ಹಣಕ್ಕಾಗಿ ಬಿಜೆಪಿಗೆ ಬಂದಿಲ್ಲ: ಪ್ರತಾಪ್ ಗೌಡ ಪಾಟೀಲ್
ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರೂ ತಾವು ಹಣಕ್ಕಾಗಿ ಬಿಜೆಪಿಗೆ ಬಂದಿಲ್ಲ ಎಂದು ಮಸ್ಕಿ ಉಪಚುನಾವಣೆ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಅವರು ಮಂಗಳವಾರ ಹೇಳಿದ್ದಾರೆ.
Published: 24th November 2020 03:22 PM | Last Updated: 24th November 2020 03:22 PM | A+A A-

ಪ್ರತಾಪ್ ಗೌಡ ಪಾಟೀಲ್
ಬೆಂಗಳೂರು: ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರೂ ತಾವು ಹಣಕ್ಕಾಗಿ ಬಿಜೆಪಿಗೆ ಬಂದಿಲ್ಲ ಎಂದು ಮಸ್ಕಿ ಉಪಚುನಾವಣೆ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಅವರು ಮಂಗಳವಾರ ಹೇಳಿದ್ದಾರೆ.
ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಗೌಡ ಪಾಟೀಲ್, ಬಿಜೆಪಿ ಸರ್ಕಾರ ರಚನೆಗಾಗಿ ಮೈತ್ರಿ ಸರ್ಕಾರದಿಂದ ಬಿಜೆಪಿಗೆ ಬಂದ 17 ಜನರಿಗೆ ನೀಡಿದ್ದ ಭರವಸೆಯನ್ನು ಮುಖ್ಯಮಂತ್ರಿಗಳು ಈಡೇರಿಸುತ್ತಾರೆ ಎಂದು ವಿಶ್ವಾಸವ್ಯಕ್ತಪಡಿಸಿದರು.
ತಾವು ಹಣಕ್ಕಾಗಿ ಬಿಜೆಪಿ ಸೇರಿಲ್ಲ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಮೆಚ್ಚಿ ಬಿಜೆಪಿಗೆ ಬಂದಿದ್ದೇನೆ. ಆದರೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಣಕ್ಕಾಗಿ ಬಿಜೆಪಿ ಸೇರಿದ್ದೇನೆಂದು ನನ್ನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದರು.
ಮಸ್ಕಿಯಲ್ಲಿ ಕ್ಷೇತ್ರದ ಜನರು ಉಪಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸುವ ವಿಶ್ವಾಸವಿದೆ. ನಮ್ಮಲ್ಲಿ ಯಾವುದೇ ಅಸಮಧಾನ ಇಲ್ಲ. ನಾವೆಲ್ಲರೂ ಒಟ್ಟಾಗಿ ಇದ್ದೇವೆ, ಎಲ್ಲರೂ ಚುನಾವಣಾ ಪ್ರಚಾರಕ್ಕೆ ಬರುತ್ತಾರೆ ಎಂದು ಹೇಳಿದರು.