ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಹಾಸ್ಯಾಸ್ಪದ, ಅರ್ಥಹೀನ: ಬಿಜೆಪಿ

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಮನೆ ಮೇಲೆ ಸಿಬಿಐ ದಾಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಡುತ್ತಿರುವ ಪ್ರತಿಭಟನೆ ಹಾಸ್ಯಾಸ್ಪದ, ಅರ್ಥಹೀನ ಎಂದು ಬಿಜೆಪಿ ಬಣ್ಣಿಸಿದೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಮನೆ ಮೇಲೆ ಸಿಬಿಐ ದಾಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಡುತ್ತಿರುವ ಪ್ರತಿಭಟನೆ ಹಾಸ್ಯಾಸ್ಪದ, ಅರ್ಥಹೀನ ಎಂದು ಬಿಜೆಪಿ ಬಣ್ಣಿಸಿದೆ.

ಸಿಬಿಐ, ಇಡಿ ಮತ್ತು ಆದಾಯ ತೆರಿಗೆ ಇಲಾಖೆಗಳು, ಆರ್ಥಿಕ ಮತ್ತು ಕ್ರಿಮಿನಲ್ ವಂಚಕರನ್ನು ತನಿಖೆ ಮಾಡುವ ಮತ್ತು ನ್ಯಾಯ ಕೊಡಿಸುವ ಸ್ವಾಯತ್ತ ಸಂಸ್ಥೆಗಳು ಎಂದು ರಾಜ್ಯ ಬಿಜೆಪಿ ವಕ್ತಾರ ಗಣೇಶ್ ಕಾರ್ನಿಕ್ ಹೇಳಿದ್ದಾರೆ. 

ಯಾವಾಗಲೂ ಆ ಸಂಸ್ಥೆಗಳು ತಮ್ಮ ಕೆಲಸದಲ್ಲಿ ನಿರತವಾಗಿರುತ್ತವೆ, ಪ್ರಸ್ತುತ ಡಿಕೆ ಶಿವಕುಮಾರ್ ಮನೆ ಮೇಲಿನ ದಾಳಿ 2017ರಲ್ಲಿ ಇಡಿ ಆರಂಭಿಸಿದ ತನಿಖೆಯ ಮುಂದುವರೆದ ಭಾಗವಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಸಂಸ್ಥೆಗಳಿಗೆ ಇರುವ ಸ್ವಾಯತ್ತತೆಯನ್ನು ಬಿಜೆಪಿ ಗೌರವಿಸುತ್ತದೆ "ರಾಜಕೀಯ ಪ್ರೇರಿತ ಪ್ರತಿಭಟನೆಗಳು (ಕಾಂಗ್ರೆಸ್ ನಿಂದ) ಹಾಸ್ಯಾಸ್ಪದ ಮತ್ತು ಅರ್ಥಹೀನವಾಗಿವೆ. ಕೇಂದ್ರ ಹಾಗೂ ರಾಜ್ಯಗಳಲ್ಲಿ ಹಲವು ವರ್ಷಗಳ ಕಾಲ ಆಳ್ವಿಕೆ ನಡೆಸಿದ ಕಾಂಗ್ರೆಸ್ ಈ ಸಂಸ್ಥೆಗಳ ಕಾರ್ಯವೈಖರಿಯನ್ನು ಚೆನ್ನಾಗಿ ತಿಳಿದುಕೊಳ್ಳಬೇಕಾಗುತ್ತದೆ ಎಂದು ಕಾರ್ನಿಕ್ ಹೇಳಿದ್ದಾರೆ.

ಅಕ್ರಮ ಆಸ್ತಿ ಸಂಬಂಧ ಕರ್ನಾಟಕದ 9,  ದೆಹಲಿಯಲ್ಲಿ ನಾಲ್ಕು ಮತ್ತು ಮಹಾರಾಷ್ಟ್ರದ 1 ಕಡೆ ಸೇರಿದಂತೆ ಒಟ್ಟಾರೇ 14 ಕಡೆಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಸಿಬಿಐ ತಿಳಿಸಿದೆ.

ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ ಎಂದು ಕಾಂಗ್ರೆಸ್ ಮುಖಂಡರು ವಾಗ್ದಾಳಿ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com