ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಯಾರ್ಯಾರ ಮೇಲೆ ದಾಳಿ ನಡೆಸಿದ್ದೀರಿ ಮರೆತು ಹೋಯಿತೇ: ಡಾ. ಸುಧಾಕರ್ ಪ್ರಶ್ನೆ

ಪ್ರತೀ ಬಾರಿ ಸಿಬಿಐ ದಾಳಿ ನಡೆದಾಗ ಅದು ರಾಜಕೀಯ ಪ್ರೇರಿತ ಎಂದು ಆರೋಪ ಮಾಡುವ ಕಾಂಗ್ರೆಸ್ ನಾಯಕರು, ಈಗಿನ ಆಂಧ್ರ ಪ್ರದೇಶದ ಸಿಎಂ ಸೇರಿ ಹಲವಾರು ಕಾಂಗ್ರೆಸ್ಸೇತರ ನಾಯಕರ ಮೇಲೆ ಸಿಬಿಐ ದಾಳಿ ನಡೆದಾಗ ಕೇಂದ್ರದಲ್ಲಿ ಅಧಿಕಾರದಲ್ಲಿದ್ದದ್ದು ಕಾಂಗ್ರೆಸ್ ಎಂಬುದು ಮರೆತುಹೋಯಿತೇ ಎಂದು ಸಚಿವ ಡಾ.ಸುಧಾಕರ್ ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿದ್ದಾರೆ.
ಡಾ.ಕೆ.ಸುಧಾಕರ್
ಡಾ.ಕೆ.ಸುಧಾಕರ್

ಬೆಂಗಳೂರು: ಪ್ರತೀ ಬಾರಿ ಸಿಬಿಐ ದಾಳಿ ನಡೆದಾಗ ಅದು ರಾಜಕೀಯ ಪ್ರೇರಿತ ಎಂದು ಆರೋ ಪ ಮಾಡುವ ಕಾಂಗ್ರೆಸ್ ನಾಯಕರು, ಅಮಿತ್ ಶಾ ಅವರಿಗೆ 2 ವರ್ಷ ಗುಜರಾತ್ ಪ್ರವೇಶ ನಿಷೇಧಿಸಿದ್ದಾಗ, ಈಗಿನ ಆಂಧ್ರ ಪ್ರದೇಶದ ಸಿಎಂ ಸೇರಿ ಹಲವಾರು ಕಾಂಗ್ರೆಸ್ಸೇತರ ನಾಯಕರ ಮೇಲೆ ಸಿಬಿಐ ದಾಳಿ ನಡೆದಾಗ ಕೇಂದ್ರದಲ್ಲಿ ಅಧಿಕಾರದಲ್ಲಿದ್ದದ್ದು ಕಾಂಗ್ರೆಸ್ ಎಂಬುದು ಮರೆತುಹೋಯಿತೇ ಎಂದು ಸಚಿವ ಡಾ.ಸುಧಾಕರ್ ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿದ್ದಾರೆ.

ಇಂದು ಬೆಳಗ್ಗೆ ಸಿಬಿಐ ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್,ಸಂಸದ ಡಿ.ಕೆ.ಸುರೇಶ್,ಸಚಿವ ನಾರಾ ಯಣ್, ಹಾಗೂ ದೆಹಲಿ,ಮುಂಬೈ, ಬೆಂಗಳೂರು ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದನ್ನು ಕಾಂಗ್ರೆಸ್‌ ಪಕ್ಷದ ಘಟಾನುಘಟಿ ನಾಯಕರು ಮುಗಿಬಿದ್ದಿದ್ದಾರೆ.ಬಿಜೆಪಿ ಸಿಬಿಐಯನ್ನು ದುರಪಯೋಗ ಪಡಿಸಿಕೊಂಡು ರಾಜ ಕೀಯ ಪ್ರೇರಿತರಾಗಿ ದಾಳಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.ಇದಕ್ಕೆ ತಿರು ಗೇಟು ನೀಡಿರುವ ಸುಧಾಕರ್ ಟ್ವೀಟ್ ಮೂಲಕ ಕಾಂಗ್ರೆಸ್ ನಾಯಕರಿಗೆ ಬಿಸಿ ಮುಟ್ಟಿಸಿದ್ದಾರೆ. 

"ಪ್ರತೀ ಬಾರಿ ಸಿಬಿಐ ದಾಳಿ ನಡೆದಾಗ ಅದು ರಾಜಕೀಯ ಪ್ರೇರಿತ ಎಂದು ಆರೋಪ ಮಾಡುವ ಕಾಂಗ್ರೆಸ್ ನಾಯಕರು, ಅಮಿತ್ ಶಾ ಅವರಿಗೆ 2 ವರ್ಷ ಗುಜರಾತ್ ಪ್ರವೇಶ ನಿಷೇಧಿಸಿದ್ದಾಗ, ಈಗಿನ ಆಂಧ್ರ ಪ್ರದೇಶದ ಸಿಎಂ ಸೇರಿ ಹಲವಾರು ಕಾಂಗ್ರೆಸ್ಸೇತರ ನಾಯಕರ ಮೇಲೆ ಸಿಬಿಐ ದಾಳಿ ನಡೆದಾಗ ಕೇಂದ್ರದಲ್ಲಿ ಅಧಿಕಾರದಲ್ಲಿದ್ದದ್ದು ಕಾಂಗ್ರೆಸ್ ಎಂಬುದು ಮರೆತುಹೋಯಿತೇ?

