ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್

ಬೆಳಗಾವಿ, ಮಸ್ಕಿ, ಬಸವ ಕಲ್ಯಾಣ ಅಭ್ಯರ್ಥಿಗಳ ಆಯ್ಕೆಗೆ ಮತ್ತೊಮ್ಮೆ ಕೋರ್ ಕಮಿಟಿ ಸಭೆ- ಜಗದೀಶ್ ಶೆಟ್ಟರ್ 

ಬೆಳಗಾವಿ ಲೋಕಸಭಾ ಹಾಗೂ ಮಸ್ಕಿ,ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಉಪ ಚುನಾವಣಾ ದಿನಾಂಕ ಘೋಷಣೆಯಾದ ನಂತರ ಮತ್ತೆ ಕೋರ್ ಕಮಿಟಿ ಸಭೆ ಸೇರಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ. 

ಬೆಂಗಳೂರು: ಬೆಳಗಾವಿ ಲೋಕಸಭಾ ಹಾಗೂ ಮಸ್ಕಿ,ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಉಪ ಚುನಾವಣಾ ದಿನಾಂಕ ಘೋಷಣೆಯಾದ ನಂತರ ಮತ್ತೆ ಕೋರ್ ಕಮಿಟಿ ಸಭೆ ಸೇರಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ. 

  ಸರ್ಕಾರಿ ನಿವಾಸದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಪಕ್ಷದ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ದಿನಾಂಕ ನಿಗದಿ ಆಗದ ಕಾರಣ ಬಹಳ ಚರ್ಚೆ ಆಗಿಲ್ಲ ಆರ್ ಆರ್. ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರ, ಎರಡು ಶಿಕ್ಷಕರ ಹಾಗೂ ಎರಡು ಪದವೀಧರ ಕ್ಷೇತ್ರಗಳ ಕುರಿತು ಮಾತ್ರ ಚರ್ಚೆ ಆಗಿದೆ ಅಭ್ಯರ್ಥಿಗಳ ಹೆಸರು ಕುರಿತು ಸುದೀರ್ಘ ಚರ್ಚೆ ನಡೆಸಿ ಹೈಕಮಾಂಡ್ ಗೆ ಹೆಸರುಗಳನ್ನು ಕಳಿಸಿಕೊಡಲು ನಿರ್ಧರಿಸಲಾಯಿತು ಎಂದರು.

ಬೆಳಗಾವಿ, ಮಸ್ಕಿ, ಬಸವ ಕಲ್ಯಾಣ ಕ್ಷೇತ್ರಗಳ ಚುನಾವಣಾ ದಿನಾಂಕ ಪ್ರಕಟ ಆದ ನಂತರ ಮತ್ತೊಮ್ಮೆ ಕೋರ್ ಕಮಿಟಿ ಸಭೆ ನಡೆಸಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. 

Related Stories

No stories found.

Advertisement

X
Kannada Prabha
www.kannadaprabha.com