ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಿಲ್ಲ: ನಳೀನ್ ಕುಮಾರ್ ಕಟೀಲ್ ಸ್ಪಷ್ಟನೆ

ಇದೂವರೆಗೂ ಮುಖ್ಯಮಂತ್ರಿಗಳ ಬದಲಾವಣೆ ಕುರಿತು ಯಾವುದೇ ಚರ್ಚೆಗಳೂ ನಡೆದಿಲ್ಲ. ಯಾರೊಬ್ಬರು ನಾಯಕತ್ವ ಬದಲಾವಣೆ ಕುರಿತು ಪ್ರಶ್ನೆಯನ್ನೇ ಎತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶನಿವಾರ ಹೇಳಿದ್ದಾರೆ.

Published: 29th November 2020 07:59 AM  |   Last Updated: 29th November 2020 07:59 AM   |  A+A-


nalin kumar kateel

ನಳಿನ್ ಕುಮಾರ್ ಕಟೀಲ್

Posted By : Manjula VN
Source : The New Indian Express

ಮಂಗಳೂರು: ಇದೂವರೆಗೂ ಮುಖ್ಯಮಂತ್ರಿಗಳ ಬದಲಾವಣೆ ಕುರಿತು ಯಾವುದೇ ಚರ್ಚೆಗಳೂ ನಡೆದಿಲ್ಲ. ಯಾರೊಬ್ಬರು ನಾಯಕತ್ವ ಬದಲಾವಣೆ ಕುರಿತು ಪ್ರಶ್ನೆಯನ್ನೇ ಎತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶನಿವಾರ ಹೇಳಿದ್ದಾರೆ. 

ಪಕ್ಷದ ರಾಷ್ಟ್ರಾಧ್ಯಕ್ಷರು ಹಾಗೂ ಕೋರ್ ಕಮಿತಿ ಸಭೆಯ ವೇಳೆ ಪಕ್ಷದ ನಾಯಕರು ನಾಯಕತ್ವ ಬದಲಾವಣೆ ಕುರಿತು ಏನಾದರೂ ಹೇಳಿದರೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಇದೂವರೆಗೂ ಮುಖ್ಯಮಂತ್ರಿಗಳ ಬದಲಾವಣೆ ಕುರಿತು ಯಾವುದೇ ಚರ್ಚೆಗಳೂ ನಡೆದಿಲ್ಲ. ಯಾವ ಹಂತದಲ್ಲ ಈ ಬಗ್ಗೆ ಚರ್ಚೆಯಾಗಿದೆ ಹೇಳಿ ಎಂದು ಪ್ರಶ್ನಿಸಿದ್ದಾರೆ. 

ಇದೇ ವೇಳೆ ಸಚಿವ ಸ್ಥಾನಕ್ಕಾಗಿ ನಾಯಕರು ಲಾಬಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿ, ಸಚಿವ ಸ್ಥಾನದ ಕುರಿತು ಮುಖ್ಯಮಂತ್ರಿ ಮತ್ತು ವರಿಷ್ಠರ ತೀರ್ಮಾನಕ್ಕೆ ಎಲ್ಲ ಶಾಸಕರು ಬದ್ಧರಾಗಿರಬೇಕು. ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುವುದರಲ್ಲಿ ಯಾವುದೇ ತಪ್ಪಿಲ್ಲ. ಆದರೆ, ವರಿಷ್ಠರ ತೀರ್ಮಾನಕ್ಕೆ ಬದ್ಧರಾಗಿ ನಡೆಯಬೇಕು. ಈ ವಿಚಾರವಾಗಿ ಬಿಜೆಪಿಯಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಹೇಳಿದ್ದಾರೆ. 

ಮಂಗಳೂರಿನ ಅಪಾರ್ಟ್'ಮೆಂಟ್ ಗೋಡೆಯ ಮೇಲೆ ದೇಶವಿರೋಧ ಕೃತ್ಯವನ್ನು ಯಾರೇ ಮಾಡಿದ್ದರೂ ಕಠಿಣ ಕ್ರಮ ನಿಶ್ಚಿತ. ಇದನ್ನು ಯಾರು ಮಾಡಿದ್ದಾರೆ, ಯಾವುದೇ ಶಕ್ತಿ ಇದ್ದರು ಬಂಧಿಸುತ್ತೇವೆಂದು ತಿಳಿಸಿದ್ದಾರೆ. 

ಲಿಂಗಾಯರಿಗೆ ಮೀಸಲಾತಿ ನೀಡಲು ಜಯಮೃತ್ಯುಂಜಯ ಸ್ವಾಮೀಡಿ ಗಡುವು ವಿಧಿಸಿದ ಕುರಿತು ಪ್ರತಿಕ್ರಿಯೆ ನೀಡಿ,ಈ ಸಮಸ್ಯೆ ನಿನ್ನೆಯೇ ಬಗೆಹರಿದಿದೆ. ಮುಖ್ಯಮಂತ್ರಿ ಸ್ಪಷ್ಟನೆ ನೀಡಿದ್ದಾರೆಂದಿದ್ದಾರೆ. 

Stay up to date on all the latest ರಾಜಕೀಯ news
Poll
representation purpose only

ಕೋವಿಡ್ ಲಸಿಕೆ ವಿತರಿಸುವಲ್ಲಿ ಮೋದಿ ಸರ್ಕಾರ ಪಕ್ಷಪಾತ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನೀವು ಏನಂತೀರಿ?


Result
ಇಲ್ಲ, ಇದು ಅಸಂಬದ್ಧ ಆರೋಪ
ಹೌದು, ಪಕ್ಷಪಾತ ಮಾಡುತ್ತಿದೆ
flipboard facebook twitter whatsapp