ನೀವೇನು ಕಾಂಗ್ರೆಸ್ ಸಂಸ್ಥಾಪಕನ ಮೊಮ್ಮಗನೋ, ಮರಿಮಗನೋ ಎಂದು ಕೇಳಲ್ಲ: ಸಿದ್ದರಾಮಯ್ಯಗೆ ಸಿ.ಟಿ.ರವಿ ತಿರುಗೇಟು

ನಾನು ಆರ್ ಎಸ್ ಎಸ್ ಸಂಸ್ಥಾಪಕ ಅಲ್ಲ, ನಾನೊಬ್ಬ ಸಂಘದ ಸ್ವಯಂ ಸೇವಕ. ಡಾ.ಕೇಶವ ಬಲಿರಾಮ ಹೆಡಗೇವಾರ್ ಅವರು ಗುರುವಾಗಿ ಸ್ವೀಕರಿಸಿದ್ದು ಸಹಸ್ರಾರು ವರ್ಷಗಳಿಂದ ಪ್ರೇರಣೆ ನೀಡಿದ ಭಗವದ್ ಧ್ವಜವನ್ನು ಮತ್ತು "ವ್ಯಕ್ತಿಗಿಂತ ತತ್ವ ಶ್ರೇಷ್ಠ"ಎಂಬ ಸಿದ್ದಾಂತವನ್ನು.
ಸಿಟಿ ರವಿ
ಸಿಟಿ ರವಿ

ಬೆಂಗಳೂರು: ನಾನು ಆರ್ ಎಸ್ ಎಸ್ ಸಂಸ್ಥಾಪಕ ಅಲ್ಲ, ನಾನೊಬ್ಬ ಸಂಘದ ಸ್ವಯಂ ಸೇವಕ. ಡಾ.ಕೇಶವ ಬಲಿರಾಮ ಹೆಡಗೇವಾರ್ ಅವರು ಗುರುವಾಗಿ ಸ್ವೀಕರಿಸಿದ್ದು ಸಹಸ್ರಾರು ವರ್ಷಗಳಿಂದ ಪ್ರೇರಣೆ ನೀಡಿದ ಭಗವದ್ ಧ್ವಜವನ್ನು ಮತ್ತು "ವ್ಯಕ್ತಿಗಿಂತ ತತ್ವ ಶ್ರೇಷ್ಠ"ಎಂಬ ಸಿದ್ದಾಂತವನ್ನು. ಸಂಘ ಸ್ವಯಂ ಸೇವಕರಿಗೆ ಹೇಳಿಕೊಟ್ಟಿದ್ದು ದೇಶ ಮೊದಲು ಎನ್ನುವ ತತ್ವವನ್ನು."ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ"ಎಂಬ ಭಾವ ವನ್ನು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ.

ನನಗೆ ಆರ್ ಎಸ್ಎಸ್ ಬಗ್ಗೆ ತಿಳಿದಿಲ್ಲ ಎಂದು ಹೇಳುವ ಸಿ.ಟಿ.ರವಿ ಆರ್ ಎಸ್ಎಸ್ ಸಂಸ್ಥಾಪಕ ಸದಸ್ಯನಾ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಟ್ವೀಟರ್ ಮೂಲಕ ತಿರುಗೇಟು ನೀಡಿರುವ ಸಿ.ಟಿ.ರವಿ, ಇದು ಅರ್ಥ ವಾಗಬೇಕಾದರೆ, ಸ್ಪೃಶ್ಯತೆಯ,ಜಾತೀಯತೆಯ ಸೋಂಕಿಲ್ಲದೆ ನಾವೆಲ್ಲರೂ ಒಂದು, ರತ ಮಾತೆಯ ಮಕ್ಕಳು ಎಂದು ಬದುಕಬೇಕಾದರೆ ನೀವು ಶಾಖೆಗೆ ಬರಬೇಕು. ನು ನಿಮ್ಮ ಹಾಗೆ,ನೀವು ಕಾಂಗ್ರೆಸ್ ಸಂಸ್ಥಾಪಕ AO ಹ್ಯೂಮ್ ರ ಮೊಮ್ಮಗನೋ, ರಿಮಗನೋ ಎಂದು ಕೇಳುವುದಿಲ್ಲ ಎಂದು ಹೇಳಿದ್ದಾರೆ. 

ಇಂದಿರಾ ಗಾಂಧಿಯವರ ದತ್ತುಪುತ್ರ ಎಂದು ಹೇಳುವು ದಿಲ್ಲ.ಅಧಿಕಾರಕ್ಕಾಗಿ ಪಕ್ಷ ಬದಲಾಯಿಸಿದರು ಎಂದು ಆರೋಪಿ ಸುವುದಿಲ್ಲ.ಬದಲಾಗಿ ವಂಶವಾದಕ್ಕಿಂತ,ಜಾತಿ ವಾದಕ್ಕಿಂತ,ರಾಷ್ಟ್ರವಾದ ದೇಶಕ್ಕೆ ಒಳ್ಳೆಯದು ಎಂದಷ್ಟೇ ಹೇಳಬಯಸುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com