ಎರಡು ಕ್ಷೇತ್ರಗಳ ಉಪ ಚುನಾವಣೆ, ಅಭ್ಯರ್ಥಿ ಕಣಕ್ಕಿಳಿಸುವುದು ವ್ಯರ್ಥ- ಎಚ್ ಡಿ ಕುಮಾರಸ್ವಾಮಿ
ಮಸ್ಕಿ ಹಾಗೂ ಬಸವ ಕಲ್ಯಾಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದು ವ್ಯರ್ಥ. ಆದರೂ ಆ ಎರಡೂ ಕ್ಷೇತ್ರಗಳ ಮುಖಂಡರು, ಕಾರ್ಯಕರ್ತರ ಜೊತೆಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರು ಆಗಿರುವ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.
Published: 22nd November 2020 03:25 PM | Last Updated: 22nd November 2020 03:27 PM | A+A A-

ಎಚ್. ಡಿ. ಕುಮಾರಸ್ವಾಮಿ
ಬೆಂಗಳೂರು: ಮಸ್ಕಿ ಹಾಗೂ ಬಸವ ಕಲ್ಯಾಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದು ವ್ಯರ್ಥ. ಆದರೂ ಆ ಎರಡೂ ಕ್ಷೇತ್ರಗಳ ಮುಖಂಡರು, ಕಾರ್ಯಕರ್ತರ ಜೊತೆಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರು ಆಗಿರುವ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮಲ್ಲಸಂದ್ರ ವಾರ್ಡ್ ಕಚೇರಿ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಮಂಡ್ಯ, ಶಿರಾ ಮತ್ತು ರಾಜರಾಜೇಶ್ವರಿ ನಗರದ ಉಪ ಚುನಾವಣೆಗಳ ಸೋಲಿನ ಬಳಿಕ ನಮಗೆ ಮತ್ತಷ್ಟು ಸವಾಲು ಎದುರಾಗಿದೆ. ಕಾರ್ಯಕರ್ತರು ಹುರುಪಿನಿಂದ ಪಕ್ಷಕ್ಕೆ ಪುನಶ್ಚೇತನ ನೀಡಲು ಸಿದ್ದರಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಚುನಾವಣೆಗಳಲ್ಲಿ ವ್ಯರ್ಥ ಕಸರತ್ತು ಹಾಕುವುದು ಸರಿಯಲ್ಲ, ಉಪ ಚುನಾವಣೆಗಳಲ್ಲಿ ಅಭ್ಯರ್ಥಿ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದರು.
ಜೆಡಿಎಸ್ ಪಕ್ಷ ಸಂಘಟನೆ ಚೆನ್ನಾಗಿಯೇ ಇದೆ. ಉಪ ಚುನಾವಣೆಗಳಲ್ಲಿ ಈಗ ಬಿಜೆಪಿಯ ವಿಧಾನವೇ ಬೇರೆ ಇದೆ. ಇಂಥ ಸಂದರ್ಭದಲ್ಲಿ ನಾವು ಉಪ ಚುನಾವಣೆ ಗೆಲ್ಲೋದು ಕಷ್ಟವೇ ಆಗಿದೆ. ಶಿರಾ ಮತ್ತು ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಹಣ ಹಾಗೂ ಅಧಿಕಾರ ಬಲದಿಂದ ಬಿಜೆಪಿ ಗೆಲುವು ಸಾಧಿಸಿದೆ ಎಂದು ಪರೋಕ್ಷವಾಗಿ ಅವರು ಹೇಳಿದರು.