ಉಪ ಚುನಾವಣೆ ಹೊಸ್ತಿಲಿನಲ್ಲಿ ಡಿ ಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ: ಅನುಕೂಲಕ್ಕೆ ಬಳಸಿಕೊಳ್ಳುವ ಸಾಧ್ಯತೆ

ಕಳೆದ ಸೋಮವಾರ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ನಿವಾಸ, ಕಚೇರಿಗಳ ಮೇಲೆ ಸಿಬಿಐ ಅಧಿಕಾರಿಗಳು ಹಠಾತ್ ದಾಳಿ, ಶಿರಾ ಮತ್ತು ಆರ್ ಆರ್ ನಗರ ಕ್ಷೇತ್ರಗಳ ಉಪ ಚುನಾವಣೆ ಸನ್ನಿಹಿತವಾಗಿರುವ ಸಂದರ್ಭದಲ್ಲಿ ಹೊಸ ಆಯಾಮ ಪಡೆದುಕೊಳ್ಳಲಿದೆ.
ಡಿ ಕೆ ಶಿವಕುಮಾರ್
ಡಿ ಕೆ ಶಿವಕುಮಾರ್

ಮೈಸೂರು: ಕಳೆದ ಸೋಮವಾರ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ನಿವಾಸ, ಕಚೇರಿಗಳ ಮೇಲೆ ಸಿಬಿಐ ಅಧಿಕಾರಿಗಳು ಹಠಾತ್ ದಾಳಿ, ಶಿರಾ ಮತ್ತು ಆರ್ ಆರ್ ನಗರ ಕ್ಷೇತ್ರಗಳ ಉಪ ಚುನಾವಣೆ ಸನ್ನಿಹಿತವಾಗಿರುವ ಸಂದರ್ಭದಲ್ಲಿ ಹೊಸ ಆಯಾಮ ಪಡೆದುಕೊಳ್ಳಲಿದೆ.

ಒಕ್ಕಲಿಗ ಪ್ರಾಬಲ್ಯ ಹೆಚ್ಚಾಗಿರುವ ಈ ಎರಡೂ ಕ್ಷೇತ್ರಗಳಲ್ಲಿ ತಮ್ಮ ಒಕ್ಕಲಿಗ ಪ್ರಭಾವವನ್ನು ಡಿ ಕೆ ಶಿವಕುಮಾರ್ ಮೆರೆಯುವುದಲ್ಲದೆ ಉಪ ಚುನಾವಣೆ ಸಂದರ್ಭದಲ್ಲಿ ತಮ್ಮ ಶಕ್ತಿಯನ್ನು ಕುಗ್ಗಿಸಲು ಸರ್ಕಾರ ಸಿಬಿಐ ದಾಳಿಯನ್ನು ದಾಳವಾಗಿ ಬಳಸಿಕೊಂಡಿದೆ ಎಂದು ಪ್ರಚಾರದುದ್ದಕ್ಕೂ ಹೇಳಿಕೊಂಡು ಅದರಿಂದ ಲಾಭ ಮಾಡಿಕೊಳ್ಳುವ ಸಾಧ್ಯತೆಯಿದೆ ಬಹುತೇಕವಾಗಿದೆ.

ಮೊನ್ನೆ ಸೋಮವಾರ ಬೆಳಗ್ಗೆ ಡಿ ಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಅದು ಸುದ್ದಿಯಾಗುತ್ತಿದ್ದಂತೆ ಅವರ ಬೆಂಬಲಿಗರು ಸಾವಿರಾರು ಮಂದಿ ಬೀದಿಗಿಳಿದು ಪ್ರತಿಭಟಿಸಿದರು. ಕಾಂಗ್ರೆಸ್ ಮುಂದಿನ ಚುನಾವಣೆಗಳಿಗೆ ತಯಾರಾಗುವುದನ್ನು ತಡೆಯಲು ಬಿಜೆಪಿ ಮಾಡುತ್ತಿರುವ ಕುತಂತ್ರವಿದು, ಸಿಬಿಐ ಅಧಿಕಾರಿಗಳು ಬಿಜೆಪಿ ಸರ್ಕಾರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ ಎಂದು ಬೆಂಬಲಿಗರು ಆರೋಪಿಸಿದರು.

ಈ ಹೊಸ ಬೆಳವಣಿಗೆ ಒಕ್ಕಲಿಗ ಮತದಾರರ ಮೇಲೆ ಕಣ್ಣಿಟ್ಟಿರುವ ಜೆಡಿಎಸ್ ಮೇಲೆ ಕೂಡ ಪ್ರಭಾವ ಬೀರಲಿದೆ ಎಂದು ಹೇಳಲಾಗುತ್ತಿದೆ. ಶಿರಾ ಕ್ಷೇತ್ರದಲ್ಲಿ ಶಾಸಕರಾಗಿದ್ದ ಬಿ ಸತ್ಯನಾರಾಯಣ ಅವರ ಹಠಾತ್ ನಿಧನ ನಂತರ ತೆರವಾದ ಸ್ಥಾನಕ್ಕೆ ಅವರ ಪತ್ನಿಯನ್ನು ನಿಲ್ಲಿಸುವ ಮೂಲಕ ಮತದಾರರ ಕರುಣೆ ಗಿಟ್ಟಿಸಿಕೊಳ್ಳಲು ಜೆಡಿಎಸ್ ಪ್ರಯತ್ನಿಸುತ್ತಿದೆ.

ಕಾಂಗ್ರೆಸ್ ನಾಯಕ ಆರ್ ಧ್ರುವನಾರಾಯಣ ಮಾತನಾಡಿ, ಸಿಬಿಐ ದಾಳಿ ರಾಜಕೀಯ ಪ್ರೇರಿತ. ಇದರಿಂದ ಒಕ್ಕಲಿಗ ಮತ್ತು ಇತರ ಸಮುದಾಯಗಳ ಮತ ಕಾಂಗ್ರೆಸ್ ನತ್ತ ಒಲಿಯಲಿದೆ. ಎಸ್ ಎಂ ಕೃಷ್ಣ ಅವರ ನಂತರ ಒಕ್ಕಲಿಗರು ಮತ್ತೊಬ್ಬ ಪ್ರಬಲ ಮುಖಂಡನಿಗಾಗಿ ಇದಿರು ನೋಡುತ್ತಿದ್ದಾರೆ. ಅವರಿಗೆ ಶಿವಕುಮಾರ್ ಬಲಿಷ್ಠ ನಾಯಕ ಎನಿಸಿಕೊಳ್ಳುತ್ತಿದ್ದಾರೆ ಎಂದರು.
ಇನ್ನೊಂದೆಡೆ ಒಕ್ಕಲಿಗ ಸಮುದಾಯದವರು ಜೆಡಿಎಸ್ ರಾಷ್ಟ್ರೀಯ ಹೆಚ್ ಡಿ ದೇವೇಗೌಡರಿಗೆ ಬೆಂಬಲ ನೀಡುವುದನ್ನೂ ನಿರಾಕರಿಸುವಂತಿಲ್ಲ, ದಶಕಗಳಿಂದ ಒಕ್ಕಲಿಗರು, ಸಾಮಾನ್ಯ ಜನರು ಜೆಡಿಎಸ್ ಮೇಲೆ ನಂಬಿಕೆ ಇಟ್ಟುಕೊಂಡಿದ್ದಾರೆ.

ಸಾ ರಾ ಮಹೇಶ್ ಪ್ರತಿಕ್ರಿಯಿಸಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ಮುಖಂಡ ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವಿನ ಭಿನ್ನಾಭಿಪ್ರಾಯದಿಂದಾಗಿ ಸಾರ್ವತ್ರಿಕ ಚುನಾವಣೆಯ ಮೊದಲು ಸೂಕ್ತ ಅಭ್ಯರ್ಥಿಯನ್ನು ಘೋಷಿಸಲು ಕಾಂಗ್ರೆಸ್ ಗೆ ಸಾಧ್ಯವಾಗುವುದಿಲ್ಲ. ಡಿ ಕೆ ಶಿವಕುಮಾರ್ ಅವರನ್ನು ಉನ್ನತ ನಾಯಕ ಎಂದು ಘೋಷಿಸದಿದ್ದರೆ ಒಕ್ಕಲಿಗರು ಅವರನ್ನೇಕೆ ಬೆಂಬಲಿಸುತ್ತಾರೆ ಎಂದು ಕೇಳುತ್ತಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com