ಉಪಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಕಣಕ್ಕಿಳಿಯಲಿದೆ: ದೇವೇಗೌಡ

ಈ ಬಾರಿಯ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದ್ದು, ಪಕ್ಷದ ಕಾರ್ಯಕರ್ತರ ಬೆಂಬಲದೊಂದಿಗೆ ಚುನಾವಣೆ ಎದುರಿಸಲಿದ್ದೇವೆ ಎಂದು ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಅವರು ಸ್ಪಷ್ಟಪಡಿಸಿದ್ದಾರೆ. 
ದೇವೇಗೌಡ
ದೇವೇಗೌಡ

ಕಲಬುರಗಿ: ಈ ಬಾರಿಯ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದ್ದು, ಪಕ್ಷದ ಕಾರ್ಯಕರ್ತರ ಬೆಂಬಲದೊಂದಿಗೆ ಚುನಾವಣೆ ಎದುರಿಸಲಿದ್ದೇವೆ ಎಂದು ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಅವರು ಸ್ಪಷ್ಟಪಡಿಸಿದ್ದಾರೆ. 

ವಿಧಾನಪರಿಷತ್ ‌ಶಿಕ್ಷಕರ ಕ್ಷೇತ್ರದ ‌ಚುನಾವಣೆಗೆ ಪಕ್ಷದ ಅಭ್ಯರ್ಥಿಯಾಗಿ ‌ಸ್ಪರ್ಧಿಸಿರುವ ತಿಮ್ಮಯ್ಯ‌ ಪುರ್ಲೆ ನಾಮಪತ್ರ ಸಲ್ಲಿಕೆಯಲ್ಲಿ ಭಾಗವಹಿಸುವುದಕ್ಕೂ‌ ಮುನ್ನ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ವಿಧಾನಸಭೆ ಹಾಗೂ ವಿಧಾನಪರಿಷತ್ ಚುನಾವಣೆಯಲ್ಲಿ ‌ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದ್ದು, ಪಕ್ಷದ ಕಾರ್ಯಕರ್ತರ ಬೆಂಬಲದೊಂದಿಗೆ ‌ಚುನಾವಣೆ ಎದುರಿಸಲಿದ್ದೇವೆಂದು ಹೇಳಿದ್ದಾರೆ. 

ಆರ್ಥಿಕವಾಗಿ ದೇಶ ಸಂಕಷ್ಟಕ್ಕೆ ಗುರಿಯಾಗಿದೆ. ಇದಕ್ಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ತಲೆದೋರಿದ ಸಮಸ್ಯೆಗಳೂ ಕಾರಣವಾಗಿದೆ ಕೊರೋಯನಾ ಸೋಂಕೂ ಕಾರಣವಾಗಿದೆ‌. ಬರೀ ಮೋದಿಯ ಬಗ್ಗೆ ತಪ್ಪು ಹುಡುಕೋದೇ ನನ್ನ ಕೆಲಸವಲ್ಲ. ಎಲ್ಲವನ್ನೂ ಗಮನಿಸುತ್ತಿದ್ದೇನೆ. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ರಾಜಕೀಯ ಕಾಳಗ ನಡೆದಿದೆ. ಕೊರೊನಾ ವಿಷಯದಲ್ಲಿ ