ಬಿಜೆಪಿ ಸರ್ಕಾರ ರಚಿಸಲು ಯೋಗೇಶ್ವರ್ ಕೂಡ ಕಾರಣ, ಅವರಿಗೂ ಸಚಿವ ಸ್ಥಾನ ಸಿಗಬೇಕು: ಅಶ್ವತ್ಥ ನಾರಾಯಣ

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬರಲು ಸಿಪಿ ಯೋಗೇಶ್ವರ್ ಕಾರಣರಾಗಿದ್ದು, ಅವರು ಹಲವು ಮಹತ್ವದ ಜವಾಬ್ದಾರಿ ವಹಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ ಹೇಳಿದ್ದಾರೆ.

Published: 28th November 2020 07:38 AM  |   Last Updated: 28th November 2020 12:21 PM   |  A+A-


C.P yogeshwar

ಸಿ.ಪಿ ಯೋಗೇಶ್ವರ್

Posted By : Shilpa D
Source : The New Indian Express

ಉಡುಪಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬರಲು ಸಿಪಿ ಯೋಗೇಶ್ವರ್ ಕಾರಣರಾಗಿದ್ದು, ಅವರು ಹಲವು ಮಹತ್ವದ ಜವಾಬ್ದಾರಿ ವಹಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಉಡುಪಿಯಲ್ಲಿ  ಬಿಜೆಪಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಬಹಳ ಜಟಿಲ ವಿಚಾರವಾಗಿದ್ದು, ವರಿಷ್ಠರು ಹಾಗೂ ಮುಖ್ಯಮಂತ್ರಿ ಸಮಾಲೋಚಿಸಿ ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದನ್ನು ನಿರ್ಧರಿಸಲಿದ್ದಾರೆ. ಯೋಗೀಶ್ವರ್‌ಗೆ ಹಿಂದೆ ಜವಾಬ್ದಾರಿ ಹೊತ್ತು‌ ಕಾರ್ಯ ನಿರ್ವಹಿಸಿದ್ದಾರೆ. ಅವರಿಗೆ ಸಚಿವ ಸ್ಥಾನ ಸಿಗಲಿ ಎಂಬದು ವೈಯಕ್ತಿಕ ಅಭಿಪ್ರಾಯ ಎಂದರು. 

ಪಕ್ಷದಲ್ಲಿ ಮೂಲ ಬಿಜೆಪಿಗರು, ವಲಸಿಗರು ಎಂಬ ತಾರತಮ್ಯ ಇಲ್ಲ. ವಲಸೆ ಬಂದವರೂ ಸರ್ಕಾರ ರಚನೆಗೆ ಕಾರಣರಾಗಿದ್ದು, ಕುಟುಂಬದ ರೀತಿ‌ ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗುತ್ತೇವೆ‌. ಯಾರಿಗೆ ಏನು ಸಲ್ಲಬೇಕು, ಅದು ಪಕ್ಷದಿಂದ ಸಿಗಲಿದೆ ಎಂದರು. ಇನ್ನೂ ಸಚಿವ ಸಂಪುಟ ವಿಸ್ತರಣೆಯಲ್ಲಿ ಅಸಮತೋಲನ ಇರುವುದಿಲ್ಲ ಎಂದು ಭರವಸೆ ನೀಡಿದರು.

Stay up to date on all the latest ರಾಜಕೀಯ news
Poll
Farmers_ride_tractors1

ರೈತರು ದೆಹಲಿಯಲ್ಲಿ ತಮ್ಮ ಗಣರಾಜ್ಯೋತ್ಸವ ದಿನದ ಟ್ರಾಕ್ಟರ್ ರ್ಯಾಲಿಯನ್ನು ನಿಲ್ಲಿಸಬೇಕೇ?


Result
ಹೌದು
ಬೇಡ
flipboard facebook twitter whatsapp