ಬಿಜೆಪಿ ತಂತ್ರಗಳೇನುಂಬುದು ನಮಗೆ ಗೊತ್ತಿದೆ, ಉಪಚುನಾವಣೆಗೆ ನಾವು ಸಿದ್ಧ: ಡಿ.ಕೆ. ಶಿವಕುಮಾರ್

ರಾಜರಾಜೇಶ್ವರಿ ನಗರ, ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಬಳಸಿದ್ದ ತಂತ್ರಗಳೇನು ಎಂಬುದು ನಮಗೆ ಗೊತ್ತಿದೆ. ಮುಂದಿನ ಎರಡು ಕ್ಷೇತ್ರಗಳ ಉಪಚುನಾವಣೆ ಎದುರಿಸಲು ಸಿದ್ಧರಿದ್ದೇವೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. 
ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವ ಡಿಕೆ. ಶಿವಕುಮಾರ್
ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವ ಡಿಕೆ. ಶಿವಕುಮಾರ್

ಕಲಬುರಗಿ: ರಾಜರಾಜೇಶ್ವರಿ ನಗರ, ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಬಳಸಿದ್ದ ತಂತ್ರಗಳೇನು ಎಂಬುದು ನಮಗೆ ಗೊತ್ತಿದೆ. ಮುಂದಿನ ಎರಡು ಕ್ಷೇತ್ರಗಳ ಉಪಚುನಾವಣೆ ಎದುರಿಸಲು ಸಿದ್ಧರಿದ್ದೇವೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. 

ಬಸವಕಲ್ಯಾಣ ಭೇಟಿಗೂ ಮುನ್ನ ಕಲಬುರಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜರಾಜೇಶ್ವರಿ ನಗರ, ಶಿರಾ ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಗೂ ಮಸ್ಕಿ, ಬಸವಕಲ್ಯಾಣ ಕ್ಷೇತ್ರಗಳಲ್ಲಿ ನಡೆಯುವ ಉಪಚುನಾವಣೆಗೂ ಸಾಕಷ್ಟು ವ್ಯತ್ಯಾಸವಿದ್ದು, ಮಸ್ಕಿ ಹಾಗೂ ಬಸವಕಲ್ಯಾಣದಲ್ಲಿ ಬಿಜೆಪಿ ಗೆದ್ದು ತೋರಿಸಲಿ ಎಂದು ಸವಾಲೆಸೆದಿದ್ದಾರೆ. 

ರಾಜ್ಯದಲ್ಲಿ ಇನ್ನೆರಡು ಕ್ಷೇತ್ರಗಳ ಉಪಚುನಾವಣೆಗಳಿದ್ದು, ಈ ನಡುವಲ್ಲೇ ಬಿಜೆಪಿ ಮರಾಠ ಅಭಿವೃದ್ಧಿ ಪ್ರಾಧಿಕಾರ ಹಾಗೂ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮವನ್ನು ಘೋಷಣೆ ಮಾಡಿದೆ. ಸರ್ಕಾರ ಇಂತಹ ಸಂಸ್ಥೆಗಳನ್ನು ರಚನೆ ಮಾಡುತ್ತಲಿದ್ದರೆ, ಬಜೆಟ್"ನ ಪಾವಿತ್ರ್ಯತೆ ಏನು ಎಂದು ಪ್ರಶ್ನಿಸಿದ್ದಾರೆ. 

ನಿಗಮಗಳನ್ನು ಜಾತಿ ಮತ್ತು ಸಮುದಾಯ ಮಾರ್ಗಗಳಲ್ಲಿ ರಚನೆ ಮಾಡುವ ಮೂಲಕ ಬಿಜೆಪಿ ಸಮಾಜವನ್ನು ಒಡೆಯುತ್ತಿದೆ. ಈ ನಿಗಮಗಳನ್ನು ಕಾಂಗ್ರೆಸ್ ವಿರೋಧಿಸುತ್ತದೆ. ಪಕ್ಷದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ನಮ್ಮ ನಿಲುವನ್ನು ಸ್ಪಷ್ಟಪಡಿಸುತ್ತೇವೆಂದು ತಿಳಿಸಿದ್ದಾರೆ. 

ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ನಾಯಕರು ಹಾಗೂ ಮಂತ್ರಿಗಳು ಅನೇಕ ಆಶ್ವಾಸನೆ ಕೊಡುತ್ತಿದ್ದಾರೆ. ಅವರು ಏನಾದರೂ ಆಶ್ವಾಸನೆ ನೀಡಲಿ. ಳೆದ ಒಂದು ವರ್ಷದಿಂದ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ ಎಂಬುದು ಜನರಿಗೆ ಗೊತ್ತಿದೆ. ಬಿಜೆಪಿಯವರು ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡುತ್ತೀವಿ ಅಂತಾ ಹೇಳಿದ್ದರು ಅದನ್ನು ನೀಡುವಲ್ಲಿ ವಿಫಲರಾಗಿದ್ದಾರೆ. ಕೇವಲ ಭಾವನಾತ್ಮಕವಾಗಿ ಜನರನ್ನು ಸೆಳೆಯುತ್ತಿದ್ದಾರೆ. ಇದು ತಾತ್ಕಾಲಿಕ. ಕಾರ್ಯಕರ್ತರು ಅದಕ್ಕೆ ಕುಗ್ಗುವುದಿಲ್ಲ. ಇವು ನಮ್ಮ ಸಿದ್ಧಾಂತಕ್ಕೆ ಬದ್ಧವಾಗಿ ಹೋರಾಟ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಜಯ ಸಾಧಿಸಲು ನಾನು ವಿಜಯ ನಗರದಿಂದ ಪ್ರವಾಸ ಆರಂಭಿಸಿದ್ದೇನೆ. ರಸ್ತೆ ಮಾರ್ಗವಾಗಿ ಎಲ್ಲೆಡೆ ಪ್ರವಾಸ ಮಾಡುತ್ತಿದ್ದೇನೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಈ ಹಂತಕ್ಕೆ ಇಳಿಯುತ್ತಾರೆ ಎಂದು ಊಹಿಸಿರಲಿಲ್ಲ.ಜಾತಿ, ಭಾಷೆ ಆಧಾರಿತ ರಾಜಕೀಯ ಮಾಡುವುದು ಸಮಂಜಸವಲ್ಲ ಎಂದು ಅವರು ಕಿಡಿಕಾರಿದರು.

ವಿಜಯನಗರದಿಂದ ವಿಜಯ ಸ್ಥಾಪನೆ ಮಾಡಬೇಕು ಎಂಬ ಉದ್ದೇಶದಿಂದ ಪ್ರವಾಸ ಆರಂಭಿಸಿದ್ದೇನೆ.ಮಸ್ಕಿಯಲ್ಲಿ ಸುಮಾರು 35 ಸಾವಿರಕ್ಕೂ ಹೆಚ್ಚು ಜನ ಬಿಜೆಪಿಯಿಂದ ಕಾಂಗ್ರೆಸ್ ಸೇರ್ಪಡೆಗೊಂಡಿದ್ದು, ಅಷ್ಟು ದೊಡ್ಡ ಮಟ್ಟದಲ್ಲಿ ಜನರು ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಾರೆ ಎಂದು ನೀರಿಕ್ಷಿಸಿರಲಿಲ್ಲ ಎಂದಿದ್ದಾರೆ. 

ಡಿಸೆಂಬರ್ ಅಂತ್ಯದವರೆಗೂ ಶಾಲೆ ಹಾಗೂ ಕಾಲೇಜುಗಳನ್ನು ತೆರೆಯದಿರುವ ಸರ್ಕಾರದ ನಿರ್ಧಾರ ಕುರಿತು ಪ್ರತಿಕ್ರಿಯೆ ನೀಡಿ, ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು ಸೇರಿದಂತೆ ಹಲವು ತಜ್ಞರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಸರ್ಕಾರ ನಿರ್ಧಾರವನ್ನು ತೆಗೆದುಕೊಳ್ಳಬಹುದಿತ್ತು ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com