ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ಎಸ್.ಆರ್.ವಿಶ್ವನಾಥ್ ರಾಜೀನಾಮೆ
ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕಗೊಂಡ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಅವರು ಗುರುವಾರ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
Published: 26th November 2020 07:55 PM | Last Updated: 26th November 2020 07:55 PM | A+A A-

ಶಾಸಕ ಎಸ್ ಆರ್ ವಿಶ್ವನಾಥ್
ಬೆಂಗಳೂರು: ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕಗೊಂಡ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಅವರು ಗುರುವಾರ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಮುಖ್ಯಮಂತ್ರಿಗೆ ರಾಜೀನಾಮೆ ಪತ್ರ ರವಾನಿಸಿರುವ ಎಸ್.ಆರ್.ವಿಶ್ವನಾಥ್, ತಮ್ಮೊಂದಿಗೆ ಇದುವರೆಗೆ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಹೃದಯಪೂರ್ವಕ ಧನ್ಯವಾದಗಳು ಎಂದು ಹೇಳಿದ್ದಾರೆ.
ನನಗೆ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಹಿನ್ನಲೆಯಲ್ಲಿ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ವಿಶ್ವನಾಥ್ ತಿಳಿಸಿದ್ದಾರೆ.
ಎಸ್. ಆರ್. ವಿಶ್ವನಾಥ್ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಆದ್ದರಿಂದ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.