ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಇಳಿಯುವುದು ಖಚಿತ: ಸಿದ್ದರಾಮಯ್ಯ

ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಇಳಿಯುವುದು ಖಚಿತವಾಗಿರಬೇಕು. ಹೀಗಾಗಿ ಅವರು ತರಾತುರಿಯಲ್ಲಿ ನಿಗಮ ಮಂಡಳಿಗಳಿಗೆ ನೇಮಕ ಮಾಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಇಳಿಯುವುದು ಖಚಿತವಾಗಿರಬೇಕು. ಹೀಗಾಗಿ ಅವರು ತರಾತುರಿಯಲ್ಲಿ ನಿಗಮ ಮಂಡಳಿಗಳಿಗೆ ನೇಮಕ ಮಾಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ಥಿಕ ಸಂಕಷ್ಟದ ನಡುವೆಯೂ ನಿಗಮ-ಮಂಡಳಿ ನೇಮಕ ಮಾಡಿ ಕುರ್ಚಿ ಉಳಿಸಿಕೊಳ್ಳುವ ಕಸರತ್ತು ನಡೆಸಿದ್ದಾರೆ. ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಸ್ಥಾನದಿಂದ ಇಳಿಯುವ ಆತಂಕವಿದೆ. ಹೀಗಾಗಿ ಯಡಿಯೂರಪ್ಪ ತರಾತುರಿಯಲ್ಲಿ ನಿಗಮ ಮಂಡಳಿಗಳಿಗೆ ನೇಮಕ ಮಾಡಿದ್ದಾರೆ. ರಾಜ್ಯದಲ್ಲಿ ಹಣಕಾಸಿನ ಮುಗ್ಗಟ್ಟು ಇರುವಾಗ ನಿಗಮ ಮಂಡಳಿಗಳೀಗೆ ನೇಮಕ ಮಾಡಿರುವುದು ರಾಜ್ಯಕ್ಕೆ ಎಸಗಿರುವ ದ್ರೋಹ ಎಂದರು.

ಖಾಸಗಿ ಶಿಕ್ಷಣ ಸಂಸ್ಥೆಗಳು ಶುಲ್ಕ ನೀಡದೇ ಹೋದಲ್ಲಿ ಆನ್ಲೈನ್ ತರಗತಿ ಸೌಲಭ್ಯ ನೀಡದೇ ಇರುವುದು ಸರಿಯಲ್ಲ. ಸರ್ಕಾರ ಖಾಸಗಿ ಶಾಲೆಗಳ ಜೊತೆ ಶಾಮೀಲಾಗಿದ್ದು, ಹೀಗಾಗಿ ವಿದ್ಯಾರ್ಥಿಗಳು ಮತ್ತು ಪೋಷಕರ ರಕ್ಷಣೆಗಾಗಿ ಏನೂ ಮಾಡುತ್ತಿಲ್ಲ. ಇದು ಬರೀ ಲೂಟಿ ಸರ್ಕಾರ. ಯಡಿಯೂರಪ್ಪ ಸರ್ಕಾರ ಲೂಟಿ ಸರ್ಕಾರ ಎಂದು ಸಿದ್ದರಾಮಯ್ಯ ಟೀಕಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com