"ಸಿಬಿಐ, ಈಡಿ, ಐಟಿ ಸ್ವತಂತ್ರ ಸ್ವಾಯತ್ತ ಸಂಸ್ಥೆಗಳಾಗಿದ್ದು ಸಹಜ ಕಾನೂನು ಪ್ರಕ್ರಿಯೆ ಪಾಲಿಸುವ ಮೂಲಕ ತಮ್ಮ ಕಾರ್ಯನಿರ್ವಹಿಸುತ್ತಿವೆ. ಇದಕ್ಕೆ ರಾಜಕೀಯ ಬಣ್ಣ ಹಚ್ಚುವ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುವುದು ಸರಿಯಲ್ಲ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಎಷ್ಟೇ ದೊಡ್ಡವರಾದರೂ ಕಾನೂನಿಗೆ ತಲೆ ಬಾಗಲೇ ಬೇಕು." ಟ್ವಿಟ್ ಮಾಡಿ ಸಚಿವ ಸುಧಾಕರ್ ಹೇಳಿದ್ದಾರೆ.

ಡಿ.ಕೆ.ಶಿವಕುಮಾರ್ ತನಿಖೆ ಎದುರಿಸಿ ಸೀತೆಯಂತೆ ಪವಿತ್ರವಾಗಿ ಹೊರಬರಲಿ: ಸಚಿವ ಕೆ.ಎಸ್.ಈಶ್ವರಪ್ಪ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮೇಲೆ ಈ ಹಿಂದೆಯೂ ದಾಳಿಯಾಗಿದೆ.ಇದೇನು ಹೊಸದಲ್ಲ.ದಾಳಿ ವೇಳೆ ಅವರ ದೆಹಲಿ ಮತ್ತು ಬೆಂಗಳೂರು ನಿವಾಸದಲ್ಲಿ ಹವಾಲ ಹಣ ಸಿಕ್ಕಿರುವ ಬಗ್ಗೆ ದಾಳಿ ವೇಳೆ ತಿಳಿದಿತ್ತು.ಈ ಬಗ್ಗೆ ಇಡಿ ಮತ್ತು ಐಡಿ ಇಲಾಖೆಗಳು ತನಿಖೆ ನಡೆಸುತ್ತಿವೆ.ಸಿಬಿಐ ದಾಳಿಯು ರಾಜಕೀಯ ಪ್ರೇರಿತವಾಗಿಲ್ಲವೆಂದು ಸಚಿವ ಕೆ.ಎಸ್.ಈಶ್ವರಪ್ಪ ದಾಳಿಯನ್ನು ಸಮರ್ಥಿಸಿಕೊಂಡಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ದಾಳಿ ನಡೆದಿರುವುದನ್ನು ಕಾಂಗ್ರೆಸ್ ನಾಯಕರು ರಾಜ ಕೀಯ ಪ್ರೇರಿತ,ಉಪ ಚುನಾವಣೆಯ ವೇಳೆ ದಾಳಿ ನಡೆಸುವ ಮೂಲಕ ರಾಜಕೀಯವಾಗಿ ಕಟ್ಟಿಹಾಕುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸುತ್ತಿರು ವುದನ್ನು ನೋಡಿ ಆಶ್ವರ್ಯವಾಗುತ್ತಿದೆ.

ಈ ಹಿಂದೆ ಯಡಿಯೂರಪ್ಪ ಮೇಲೂ ಸಹ ದಾಳಿ ಆಗಿತ್ತು.ಆಗ ಕಾಂಗ್ರೆಸ್ ನಾಯಕರು ಎನಂತ ಹೇಳಿಕೆ ಕೊಟ್ಟಿದ್ದರು.ಉಪ್ಪು ತಿಂದೋನೋ ನೀರು ಕುಡಿಯ ಲೇಬೇಕು ಅಂತ ಹೇಳಿದ್ದರು.ಈಗ ಕಾಂಗ್ರೆಸ್ ಗೊಂದು ಕಾನೂನು ಬೇರೆ ಇದೆಯಾ..? ಎಂದು ಪ್ರಶ್ನಿಸಿರುವ ಅವರುತಪ್ಪು ಮಾಡಿಲ್ಲ ಎನ್ನುವುದಾದರೆ ಡಿಕೆ.ಶಿ ವಕುಮಾರ್ ತನಿಖೆಗೆ ಒಳಗಾಗಲಿ.ತನಿಖೆ ಎದುರಿಸಿ ಸೀತೆಯಂತೆ ಪವಿತ್ರವಾಗಿ ಹೊರಗೆ ಬರಲಿ ಎಂದು ಸವಾಲು ಹಾಕಿದ್ದಾರೆ
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com