ಸಚಿವ ಆಕಾಂಕ್ಷಿಗಳಿಗೆ ಎರಡ್ಮೂರು ದಿನದಲ್ಲಿ ಸಿಹಿ ಸುದ್ದಿ: ರಮೇಶ್ ಜಾರಕಿಹೊಳಿ

ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡುವುದು ಮುಖ್ಯಮಂತ್ರಿಯ ಪರಮಾಧಿಕಾರ, ಆದಷ್ಟು ಬೇಗ ವಿಸ್ತರಣೆ ಮಾಡುವಂತೆ ಮನವಿ ಮಾಡಿದ್ದೇವೆ. ಎರಡು ಮೂರು ದಿನದಲ್ಲಿ ಸಿಹಿ ಸುದ್ದಿ ಬರಬಹುದು ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

Published: 21st November 2020 04:40 PM  |   Last Updated: 21st November 2020 04:40 PM   |  A+A-


Ramesh jarkiholi

ರಮೇಶ್ ಜಾರಕಿಹೊಳಿ

Posted By : Lingaraj Badiger
Source : UNI

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡುವುದು ಮುಖ್ಯಮಂತ್ರಿಯ ಪರಮಾಧಿಕಾರ, ಆದಷ್ಟು ಬೇಗ ವಿಸ್ತರಣೆ ಮಾಡುವಂತೆ ಮನವಿ ಮಾಡಿದ್ದೇವೆ. ಎರಡು ಮೂರು ದಿನದಲ್ಲಿ ಸಿಹಿ ಸುದ್ದಿ ಬರಬಹುದು ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ದೆಹಲಿಗೆ ತೆರಳುವ ಬಗ್ಗೆ ಮಾಹಿತಿ ಇರಲಿಲ್ಲ. ತಾವು ಇಲಾಖಾ ವಿಷಯ ಕುರಿತು ಕೇಂದ್ರ ಸಚಿವರ ಜೊತೆ ಚರ್ಚಿಸಲು ತೆರಳಿದ್ದೆ. ಶಾಸಕರಾದವರಿಗೆ ಸಚಿವರಾಗಬೇಕೆಂಬ ಆಸೆ ಇದ್ದೇ ಇರುತ್ತದೆ. ತಾವು ಯಾರ ಪರವಾಗಿಯೂ ಒತ್ತಡ ಹೇರುವ ಪ್ರಯತ್ನ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿಗಳು ನಮಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ ಎನ್ನುವ ವಿಶ್ವಾಸ ಇದೆ. ಮುಖ್ಯಮಂತ್ರಿಗಳು ಈಗಾಗಲೇ ಹೈಕಮಾಂಡ್ ಜೊತೆ ಮಾತನಾಡಿದ್ದಾರೆ. ಇನ್ನೆರುಡು ದಿನದಲ್ಲಿ ಸಿಹಿ ಸುದ್ದಿ ಬರುವ ವಿಶ್ವಾಸ ಇದೆ ಎಂದು ಹೇಳಿದರು.

ರಮೇಶ್ ಜಾರಕಿಹೊಳಿ ಅವರು ಮೂರು ದಿನಗಳಿಂದ ದೆಹಲಿಯಲ್ಲಿಯೇ ಇದ್ದು, ಶುಕ್ರವಾರ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿ, ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ರಮೇಶ್ ಜಾರಕಿಹೊಳಿ, ಸಂತೋಷ್ ಅವರನ್ನು ಭೇಟಿ ಮಾಡಿರುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಚೆರ್ಚೆಗೆ ಗ್ರಾಸವಾಗಿದೆ.

Stay up to date on all the latest ರಾಜಕೀಯ news
Poll
RBI

ಕಾರ್ಪೊರೇಟ್‌ ಕಂಪನಿಗಳಿಗೆ ಬ್ಯಾಂಕ್‌ ಆರಂಭಿಸಲು ಅನುಮತಿಸುವಂತೆ ಕೇಂದ್ರ ಸರ್ಕಾರಕ್ಕೆ ಆರ್ ಬಿಐ ನೀಡಿರುವ ಸಲಹೆಯನ್ನು ಸ್ವಾಗತಿಸುತ್ತೀರಾ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp