ಆರ್.ಆರ್.ನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಹಾಕದಂತೆ ಕಾಂಗ್ರೆಸ್ ನಿಂದ ಒತ್ತಡ: ಕುಮಾರಸ್ವಾಮಿ

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹಾಕದಂತೆ ಕಾಂಗ್ರೆಸ್ ಒತ್ತಡ ಹೇರಿದ್ದು, ಇದಕ್ಕೆ ಮಣಿಯುವುದಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಎಚ್ ಡಿ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹಾಕದಂತೆ ಕಾಂಗ್ರೆಸ್ ಒತ್ತಡ ಹೇರಿದ್ದು, ಇದಕ್ಕೆ ಮಣಿಯುವುದಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್‌ನಲ್ಲಿದ್ದ ಹನುಮಂತರಾಯಪ್ಪ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆ ಸೇರಿ ಕಾಂಗ್ರೆಸ್ ಸೇರ್ಪಡೆಗೊಂಡು ಜೆಡಿಎಸ್ ಬೆಂಬಲದಿಂದ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಷರತ್ತನಿಟ್ಟು ಪುತ್ರಿ ಕುಸುಮಾಗೆ ಟಿಕೆಟ್ ಕೊಡಿಸುವಲ್ಲಿ ಸಫಲರಾಗಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಜಾತಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ ಕುಮಾರಸ್ವಾಮಿ, ಜಾತಿ ಹೆಸರನ್ನ ಹೇಳಿ ಮತ ಕೇಳುವವರು ನಾವಲ್ಲ. ಕಾಂಗ್ರೆಸ್ ನವರಿಗೆ ನಾಚಿಕೆ ಆಗಬೇಕು. ನಮ ಪಕ್ಷ ಒಳ ಒಪ್ಪಂದ ಮಾಡಿಕೊಳ್ಳುವಂತದ್ದಲ್ಲ. ಅವರ ಅಭ್ಯರ್ಥಿ ಗೆಲ್ಲಿಸುವುದಕ್ಕೆ ನಾನು ಅಭ್ಯರ್ಥಿ ಹಾಕದೇ ಬೆಂಬಲ ಕೊಡಬೇಕಾ? ಕಾಂಗ್ರೆಸ್ ಮತ್ತು ಬಿಜೆಪಿ ಪರ್ಸಂಟೇಜ್ ಸರ್ಕಾರಗಳು ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಒಕ್ಕಲಿಗ ಮತಗಳೇ ಸುಮಾರು 1.50 ಲಕ್ಷಕ್ಕಿಂತಲೂ ಹೆಚ್ಚಿವೆ. ಹೀಗಾಗಿ ಒಕ್ಕಲಿಗ ನಾಯಕತ್ವದ ಹಿನ್ನೆಲೆಯಲ್ಲಿ ಈ ಮತಗಳ ಮೇಲೆ ಕಣ್ಣಿಟ್ಟು ಕ್ಷೇತ್ರದಲ್ಲಿ ಡಿ.ಕೆ. ಸಹೋದರರು ಚುನಾವಣಾ ಅಖಾಡ ಪ್ರವೇಶಿಸಿದ್ದಾರೆ.

ಹನುಮಂತರಾಯಪ್ಪ ಹಿಂದೆ ಜೆಡಿಎಸ್‌ನಿಂದ ಸ್ಪರ್ಧಿಸಿದ್ದು, ಕಾಂಗ್ರೆಸ್ ಮತ ಜೊತೆ ಜೆಡಿಎಸ್ ನ ಮತಗಳು ಕೂಡ ಕುಸುಮಾಗೆ ಕ್ರೋಢೀಕೃತವಾಗುತ್ತವೆ ಎಂಬ ಲೆಕ್ಕಾಚಾರ ಡಿ.ಕೆ.ಶಿವಕುಮಾರ್‌ದ್ದಾಗಿದೆ. ಕಾಂಗ್ರೆಸ್‌ನಿಂದ ಪುತ್ರಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿರುವ ಹನುಮಂತರಾಯಪ್ಪ ಜೆಡಿಎಸ್ ಮುಖಂಡರ ಮೇಲೆ ಅಭ್ಯರ್ಥಿ ಹಾಕದಂತೆ ಪರೋಕ್ಷವಾಗಿ ಪುತ್ರಿಯನ್ನು ಬೆಂಬಲಿಸುವಂತೆ ಒತ್ತಡ ಹೇರುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com