ಡಿಕೆಶಿ ಒಕ್ಕಲಿಗ ಜಾತಿಯನ್ನು ಗುತ್ತಿಗೆ ತೆಗೆದುಕೊಂಡಿದ್ದಾರೆಯೇ?: ಹೆಚ್‌ಡಿಕೆ ಗರಂ

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಒಕ್ಕಲಿಗ ಜಾತಿಯನ್ನು ಗುತ್ತಿಗೆ ತೆಗೆದುಕೊಂಡಿದ್ದಾರೆಯೇ?. ಇವರೇನು ಜಾತಿ ರಕ್ಷಕರೇ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.
ಡಿಕೆಶಿ-ಎಚ್ ಡಿಕೆ
ಡಿಕೆಶಿ-ಎಚ್ ಡಿಕೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಒಕ್ಕಲಿಗ ಜಾತಿಯನ್ನು ಗುತ್ತಿಗೆ ತೆಗೆದುಕೊಂಡಿದ್ದಾರೆಯೇ?. ಇವರೇನು ಜಾತಿ ರಕ್ಷಕರೇ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಒಕ್ಕಲಿಗ ನಾಯಕತ್ವ ಪ್ರಭಾವ ಬೀರಿ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಪ್ರಯತ್ನಿಸುತ್ತಿರುವುದಕ್ಕೆ ನಗರದಲ್ಲಿಂದು ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಕ್ಷೇತ್ರದಲ್ಲಿ ಶಿವಕುಮಾರ್ ಜಾತಿರಾಜಕಾರಣ ಆರಂಭಿಸಿದ್ದಾರೆ. ಹಿಂದೆ ಜಾತಿ ಮೇಲೆ ದಬ್ಬಾಳಿಕೆಯಾದಾಗ ಏಕೆ ಕ್ರಮ ತೆಗೆದುಕೊಳ್ಳಲಿಲ್ಲ. ಈಗ ಜಾತಿಯವರೆಲ್ಲ ಒಂದಾಗಬೇಕು. ನಮ್ಮವರಿಗೆ ತೊಂದರೆ ಕೊಡುತ್ತಾರೆ ಎನ್ನುವುದೆಷ್ಟು  ಸರಿ? ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು.

ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸುವ ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗುವುದೆಂದು ಹೇಳುತ್ತಿರುವ ಶಿವಕುಮಾರ್‌ಗೆ ಈಗ ಜ್ಞಾನೋದಯವಾದಂತಿದೆ. ಮೊದಲೇ ಇವೆಲ್ಲ ತಿಳಿದಿರಲಿಲ್ಲವೇ?. ಇಂತಹ ವಾತಾವರಣ ಯಾವಾಗ ಸೃಷ್ಟಿಯಾಯಿತು?. ಯಾರು ಬೆಂಬಲ ಕೊಡುತ್ತಾ ಬಂದರು ಎನ್ನುವುದನ್ನು ಹೇಳಬೇಕು. ಚುನಾವಣೆಗಾಗಿ ಈಗ ಮಾತನಾಡುತ್ತಿರುವ ಅವರು ಮುನಿರತ್ನ ಕಾಂಗ್ರೆಸ್‌ನಲ್ಲಿದ್ದಾಗ ಏಕೆ ತಡೆಯುವ ಪ್ರಯತ್ನ ಮಾಡಲಿಲ್ಲ ಎಂದು ಡಿಕೆಶಿಗೆ ತಿರುಗೇಟು ನೀಡಿದರು.

ರಾಜರಾಜೇಶ್ವರಿ ನಗರದಲ್ಲಿ ಮೃತ ಡಿಕೆ ರವಿ ಅವರ ಪತ್ನಿ ಕುಸುಮಾ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಇದರ ಬೆನ್ನಲ್ಲೇ ಗೆಲುವಿಗಾಗಿ ಕಾಂಗ್ರೆಸ್ ರಣತಂತ್ರಗಳನ್ನು ರಚಿಸುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com