ಬಿಜೆಪಿಯ ಸರ್ಕಸ್ ನಿಂದ ರಾಜ್ಯದ ಆಡಳಿತ ದಿಕ್ಕೆಟ್ಟು ಹೋಗಿದೆ: ಸಿದ್ದರಾಮಯ್ಯ

ಬಿಜೆಪಿಯ ಸರ್ಕಸ್ ನಿಂದ ರಾಜ್ಯದ ಆಡಳಿತ ದಿಕ್ಕೆಟ್ಟು ಹೋಗಿದ್ದು, ಶೀಘ್ರವಾಗಿ ಏನಾದರೂ ನಿರ್ಧಾರ ಕೈಗೊಂಡು ಈಗಿನ ಬಿಕ್ಕಟ್ಟು ಕೊನೆಗೊಳಿಸಿಸ ಎಂದು ಸಿದ್ದರಾಮಯ್ಯ ಆಡಳಿತಾ ರೂಢ ಬಿಜೆಪಿಯನ್ನು ಟೀಕಿಸಿದ್ದಾರೆ.

Published: 21st November 2020 12:09 AM  |   Last Updated: 21st November 2020 12:19 PM   |  A+A-


Siddaramaiah

ಸಿದ್ದರಾಮಯ್ಯ

Posted By : Srinivasamurthy VN
Source : UNI

ಬೆಂಗಳೂರು: ಬಿಜೆಪಿಯ ಸರ್ಕಸ್ ನಿಂದ ರಾಜ್ಯದ ಆಡಳಿತ ದಿಕ್ಕೆಟ್ಟು ಹೋಗಿದ್ದು, ಶೀಘ್ರವಾಗಿ ಏನಾದರೂ ನಿರ್ಧಾರ ಕೈಗೊಂಡು ಈಗಿನ ಬಿಕ್ಕಟ್ಟು ಕೊನೆಗೊಳಿಸಿಸ ಎಂದು ಸಿದ್ದರಾಮಯ್ಯ ಆಡಳಿತಾ ರೂಢ ಬಿಜೆಪಿಯನ್ನು ಟೀಕಿಸಿದ್ದಾರೆ.

 ಹಿಂದೆಲ್ಲ ಬಿಜೆಪಿ ನಾಯಕರು, ‘ಹೈಕಮಾಂಡ್ ಸಂಸ್ಕೃತಿ’ ಮೂಲನಿವಾಸಿಗಳು-ವಲಸೆಗಾರರು’ ‘ಕುಟುಂಬ ರಾಜಕಾರಣ’ ಎಂಬೀತ್ಯಾದಿ ಪದಗಳನ್ನು ಜೋಡಿಸಿ ಹಗಲು ರಾತ್ರಿ ನಮ್ಮ ವಿರುದ್ಧ ಟೀಕೆ ಮಾಡುತ್ತಿದ್ದರು. ಈಗ ಅದೇ ಆರೋಪಗಳನ್ನು ಪರಸ್ಪರ ಮಾಡ್ಕೊಂಡು ಬೆತ್ತಲಾಗುತ್ತಿದ್ದಾರೆ ಎಂದು ವಿರೋಧ ಪಕ್ಷದ  ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಈ ಬಗ್ಗ ಟ್ವೀಟ್ ಮಾಡಿರುವ ಅವರು, ಸಂಪುಟ ವಿಸ್ತರಣೆಯೋ, ಪುನಾರಚನೆಯೋ, ಮುಖ್ಯಮಂತ್ರಿ ಬದಲಾವಣೆಯೋ-ಇವೆಲ್ಲ ನಿಮ್ಮ ಪಕ್ಷದ ಹಣೆಬರಹ. ಈ ಸರ್ಕಸ್ ನಲ್ಲಿ ರಾಜ್ಯದ ಆಡಳಿತ ದಿಕ್ಕೆಟ್ಟು ಹೋಗಿದೆ. ಶೀಘ್ರವಾಗಿ ಏನಾದರೂ ನಿರ್ಧಾರ ಕೈಗೊಂಡು ಈಗಿನ ಬಿಕ್ಕಟ್ಟು  ಕೊನೆಗೊಳಿಸಿ, ಆಡಳಿತದ ಕಡೆ ಗಮನಕೊಟ್ಟು ರಾಜ್ಯವನ್ನು ಉಳಿಸಿ ಎಂದು ಒತ್ತಾಯಿಸಿದ್ದಾರೆ.

'ಹಿಂದೆಲ್ಲ ಬಿಜೆಪಿ  ನಾಯಕರು,‘ಹೈಕಮಾಂಡ್ ಸಂಸ್ಕೃತಿ’ ಮೂಲನಿವಾಸಿಗಳು-ವಲಸೆಗಾರರು’ ‘ಕುಟುಂಬ ರಾಜಕಾರಣ’ ಎಂಬೀತ್ಯಾದಿ ಪದಗಳನ್ನು ಜೋಡಿಸಿ ಹಗಲು ರಾತ್ರಿ  ನಮ್ಮ ವಿರುದ್ಧ ಟೀಕೆ ಮಾಡುತ್ತಿದ್ದರು. ಈಗ  ಅದೇ ಆರೋಪಗಳನ್ನು  ಪರಸ್ಪರ ಮಾಡ್ಕೊಂಡು ಬೆತ್ತಲಾಗುತ್ತಿದ್ದಾರೆ. ಸಂಪುಟ ವಿಸ್ತರಣೆಯೋ,  ಪುನಾರಚನೆಯೋ, ಮುಖ್ಯಮಂತ್ರಿ  ಬದಲಾವಣೆಯೋ -ಇವೆಲ್ಲ ನಿಮ್ಮ ಪಕ್ಷದ ಹಣೆಬರಹ. ಈ ಸರ್ಕಸ್ ನಲ್ಲಿ ರಾಜ್ಯದ ಆಡಳಿತ ದಿಕ್ಕೆಟ್ಟು ಹೋಗಿದೆ. ಶೀಘ್ರವಾಗಿ ಏನಾದರೂ ನಿರ್ಧಾರ ಕೈಗೊಂಡು ಈಗಿನ ಬಿಕ್ಕಟ್ಟು ಕೊನೆಗೊಳಿಸಿ, ಆಡಳಿತದ ಕಡೆ ಗಮನಕೊಟ್ಟು ರಾಜ್ಯವನ್ನು ಉಳಿಸಿ ಎಂದು ಟ್ವೀಟ್ ಮಾಡಿದ್ದಾರೆ.

Stay up to date on all the latest ರಾಜಕೀಯ news
Poll
RBI

ಕಾರ್ಪೊರೇಟ್‌ ಕಂಪನಿಗಳಿಗೆ ಬ್ಯಾಂಕ್‌ ಆರಂಭಿಸಲು ಅನುಮತಿಸುವಂತೆ ಕೇಂದ್ರ ಸರ್ಕಾರಕ್ಕೆ ಆರ್ ಬಿಐ ನೀಡಿರುವ ಸಲಹೆಯನ್ನು ಸ್ವಾಗತಿಸುತ್ತೀರಾ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp