ಬಿಜೆಪಿಗೆ ಸೆಡ್ಡು ಹೊಡೆದ ಶಾಸಕಿ: ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಬಂಡಾಯ ಅಭ್ಯರ್ಥಿಯಾಗಿ ಪತಿಯನ್ನು ಕಣಕ್ಕಿಳಿಸಿದ ಪೂರ್ಣಿಮಾ

ಚಿತ್ರದುರ್ಗ, ತುಮಕೂರು, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿ ಯಲ್ಲಿ ಬರುವ 38 ತಾಲೂಕುಗಳನ್ನೊಳಗೊಂಡ ವಿಧಾನಪರಿಷತ್ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಇದೇ ತಿಂಗಳ 28ರಂದು ನಡೆಯಲಿದೆ.
ಪೂರ್ಣಿಮಾ ಶ್ರೀನಿವಾಸ್
ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ: ಚಿತ್ರದುರ್ಗ, ತುಮಕೂರು, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿ ಯಲ್ಲಿ ಬರುವ 38 ತಾಲೂಕುಗಳನ್ನೊಳಗೊಂಡ ವಿಧಾನಪರಿಷತ್ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಇದೇ ತಿಂಗಳ 28ರಂದು ನಡೆಯಲಿದ್ದು, ಬಿಜೆಪಿಗೆ ಸಡ್ಡು ಹೊಡೆದು ಬಂಡಾಯ ಅಭ್ಯರ್ಥಿಯಾಗಿ ಹಿರಿಯೂರು ಕ್ಷೇತ್ರದ ಶಾಸಕಿ ಕೆ ಪೂರ್ಣಿಮಾ ಅವರ ಪತಿ ಡಿ.ಟಿ ಶ್ರೀನಿವಾಸ್ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಇದರ ಜೊತೆಗೆ ಡಾ. ಹಾಲನೂರು ಎಸ್. ಲೇಪಾಕ್ಷಿ ಕೂಡ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು, ಬಿಜೆಪಿ ಅಭ್ಯರ್ಥಿ ಚಿದಾನಂದ ಗೌಡ ಅವರಿಗೆ ಸೋಲಿನ ಭೀತಿ ಎದುರಾಗಿದೆ.

ಶಾಸಕಿ ಕೆ.ಪೂರ್ಣಿಮಾ ಪತಿ ಶ್ರೀನಿವಾಸ್ ಬಿಜೆಪಿಯ ಟಿಕೆಟ್ ಪಡೆಯಲು ಪ್ರಬಲ ಆಕಾಂಕ್ಷಿಯಾಗಿದ್ದರು.ಟಿಕೆಟ್ ತಪ್ಪಿದಾಗಿಂದಲೂ ಅವರು ಪಕ್ಷಕ್ಕೆ ಸಡ್ಡು ಹೊಡೆಯುವ ಸೂಚನೆ ನೀಡಿದ್ದರು.ಅಂತಿಮವಾಗಿ ಇಂದು ನಾಮಪ ತ್ರ ಸಲ್ಲಿಸಿ ಅಖಾಡಕ್ಕೆ ಇಳಿದಿದ್ದಾರೆ. ಇವರ ಜೊತೆಗೆ ಡಾ. ಹಲನೂರು ಎಸ್.ಲೇಪಾಕ್ಷಿ ಕೂಡ ಪಕ್ಷೇತರ ಅಭ್ಯರ್ಥಿ ಯಾಗಿ ಸ್ಪರ್ಧಿಸುತ್ತಿದ್ದಾರೆ.ಇಬ್ಬರು ಪಕ್ಷೇತರ ಅಭ್ಯರ್ಥಿಗಳ ಸ್ಪರ್ಧೆಯಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಎಂ. ಚಿದಾನಂದ ಗೌಡಗೆ ಬಹುತೇಕ ಸೋಲಿನ ಭೀತಿ ಎದುರಾಗಿದೆ.

ವಿಧಾನಪರಿಷತ್ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಗೊಲ್ಲ ಮತ್ತು ಲಿಂಗಾಯತ ಮತಗಳೇ ನಿರ್ಣಾಯಕ ಪಾತ್ರ ವಹಿಸುತ್ತದೆ.ಗೊಲ್ಲ ಸಮುದಾಯಕ್ಕೆ ಸೇರಿದ ಡಿ.ಟಿ. ಶ್ರೀನಿವಾಸ್ ಹಾಗೂ ಲಿಂಗಾಯತ ಸಮುದಾಯಕ್ಕೆ ಸೇರಿದ ಡಾ. ಹಾಲನೂರು ಎಸ್ ಲೇಪಾಕ್ಷಿ ತಮ್ಮ ಸಮುದಾಯದ ಮತಗಳನ್ನು ಸೆಳೆಯಲಿದ್ದಾರೆ. ಐದು ಜಿಲ್ಲೆಗಳಲ್ಲಿ ಡಿ.ಟಿ. ಶ್ರೀನಿವಾಸ್ ಜನರಿಗೆ ಚಿರಪರಿಚಿತರಾಗಿದ್ದು ಹೆಚ್ಚಿನ ಮತಗಳು ಲಭಿಸುವ ನಿರೀಕ್ಷೆಯಿದೆ.ಬಿಜೆಪಿ ನೆಚ್ಚಿಕೊಂಡಿರುವ ಲಿಂಗಾಯತ ಮತಗಳು ಎಸ್.ಲೇಪಾಕ್ಷಿ ಪಾಲಾಗಿ ಬಿಜೆಪಿ ಅಭ್ಯರ್ಥಿ ಠೇವಣಿ ಕಳೆದುಕೊಂಡರು ಅಚ್ಚರಿ ಪಡುವಂತಿಲ್ಲ.

ಆಗ್ನೇಯ ಪದವೀಧರ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿರುವುದು ಬಹುತೇಕ ಕಡಿಮೆ.ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳೇ ಪ್ರತಿ ಬಾರಿ ಗೆಲುವು ಸಾಧಿಸಿಕೊಂಡು ಬಂದಿದ್ದಾರೆ. ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವ ರಮೇಶ್ ಬಾಬು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.ಇನ್ನು ಬಿಜೆಪಿ ಅಭ್ಯರ್ಥಿಯಾಗಿ ಎಂ. ಚಿದಾನಂದ ಗೌಡ, ಜೆಡಿಎಸ್ ಅಭ್ಯರ್ಥಿಯಾಗಿ ಚೌಡರೆಡ್ಡಿ ತೂಪಲ್ಲಿ ಅಖಾಡಕ್ಕೆ ಇಳಿದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com