ್ಯ ಈಗಾಗಲೇ ಸಂಪರ್ಕಿಸಿ ಕಾಂಗ್ರೆಸ್ ಬೆಂಬಲಿಸುವಂತೆ ಕೇಳಿಕೊಂಡಿದ್ದಾರೆ.

ಜೆಡಿಎಸ್ ನಾಯಕರು ಸರ್ಕಾರದ ನಾಮನಿರ್ದೇಶಿತರ ಬೆಂಬಲ ಕೋರಿ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರನ್ನು ಸಂಪರ್ಕಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇಲ್ಲಿ ಗೆಲುವು ಸಾಧಿಸುವುದರೊಂದಿಗೆ ಶಿವಕುಮಾರ್ ರಾಜಕೀಯ ಸ್ಥಾನಮಾನವನ್ನು ಗಟ್ಟಿಮಾಡಿಕೊಳ್ಳದಂತೆ ತಡೆಯುವುದು ಜೆಡಿಎಸ್‌ನ ಯೋಜನೆಯಾಗಿದೆ. ಜೆಡಿಎಸ್ ನಾಯಕರು ಮತ್ತು ಶಿವಕುಮಾರ್ ಇಬ್ಬರೂ ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿದ್ದು ಆ ಸಮುದಾಯದ ಮತದಾರರ ನೆಲೆಯನ್ನೇ ಗುರಿಯಾಗಿಸಿಕೊಂಡಿದ್ದಾರೆ. . ಈ ನಿಟ್ಟಿನಲ್ಲಿ ಡಿಸಿಸಿ ಬ್ಯಾಂಕಿನಲ್ಲಿ ಅಧ್ಯಕ್ಷ ಸ್ಥಾನವನ್ನು ಗೆಲ್ಲುವುದನ್ನು ತಡೆಯಲು ಪಕ್ಷವು ಪ್ರಯತ್ನಿಸುತ್ತಿದೆ ಎಂದು ಮಾಜಿ ಸಚಿವ ಮತ್ತು ಜೆಡಿಎಸ್ ನಾಯಕ ಎನ್ ಚೆಲುವರಾಯಸ್ವಾಮಿ ಖಚಿತಪಡಿಸಿದ್ದಾರೆ. ಆದರೆ ಕಳೆದ ವರ್ಷಕೆಆರ್ ಪೇಟೆ ಉಪಚುನಾವಣೆಯಲ್ಲಿಬಿಜೆಪಿಗೆ ತೀವ್ರ ವಿರೋಧ ತೋರಿದ್ದ ಕಾರಣ ಜೆಡಿಎಸ್ ಜೊತೆ ಮೈತ್ರಿಗೆ ಕೆಲವು ಬಿಜೆಪಿ ನಾಯಕರುವಿರೋಧ ವ್ಯಕ್ತಪಡಿಸಿದ್ದಾರೆ. ಅಂತಹ ಯಾವುದೇ ಮೈತ್ರಿಯು ಶೀಘ್ರದಲ್ಲೇ ನಡೆಯಲಿರುವ ಪಂಚಾಯತ್ ಚುನಾವಣೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ವಾದಿಸಿದ್ದಾರೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಎರಡರಿಂದಲೂ ಸಮಾನ ಅಂತರ ಕಾಪಾಡಿಕೊಳ್ಳುವುದು ಈ ಒಕ್ಕಲಿಗ ಪ್ರಾಬಲ್ಯದ ಜೆಡಿಎಸ್ ಭದ್ರಕೋಟೆಯಲ್ಲಿ ಬಿಜೆಪಿಗೆ ತನ್ನ ನೆಲೆಯನ್ನು ವಿಸ್ತರಿಸಲು ಸಹಾಯ ಮಾಡುತ್ತದೆ ಎಂದು ಅವರು ಭಾವಿಸುತ್ತಾರೆ."ನಾವು ನಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದೇವೆ. ಆದರೆ ಪಕ್ಷವು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ" ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com