ಯಡಿಯೂರಪ್ಪ ರಾಜಕೀಯ ಸಲಹೆಗಾರ ಎಂ.ಬಿ ಮರಮಕಲ್ ನೇಮಕ ರದ್ದು: ಸಿಎಂ ಪುತ್ರನ ಕೈವಾಡ?

ಕಳೆದ ಒಂದು ವರ್ಷದಿಂದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ರಾಜಕೀಯ ಸಲಹೆಗಾರರಾಗಿದ್ದ ಎಂ.ಬಿ.ಮರಮಕಲ್‌ ಅವರ ನೇಮಕಾತಿ ಆದೇಶವನ್ನು ರದ್ದುಪಡಿಸಿದ್ದು ಅಚ್ಚರಿ ಮೂಡಿಸಿದೆ

Published: 16th November 2020 08:12 AM  |   Last Updated: 16th November 2020 08:12 AM   |  A+A-


BS Yediyurappa and MB Maramkal

ಯಡಿಯೂರಪ್ಪ ಮತ್ತು ಮರಮಕಲ್

Posted By : Shilpa D
Source : Online Desk

ಬೆಂಗಳೂರು: ಕಳೆದ ಒಂದು ವರ್ಷದಿಂದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ರಾಜಕೀಯ ಸಲಹೆಗಾರರಾಗಿದ್ದ ಎಂ.ಬಿ.ಮರಮಕಲ್‌ ಅವರ ನೇಮಕಾತಿ ಆದೇಶವನ್ನು ರದ್ದುಪಡಿಸಿದ್ದು ಅಚ್ಚರಿ ಮೂಡಿಸಿದೆ.

ಜೆಡಿಎಸ್ ಶಾಸಕ ನಾಗಣ್ಣ ಕಂದಕೂರ್ ಅವರ ಪುತ್ರ ಶರಣ್ ಕಂದಕೂರ್ ಮತ್ತು ಶಿವನಗೌಡ ನಾಯಕ್ ನಡುವಿನ ವಿವಾದಾತ್ಮಕ ಸಭೆಯಲ್ಲಿ ಯಡಿಯೂರಪ್ಪ ಅವರೊಂದಿಗೆ ಎಂ.ಬಿ ಮರಮಕಲ್ ಮೊದಲು ಸಾರ್ವಜನಿಕವಾಗಿ ಕಾಣಿಸಿಕೊಂಡರು.

ಪತ್ರಕರ್ತರಾಗಿ ನಿವೃತ್ತರಾಗಿದ್ದ ಮರಮಕಲ್ ಅವರು, ಬಳಿಕ ಯಡಿಯೂರಪ್ಪನವರ ಜತೆ ಗುರುತಿಸಿಕೊಂಡಿದ್ದರು. ಮೈತ್ರಿ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್‌–ಜೆಡಿಎಸ್ ಶಾಸಕರನ್ನು ಸೆಳೆಯುವಲ್ಲಿ ಮರಮಕಲ್ ಪ್ರಮುಖ ಪಾತ್ರ ವಹಿಸಿದ್ದರು ಎಂದು ಜೆಡಿಎಸ್ ಶಾಸಕರು ದೂರಿದ್ದರು. ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ ಮರಮಕಲ್ ಅವರನ್ನು ರಾಜಕೀಯ ಸಲಹೆಗಾರರಾಗಿ ನೇಮಕ ಮಾಡಲಾಗಿತ್ತು.

2019ರ ಅಕ್ಟೋಬರ್‌ನಲ್ಲಿ ಮರಮಕಲ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿತ್ತಲ್ಲದೇ, ರಾಜ್ಯ ಸಚಿವ ಶ್ರೇಣಿಯ ಸ್ಥಾನ ಹಾಗೂ ಸೌಲಭ್ಯವನ್ನೂ ನೀಡಲಾಗಿತ್ತು. ಇದೇ 13ರಿಂದ ಅನ್ವಯವಾಗುವಂತೆ ನೇಮಕಾತಿ ಆದೇಶ ರದ್ದು ಮಾಡಲಾಗಿದೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.

ಮರಮಕಲ್ ನೇಮಕ ರದ್ದು ಪಡಿಸಿರುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಅವರ ಕುಟುಂಬಸ್ಥರ ಕೈವಾಡವಿದೆ ಎಂದು ಸಂಶಯ ವ್ಯಕ್ತ ಪಡಿಸಲಾಗಿದೆ.

Stay up to date on all the latest ರಾಜಕೀಯ news
Poll
representation purpose only

ಕೋವಿಡ್ ಲಸಿಕೆ ವಿತರಿಸುವಲ್ಲಿ ಮೋದಿ ಸರ್ಕಾರ ಪಕ್ಷಪಾತ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನೀವು ಏನಂತೀರಿ?


Result
ಇಲ್ಲ, ಇದು ಅಸಂಬದ್ಧ ಆರೋಪ
ಹೌದು, ಪಕ್ಷಪಾತ ಮಾಡುತ್ತಿದೆ
flipboard facebook twitter whatsapp