ಯಡಿಯೂರಪ್ಪ ಅವರಿಗೆ ಅಧಿಕಾರಕ್ಕೆ ಬರುವಾಗ ನಾನು ಬೇಕಿತ್ತು, ಈಗ ಬೇಕಿಲ್ಲ: ಸಂಸದ ಶ್ರೀನಿವಾಸ್ ಪ್ರಸಾದ್

ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗುವಾಗ ನಾನು ಬೇಕಿತ್ತು. ಈಗ ಸಿಎಂ ಆಗುವ ಕೆಲಸ ಮುಗಿತ್ತಲ್ಲ. ಇನ್ನೇನು ಆ ದರ್ದು ಅವರಿಗಿಲ್ಲ. ಈಗ ಆರಾಮಾಗಿ ಇದ್ದಾರೆ. ನೋಡ್ಕೋತೀವಿ ಬಿಡಿ ಎಂದು ಚಾಮರಾಜನಗರದ ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ.

Published: 26th November 2020 07:33 AM  |   Last Updated: 26th November 2020 12:51 PM   |  A+A-


Veteran BJP MP V Srinivasa Prasad

ಸಂಸದ ಶ್ರೀನಿವಾಸ್ ಪ್ರಸಾದ್

Posted By : Manjula VN
Source : The New Indian Express

ಮೈಸೂರು: ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗುವಾಗ ನಾನು ಬೇಕಿತ್ತು. ಈಗ ಸಿಎಂ ಆಗುವ ಕೆಲಸ ಮುಗಿತ್ತಲ್ಲ. ಇನ್ನೇನು ಆ ದರ್ದು ಅವರಿಗಿಲ್ಲ. ಈಗ ಆರಾಮಾಗಿ ಇದ್ದಾರೆ. ನೋಡ್ಕೋತೀವಿ ಬಿಡಿ ಎಂದು ಚಾಮರಾಜನಗರದ ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. 

ನಂಜನಗೂಡು ತಾಲೂಕಿನ ಸುತ್ತೂರು ಶ್ರೀಕ್ಷೇತ್ರದಲ್ಲಿ ಬುಧವಾರ ಸಂಪುಟ ವಿಸ್ತರಣೆ ಹಾಗೂ ಪುನಾರಚನೆ ವಿಚಾರ ಕುರಿತು ಸುದ್ದಿಗಾರರ ಪ್ರಶ್ನೆಗೆ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. 

ಮಂತ್ರಿ ಪಟ್ಟವನ್ನು ನಾನೇ ಬೇಡ ಎಂದಿದ್ದೇನೆ. ಚುನಾವಣೆಯನ್ನೇ ಬೇಡ ಎಂದಿದ್ದವನು ನಾನು. ಇನ್ನು ಮಂತ್ರಿ ಪಟ್ಟ ಯಾಕೇ ಬೇಕು ನನಗೆ? ನಾನು ಕೇಂದ್ರದಲ್ಲಿ ಸಚಿವ ಸ್ಥಾನ ಆಕಾಂಕ್ಷಿಯಲ್ಲ. ಹಳೇ ಮೈಸೂರು ಭಾಗಕ್ಕೆ ಸಚಿವ ಸ್ಥಾನ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಅಳಿಯ ಶಾಸಕ ಹರ್ಷವರ್ಧನ್ ಹೇಳಿಕೆ ವೈಯಕ್ತಿ ಎಂದು ತಿಳಿಸಿದ್ದಾರೆ. 

ಹಳೇ ಮೈಸೂರು ಭಾಗಕ್ಕೆ ಈಗ ಸಾಕಾಗುವಷ್ಟು ಮಂತ್ರಿ ಸ್ಥಾನ ಇದೆ. ಸಿಎಂ ಹಳೇ ಮೈಸೂರು ಭಾಗದವರೇ. ಈಶ್ವರಪ್ಪ ನಾರಾಯಣಗೌಡ, ಎಸ್.ಟಿ.ಸೋಮಶೇಖರ್ ಹಳೇ ಮೈಸೂರಿನವರೇ. ಇನ್ನೆಷ್ಟು ಜನರನ್ನು ಗುಡ್ಡೆ ಹಾಕಿಕೊಳ್ತೀರಾ ಹೇಳಿ ಎಂದು ಪ್ರಶ್ಸಿಸಿದರು. 

Stay up to date on all the latest ರಾಜಕೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp