ಬೆಳಗಾವಿ ಲೋಕಸಭೆ ಉಪಚುನಾವಣೆ: ಅಭ್ಯರ್ಥಿ ಆಯ್ಕೆಗೆ ಕಾಂಗ್ರೆಸ್ ಸಮಿತಿ 

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಪಕ್ಷದ ಅಭ್ಯರ್ಥಿ ಆಯ್ಕೆ ಸಂಬಂಧ 11 ಸದಸ್ಯರುಳ್ಳ ಸಮಿತಿ ರಚಿಸಲಾಗಿದೆ. ಮುಂಬರುವ ಬೆಳಗಾವಿ ಲೋಕಸಭೆ ಚುನಾವಣೆಗೆ ಆಕಾಂಕ್ಷಿಗಳ ಪಟ್ಟಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ನಡೆದ ಕೆಪಿಸಿಸಿ ಸಭೆಯಲ್ಲಿ ಸಮಿತಿ ರಚಿಸಲಾಗಿದೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಪಕ್ಷದ ಅಭ್ಯರ್ಥಿ ಆಯ್ಕೆ ಸಂಬಂಧ 11 ಸದಸ್ಯರುಳ್ಳ ಸಮಿತಿ ರಚಿಸಲಾಗಿದೆ. ಮುಂಬರುವ ಬೆಳಗಾವಿ ಲೋಕಸಭೆ ಚುನಾವಣೆಗೆ ಆಕಾಂಕ್ಷಿಗಳ ಪಟ್ಟಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ನಡೆದ ಕೆಪಿಸಿಸಿ ಸಭೆಯಲ್ಲಿ ಸಮಿತಿ ರಚಿಸಲಾಗಿದೆ.

‘ಸಮಿತಿಗೆ ಅಧ್ಯಕ್ಷರಾಗಿ ಶಾಸಕ ಎಂ.ಬಿ ಪಾಟೀಲ ಅವರನ್ನು ನೇಮಿಸಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರನ್ನು ಸಂಯೋಜಕರಾಗಿದ್ದಾರೆ. ಎಲ್. ಹನುಮಂತಯ್ಯ, ಎಚ್.ಎಂ. ರೇವಣ್ಣ, ವೀರಕುಮಾರ ಎ.ಪಾಟೀಲ, ಅಜಯಕುಮಾರ್ ಸರ್‌ನಾಯಕ್, ಅನಿಲ್ ಲಾಡ್, ಜಿ.ಎಸ್. ಪಾಟೀಲ, ಬಸವರಾಜ ಶಿವಣ್ಣನವರ, ಶ್ರೀನಿವಾಸ ವಿ. ಮಾನೆ, ನಾಗರಾಜ್ ಚೆಬ್ಬಿ ಅವರನ್ನು ಸದಸ್ಯರನ್ನಾಗಿ ಆಯ್ಕೆ ಮಾಡಿದ್ದಾರೆ. 

ಲಕ್ಷ್ಮಿ ಹೆಬ್ಬಾಳ್ಕರ್, ಪ್ರಕಾಶ್ ಹುಕ್ಕೇರಿ, ಅಶೋಕ್ ಪಟ್ಟಣ ಹಾಗೂ ವಿಎಸ್ ಸಾಧುನವರ್ ಮೆಚ್ಚಿನ ಅಭ್ಯರ್ಥಿಗಳಾಗಿದ್ದಾರೆ, ಆದರೆ ಒಂದು ವರ್ಗದ ಯುವ ಸಮುದಾಯ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರ ಪರವಾಗಿದ್ದಾರೆ.

ಆದರೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಪ್ರಕಟಿಸುವವರೆಗೂ ಕಾಂಗ್ರೆಸ್ ತನ್ನ ಅಭ್ಯರ್ಥಿ ಹೆಸರು ಪ್ರಕಟಿಸದಿರಲು ನಿರ್ಧರಿಸಲಾಗಿದೆ ಎಂದಪು ಪಕ್ಷದ ಮೂಲಗಳು ತಿಳಿಸಿವೆ.  ಕಳೆದ ಬಾರಿ ಬಿಜೆಪಿ ಸೋಲಿಸಲು ಜಾರಕಿಹೊಳಿ ಸಹೋದರರು ಬೆಳಗಾವಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಭಾಗದಲ್ಲಿ ಜಾರಕಿಹೊಳಿ ಸಹೋದರರ ಪ್ರಾಬಲ್ಯ ಹೆಚ್ಚಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com