ಯಡಿಯೂರಪ್ಪ ಸರ್ಕಾರದ ಭ್ರಷ್ಟಾಚಾರವನ್ನು ಸಿಬಿಐ ಹೊರತೆಗೆಯಲಿ: ಸುರ್ಜೆವಾಲ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ನಡೆಸಲಾಗಿದೆ. ಇಡಿ ನಂತರ ಅವರಿಗೆ ಸಿಬಿಐ ಕಾಟ ಶುರುವಾಗಿದೆ.
ರಂದೀಪ್ ಸಿಂಗ್ ಸುರ್ಜೇವಾಲಾ
ರಂದೀಪ್ ಸಿಂಗ್ ಸುರ್ಜೇವಾಲಾ

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ನಡೆಸಲಾಗಿದೆ. ಇಡಿ ನಂತರ ಅವರಿಗೆ ಸಿಬಿಐ ಕಾಟ ಶುರುವಾಗಿದೆ.

ಈ ನಡುವೆ ರಾಜಕೀಯ ಕಾರಣಗಳಿಗಾಗಿ ಅಧಿಕಾರ ದುರುಪಯೋಗ ಪಡಿಸಿಕೊಂಡು ಕಾಂಗ್ರೆಸ್ ನಾಯಕರ ಮೇಲೆ ನಿರಂತರ ದಾಳಿ ಮಾಡಲಾಗುತ್ತಿದೆ. ಇದಕ್ಕೆ ನಾವು ಹೆದರುವುದಿಲ್ಲ ನಿಜವಾಗಿ ಭಷ್ಟಾಚಾರ ನಿಗ್ರಹ ಮಾಡುವುದಿದ್ದರೆ ಯಡಿಯೂರಪ್ಪ ಸರ್ಕಾರದ ಭ್ರಷ್ಟಾಚಾರವನ್ನು ಸಿಬಿಐ ಹೊರ ತೆಗೆಯಲಿ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಜೋಡಿಯ ಎಲ್ಲಾ ಬೆದರಿಕೆ ಹಾಗೂ ಕುತಂತ್ರಗಳನ್ನು ಕಾಂಗ್ರೆಸ್ ಎದುರಿಸಲಿದ್ದು, ಬಿಜೆಪಿ ಕೈಗೊಂಬೆಯಾಗಿರುವ ಸಿಬಿಐ ದಾಳಿಯನ್ನು ಖಂಡಿಸುತ್ತದೆ ಎಂದು ರಣದೀಪ್ ಸುರ್ಜೇವಾಲಾ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರಣದೀಪ್ ಸುರ್ಜೇವಾಲಾ, ವಿಪಕ್ಷಗಳನ್ನು ರಾಜಕೀಯವಾಗಿ ಎದುರಿಸಲು ಶಕ್ತವಿಲ್ಲದ ಬಿಜೆಪಿ ಸಿಬಿಐ ಅನ್ನು ಮುಂದೆ ಮಾಡಿ ತನ್ನ ಹೇಡಿತನದ ಪ್ರದರ್ಶಸಿದೆ ಎಂದು ಹರಿಹಾಯ್ದಿದ್ದಾರೆ.

ಬೆಳ್ಳಂಬೆಳಗ್ಗೆ ಡಿ.ಕೆ. ಶಿವಕುಮಾರ್ ಮತ್ತು ಅವರ ಸಹೋದರ, ಸಂಸದ ಡಿ.ಕೆ ಸುರೇಶ್ ಅವರ ಮನೆಗಳ ಮೆಲೆ ಸಿಬಿಐ ದಾಳಿ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com