'ಚನ್ನಪಟ್ಟಣಕ್ಕೆ ನಾನೇ ಮಂತ್ರಿ, ನಾನೇ ಸರ್ಕಾರ: ಅವರು 20 ಕೆರೆ ತುಂಬಿಸಿದ್ದರೆ ನಾನು 128 ಕೆರೆ ತುಂಬಿಸಿದ್ದೇನೆ'

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಮ್ಮ ಜಿಲ್ಲೆಯ ನಾಲ್ವರನ್ನು ಮಂತ್ರಿ ಮಾಡಲಿ. ಯಾರನ್ನು ಮಂತ್ರಿ ಮಾಡಬೇಡಿ ಎಂದು ಹೇಳುವಷ್ಟು ಕೀಳುಮಟ್ಟಕ್ಕೆ ನಾನು ಇಳಿಯುವುದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

Published: 28th November 2020 10:24 AM  |   Last Updated: 28th November 2020 12:22 PM   |  A+A-


HD kumaraswamy

ಎಚ್.ಡಿ ಕುಮಾರಸ್ವಾಮಿ

Posted By : Shilpa D
Source : Online Desk

ರಾಮನಗರ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಮ್ಮ ಜಿಲ್ಲೆಯ ನಾಲ್ವರನ್ನು ಮಂತ್ರಿ ಮಾಡಲಿ. ಯಾರನ್ನು ಮಂತ್ರಿ ಮಾಡಬೇಡಿ ಎಂದು ಹೇಳುವಷ್ಟು ಕೀಳುಮಟ್ಟಕ್ಕೆ ನಾನು ಇಳಿಯುವುದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಚನ್ನಪಟ್ಟಣ ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು,  ಯಾರನ್ನಾದರೂ ಮಂತ್ರಿ ಮಾಡಲಿ, ಚನ್ನಪಟ್ಟಣಕ್ಕೆ ನಾನೇ ಸಚಿವ, ನಾನೇ ಸರ್ಕಾರ ಎಂದು ಗುಡುಗಿದ್ದಾರೆ.

ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚಿಸಲು ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದೆ. ಯಾರನ್ನೋ ಮಂತ್ರಿ ಮಾಡಬೇಡಿ ಎಂದು ಹೇಳುವುದಕ್ಕಲ್ಲ. ಬಡವರ ಭೂಮಿ ಕಬಳಿಸಲು ಹೊರಟವರು ಮಂತ್ರಿಯಾಗಲು ಹೊರಟಿದ್ದಾರೆ. ಇಲ್ಲಿ ಯಾರೋ ಮಂತ್ರಿಯಾದರೆ ಹೆದರಿಕೊಂಡು ಹೋಗುವ ಜಾಯಮಾನ ನನ್ನದಲ್ಲ’ ಎಂದರು.

ಎಂಥೆಂತವರನ್ನು ನಾವು ನೋಡಿಲ್ಲ, ಇಲ್ಯಾರೋ ಮಂತ್ರಿಯಾದರೆ ಹೆದರಿಕೊಂಡು ಹೋಗುತ್ತೀವಾ, ಅವರು 20 ಕೆರೆ ತುಂಬಿಸಿರೋದಕ್ಕೆ ಭಗೀರಥ ಆಗಿಬಿಟ್ಟರು, ನಾನು 128 ಕೆರೆ ತುಂಬಿಸಿದ್ದೇನೆ. ನಾನು ಪ್ರಾಮಾಣಿಕವಾಗಿ ಕೆಲಸ ಮಾಡಿರುವ ವ್ಯಕ್ತಿ ಎಂದು ವಾಗ್ದಾಳಿ ನಡೆಸಿದರು.

ಲಿಂಗಾಯತ ಸಮುದಾಯವನ್ನು ಒಬಿಸಿಗೆ ಸೇರ್ಪಡೆ ಮಾಡಲು ಶಿಫಾರಸು ಮಾಡುವ ವಿಚಾರದ ಬಗ್ಗೆ ಚರ್ಚೆ ಮಾಡುವುದಿಲ್ಲ’ ಎಂದು ಕುಮಾರಸ್ವಾಮಿ ಹೇಳಿದರು. ಸ್ವಾರ್ಥಕ್ಕಾಗಿ ಮಾಡುತ್ತಿರುವ ವಿವಾದಾತ್ಮಕ ವಿಚಾರಕ್ಕೆ ತಲೆಹಾಕುವುದಿಲ್ಲ’ ಎಂದರು.

Stay up to date on all the latest ರಾಜಕೀಯ news
Poll
Narendra Singh Tomar

ಕೃಷಿ ಕಾನೂನು ಸಂಬಂಧ ರೈತರು ಮತ್ತು ಕೇಂದ್ರದ ನಡುವಣ ಬಿಕ್ಕಟ್ಟಿಗೆ ಹೊರಗಿನ ಶಕ್ತಿಗಳು ಕಾರಣ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಹೇಳಿದ್ದಾರೆ.


Result
ಹೌದು
ಇಲ್ಲ
flipboard facebook twitter whatsapp