ದಲಿತ ಶಾಸಕನಿಗೆ ನಿಮ್ಮ ಪಕ್ಷದಲ್ಲಿ ಬೆಲೆ ಇಲ್ಲವೇ: ಕಾಂಗ್ರೆಸ್‌ಗೆ ಬಿಜೆಪಿ ಪ್ರಶ್ನೆ

ಡಿ.ಜೆ.ಹಳ್ಳಿ ಕೆ.ಜಿ.ಹಳ್ಳಿ ಗಲಭೆ ಆರೋಪಿ ಮಾಜಿ ಮೇಯರ್ ಸಂಪತ್‌ ರಾಜ್ ಬಂಧನವಾಗುತ್ತಿದ್ದಂತೆ ಬಿಜೆಪಿ, ರಾಜ್ಯ ಕಾಂಗ್ರೆಸ್ ವಿರುದ್ಧ ಹರಿಹಾಯಲಾರಂಭಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಡಿ.ಜೆ.ಹಳ್ಳಿ ಕೆ. ಜಿ.ಹಳ್ಳಿ ಗಲಭೆ ಆರೋಪಿ ಮಾಜಿ ಮೇಯರ್ ಸಂಪತ್‌ ರಾಜ್ ಬಂಧನವಾಗುತ್ತಿದ್ದಂತೆ ಬಿಜೆಪಿ, ರಾಜ್ಯ ಕಾಂಗ್ರೆಸ್ ವಿರುದ್ಧ ಹರಿಹಾಯಲಾರಂಭಿಸಿದೆ.

ಸಂಪತ್ ರಾಜ್ ಬಂಧನದ ಬಳಿಕ ಡಿಕೆಶಿಯವರೇ ಈಗಲಾದರೂ ನನ್ನ ಪರವಾಗಿ ನಿಲ್ಲಿ ಎಂಬ ಅಖಂಡ ಶ್ರೀನಿವಾಸ ಮೂರ್ತಿಯವರ ಹೇಳಿಕೆ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ದಲಿತ ಶಾಸಕನಿಗೆ ನಿಮ್ಮ ಪಕ್ಷದಲ್ಲಿ ಬೆಲೆ ಇಲ್ಲವೇ? ಎಂದು ಪ್ರಶ್ನಿಸಿದೆ. 

ಸಂಪರ್ ರಾಜ್ ಬಂಧನದ ಬಳಿಕ ಹೇಳಿಕೆ ನೀಡಿರುವ ಅಖಂಡ ಶ್ರೀನಿವಾಸ್ ಮೂರ್ತಿಯವರು ಡಿಕೆಶಿಯವರೇ ಈಗಲಾದರೂ ನನ್ನ ಪರವಾಗಿ ನಿಲ್ಲಿ ಎಂದು ಹೇಳುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಏನಾಗುತ್ತಿದೆ. ಒಬ್ಬ ದಲಿತ ಶಾಸಕನಿಗೆ ನಿಮ್ಮ ಪಕ್ಷದಲೇಲಿ ಬೆಲೆ ಇಲ್ಲವೇ? ಎಂದು ಪ್ರಶ್ನಿಸಿದೆ. ಅಲ್ಲದೆ, ಹಿರಿಯ ದಲಿತ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಪರಮೇಶ್ವರ್ ಅವರ ಸೋಲುಗಳ ಹಿಂದೆ ಕಾಂಗ್ರೆಸ್ಸಿನ ದಲಿತ ವಿರೋಧಿ ನೀತಿದೆ ಎಂದು ಆರೋಪಿಸಿದೆ. 

ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಕಾಲದಿಂದಲೇ ರಾಷ್ಟ್ರೀಯ ಕಾಂಗ್ರೆಸ್ ದಲಿತರ ವಿರೋಧಿ ನಿಲುವುಗಳನ್ನು ತೆಗೆದುಕೊಳ್ಳುತ್ತಿದೆ. ರಾಜ್ಯದಲ್ಲಿಯೂ ಅದರ ಮುಂದುವರೆದ ಭಾಗಗಳನ್ನು‌ ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್‌ ಶಾಸಕಾಂಗ‌ ಪಕ್ಷದ ನಾಯಕ ಸಿದ್ದರಾಮಯ್ಯ ಮಾಡಿ ತೋರಿಸಿದ್ದಾರೆಂದು ಕುಟುಕಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com