ಉಪಚುನಾವಣೆಗೆ ಡಿಕೆಶಿ ಅಭ್ಯರ್ಥಿಗಳನ್ನು ಫೈನಲ್ ಮಾಡುತ್ತಿದ್ದ ವೇಳೆಯಲ್ಲೇ ಸಿಬಿಐ ಶಾಕ್!

ಎರಡು ವಿಧಾನಸಭೆ ಕ್ಷೇತ್ರ ಮತ್ತು ನಾಲ್ಕು ಪರಿಷತ್ ಸ್ಥಾನಗಳಿಗೆ ಚುನಾವಣೆಗಾಗಿ ಕಾಂಗ್ರೆಸ್ ಸಿದ್ಧತೆ ನಡೆಸುತ್ತಿರುವ ಹೊತ್ತಲ್ಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಅವರ ಸಹೋದರ ಡಿಕೆ ಸುರೇಶ್ ಮನೆ ಮೇಲೆ ಸಿಬಿಐ ದಾಳಿ ನಡೆದಿದೆ.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ಬೆಂಗಳೂರು: ಎರಡು ವಿಧಾನಸಭೆ ಕ್ಷೇತ್ರ ಮತ್ತು ನಾಲ್ಕು ಪರಿಷತ್ ಸ್ಥಾನಗಳಿಗೆ ಚುನಾವಣೆಗಾಗಿ ಕಾಂಗ್ರೆಸ್ ಸಿದ್ಧತೆ ನಡೆಸುತ್ತಿರುವ ಹೊತ್ತಲ್ಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಅವರ ಸಹೋದರ ಡಿಕೆ ಸುರೇಶ್ ಮನೆ ಮೇಲೆ ಸಿಬಿಐ ದಾಳಿ ನಡೆದಿದೆ.

ಸಿಬಿಐ ದಾಳಿಯ ಬಗ್ಗೆ ಆಕ್ಷೇಪ ವ್ಯಕ್ತ ಪಡಿಸಿರುವ ಕಾಂಗ್ರೆಸ್ ಇದೊಂದು ಪಿತೂರಿ ಎಂದು ಆರೋಪಿಸಿದೆ. ಸಿಸಿಬಿ ದಾಳಿ ನಡೆದ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಮತ್ತು ಪಕ್ಷದ ನಾಯಕರು ಆರ್ ಆರ್ ನಗರ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಫೈನಲ್ ಮಾಡುವ ಸಂಬಂಧ ಚರ್ಚಿಸುತ್ತಿದ್ದರು. 

ಶಿರಾ ಕ್ಷೇತ್ರಗೆಲ್ಲಲು ತಂತ್ರ ರೂಪಿಸುತ್ತಿದ್ದು, ಕೆಲ ದಿನಗಳ ಹಿಂದಷ್ಟೇ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಲು ಡಿಕೆ ಶಿವಕುಮಾರ್ ಒಂದರ ಹಿಂದೆ ಒಂದು ಸಭೆ ನಡೆಸಿದ್ದರು.  

ಸದ್ಯ ಸಿಬಿಐ ದಾಳಿಯಿಂದ ಕಂಗೆಟ್ಟಿರುವ  ಕಾಂಗ್ರೆಸ್ ಮುಂದಿನ ನಡೆ ಬಗ್ಗೆ ಚರ್ಚಿಸುತ್ತಿದೆ.  ಉಪ ಚುನಾವಣೆ ಸಿದ್ಧತೆಯಿಂದ ನಮ್ಮನ್ನು ವಿಮುಖಗೊಳಿಸಲು ಈ ಪ್ರಯತ್ನ ಮಾಡಲಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.  ಇದೊಂದು ರಾಜಕೀಯ ದ್ವೇಷಕ್ಕಾಗಿ ನಡೆದ ದಾಳಿ ಎಂದು ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com