ಸಿದ್ದರಾಮಯ್ಯ
ಸಿದ್ದರಾಮಯ್ಯ

ಲಿಂಗಾಯತ ಸಮುದಾಯ ಒಬಿಸಿಗೆ ಸೇರಿಸಲು ಆಯೋಗ ಶಿಫಾರಸ್ಸು ಮಾಡಬೇಕು: ಸಿದ್ದರಾಮಯ್ಯ

ಲಿಂಗಾಯತ ಸಮುದಾಯವನ್ನು ಒಬಿಸಿಗೆ ಸೇರಿಸಬೇಕಾದರೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ವರದಿ ನೀಡಬೇಕು. ಅಲ್ಲಿಯ ತನಕ ಒಬಿಸಿಗೆ ಸೇರ್ಪಡೆ ಮಾಡಲು ಅವಕಾಶ ಇಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು: ಲಿಂಗಾಯತ ಸಮುದಾಯವನ್ನು ಒಬಿಸಿಗೆ ಸೇರಿಸಬೇಕಾದರೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ವರದಿ ನೀಡಬೇಕು. ಅಲ್ಲಿಯ ತನಕ ಒಬಿಸಿಗೆ ಸೇರ್ಪಡೆ ಮಾಡಲು ಅವಕಾಶ ಇಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಬಿಸಿ ಪಟ್ಟಿಗೆ ಸೇರ್ಪಡೆ ಮಾಡಲು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಅಧ್ಯಯನ ನಡೆಸಿ ವರದಿ ನೀಡಬೇಕು. ಪಟ್ಟಿಗೆ ಸೇರಿಸುವ, ರದ್ದು ಮಾಡುವ ಅಧಿಕಾರ ಆಯೋಗಕ್ಕೆ ಇದೆ ಎಂದರು.

ಆಯೋಗಕ್ಕೆ ಈ ಸಂಬಂಧ ಅಧಿಕಾರವಿದ್ದು, ಆಯೋಗ ವರದಿ ಸಲ್ಲಿಸಿದ ನಂತರ ಅದರ ಬಗ್ಗೆ ಗಮನಹರಿಸಬಹುದು ಎಂದು ಹೇಳಿದರು.

ಯಾವುದೇ ಸಮುದಾಯ ಒಬಿಸಿಗೆ ಸೇರಿಸಿ ಎಂದು ಕೇಳುವುದರಲ್ಲಿ ತಪ್ಪಿಲ್ಲ. ಸಂವಿಧಾನದ ೩೩೪ನೇ ವಿಧಿಯಲ್ಲೇ ಇದನ್ನು ತಿಳಿಸಲಾಗಿದೆ. ಆದರೆ, ಯಡಿಯೂರಪ್ಪ ಕುರ್ಚಿ ಉಳಿಸಿಕೊಳ್ಳಲು ಇಂತಹ ತಂತ್ರ ಮಾಡುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ತೊಲಗಿದರೆ ಉತ್ತಮ ವಾತಾವರಣ ನಿರ್ಮಾಣ ಆಗುತ್ತದೆ. ಅಲ್ಲಿಯ ತನಕ ಯಾವುದೇ ಸಮಸ್ಯೆಗಳಿಗೆ ಪರಿಹಾರ ದೊರೆಯುವುದಿಲ್ಲ. ಬೊಕ್ಕಸದ ಹಣವನ್ನು ನಿಗಮ - ಮಂಡಳಿಗಳೆಂದು ಅನಗತ್ಯವಾಗಿ ವೆಚ್ಚ ಮಾಡಲಾಗುತ್ತಿದೆ ಎಂದು ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಬಿಜೆಪಿ ವಲಸಿಗರ ಸಭೆ ಕುರಿತು ಕೇಳಿದ ಪ್ರಶ್ನೆಗೆ ಸಿದ್ದರಾಮಯ್ಯ, ನಾನು ಅದರ ಬಗ್ಗೆ ಮಾತನಾಡುವುದಿಲ್ಲ. ಅವರು ಸಭೆ ಮಾಡಲಿ, ಬಿಡಲಿ ನಮಗೇನು. ಇವರು ವ್ಯಾಪಾರ ಮಾಡಿಕೊಂಡು ಅಲ್ಲಿಗೆ ಹೋದವರು. ಅವರ ವ್ಯಾಪಾರ ನನಗೇನು ಗೊತ್ತು ಎಂದು ಬಿಜೆಪಿ ವಲಸಿಗರನ್ನು ಕುಟುಕಿದರು.

ಇನ್ನು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್ .ಆರ್.ಸಂತೋಷ್ ಆತ್ಮಹತ್ಯೆ ಯತ್ನದ ಕುರಿತು ಪ್ರತಿಕ್ರಯಿಸಿದ ಸಿದ್ದರಾಮಯ್ಯ ಸಂತೋಷ್ ಯಾರ್ರೀ, ನಮಗೇನು‌ ಗೊತ್ತು. ಅವರ ಸಮಸ್ಯೆ ನಮಗೇನು ಗೊತ್ತು. ಅದು ಅವರ ವೈಯುಕ್ತಿಕ ವಿಚಾರ. ಆತನಿಗೆ ರಾಜಕೀಯ ಒತ್ತಡ ಇದೆಯೋ ಇಲ್ಲವೋ ಎನ್ನುವುದು ನನಗೇನು ಗೊತ್ತು. ವಿಚಾರಣೆ ನಂತರ ಎಲ್ಲವೂ ಬಹಿರಂಗವಾಗಲಿದೆ ಎಂದು ಹೇಳಿದರು.

Related Stories

No stories found.

Advertisement

X
Kannada Prabha
www.kannadaprabha.com