ಅಕ್ಟೋಬರ್ 8 ರಂದು ಆರ್.ಆರ್.ನಗರ ಜೆಡಿಎಸ್ ಅಭ್ಯರ್ಥಿ ಘೋಷಣೆ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ

ಇದೇ ಆಕ್ಟೋಬರ್ 8ರಂದು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗುತ್ತದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ.

Published: 07th October 2020 09:42 AM  |   Last Updated: 07th October 2020 12:36 PM   |  A+A-


HD devegowda

ಎಚ್.ಡಿ ದೇವೇಗೌಡ

Posted By : Srinivasamurthy VN
Source : UNI

ಬೆಂಗಳೂರು: ಇದೇ ಆಕ್ಟೋಬರ್ 8ರಂದು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗುತ್ತದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ.

ನಗರದ ಜೆ.ಪಿ.ಭವನದಲ್ಲಿ ನಡೆದ ವಿಧನಾಪರಿಷತ್‌ನ ನಾಲ್ಕು ಸ್ಥಾನಗಳ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ನ್ನು ಗೆಲ್ಲಿಸಿಕೊಳ್ಳುವ ನಿಟ್ಟಿನಲ್ಲಿ ತಂತ್ರ ರೂಪಿಸುವ ಕುರಿತು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳ  ಅಭ್ಯರ್ಥಿಗಳು,ಆಯಾ ಕ್ಷೇತ್ರಗಳ ಮುಖಂಡರು, ಶಾಸಕರು ಸೇರಿದಂತೆ ಇತರರೊಂದಿಗೆ ಸಮಾಲೋಚನೆ ನಡೆಸಿದರು.ಪ್ರತಿಯೊಬ್ಬರ ಅಭಿಪ್ರಾಯಗಳನ್ನು ಪಡೆದ ದೇವೇಗೌಡ ಅವರು, ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಸೂಚನೆ ನೀಡಿದರು.

ಇದೇ ವೇಳೆ ಉಪ ಚುನಾವಣೆ ಕುರಿತು ಮಾತನಾಡಿದ ದೇವೇಗೌಡ ಅವರು, 'ಆರ್.ಆರ್.ನಗರ ಕ್ಷೇತ್ರದಲ್ಲಿಯೂ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ. ಈಗಾಗಲೇ ಮೂವರ ಹೆಸರು ಅಂತಿಮವಾಗಿದ್ದು, ಅದರಲ್ಲಿ ಒಬ್ಬರನ್ನು ಆಯ್ಕೆ ಮಾಡಲಾಗುವುದು.ಅ.8 ರಂದು ಅಭ್ಯರ್ಥಿ ಯಾರೆಂಬುದನ್ನು ನಿರ್ಣಯ  ಮಾಡಲಾಗುವುದು. ಸೋಲು-ಗೆಲುವು ಬೇರೆ ವಿಚಾರ. ಅಭ್ಯರ್ಥಿಯನ್ನಂತೂ ಕಣಕ್ಕಿಳಿಸುವುದು ಖಚಿತವೆಂದು ತಿಳಿಸಿದರು.


Stay up to date on all the latest ರಾಜಕೀಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp