ಜಾರಕಿಹೊಳಿಯಿಂದ ನನ್ನ ವರ್ಚಸ್ಸಿಗೆ ಧಕ್ಕೆಯಾಗಿಲ್ಲ; ಬಿಜೆಪಿಯಲ್ಲಿ ಮೂಲ-ವಲಸಿಗ ಎಂಬ ತಂಡವಿಲ್ಲ: ಶ್ರೀರಾಮುಲು 

ಬಿಜೆಪಿಗೆ ರಮೇಶ್ ಜಾರಕಿಹೊಳಿ ಬಂದಿದ್ದರಿಂದ ನನ್ನ ವ್ಯಕ್ತಿತ್ವಕ್ಕೆ ವರ್ಚಸ್ಸಿಗೆ ಯಾವುದೇ ತೊಂದರೆ ಆಗಿಲ್ಲ ಎಂದು ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.
ಶ್ರೀರಾಮುಲು
ಶ್ರೀರಾಮುಲು

ಮೈಸೂರು: ಬಿಜೆಪಿಗೆ ರಮೇಶ್ ಜಾರಕಿಹೊಳಿ ಬಂದಿದ್ದರಿಂದ ನನ್ನ ವ್ಯಕ್ತಿತ್ವಕ್ಕೆ ವರ್ಚಸ್ಸಿಗೆ ಯಾವುದೇ ತೊಂದರೆ ಆಗಿಲ್ಲ ಎಂದು ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ನನ್ನ ಹಿಂದೆ ಬೆಂಬಲಕ್ಕೆ ಹಲವರು ಸಚಿವರಿದ್ದಾರೆ, ಜೊತೆಗೆ ನನ್ನ ಸಮುದಾಯ ನನ್ನೆ ಬೆಂಬಲಕ್ಕಿದೆ ಎಂದು ಹೇಳಿದ್ದಾರೆ.

ನಾನು ಅಧಿಕಾರಕ್ಕಾಗಿ ಯಾವತ್ತೂ ರಾಜಕೀಯ ಮಾಡಿಲ್ಲ, ಜನರ ಪ್ರೀತಿ ವಿಶ್ವಾಸ ನಾನು ಸಂಪಾದಿಸಿದ್ದೇನೆ, ಈ ವಿಶ್ವಾಸ ಮತ್ತು ಬೆಂಬಲ ನನ್ನನ್ನು ಮುಂದುವರಿಸಿಕೊಂಡು ಹೋಗುತ್ತದೆ ಎಂದು ಶ್ರೀರಾಮುಲು ಭರವಸೆ ವ್ಯಕ್ತ ಪಡಿಸಿದ್ದಾರೆ.

ಬಿಜೆಪಿಯಲ್ಲಿ ಮೂಲ ಮತ್ತು ವಲಸಿಗ ಎಂಬ ಯಾವುದೇ ತಂಡವಿಲ್ಲ, ಬಿಜೆಪಿಗೆ ಬಂದು ಇವರೆಲ್ಲಾ ಬಿಜೆಪಿ ಟಿಕೆಟ್ ನಲ್ಲಿ ಗೆಲುವು ಸಾಧಿಸಿದ್ದಾರೆ. ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವವರಿಗೆ ಸಂಪುಟದಲ್ಲಿ ಅವಕಾಶ ನೀಡಬೇಕೆಂದು ಮುಖ್ಯಮಂತ್ರಿಗಳ ಬಳಿ ಮನವಿ ಮಾಡುವುದಾಗಿ ಶ್ರೀರಾಮುಲು ತಿಳಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com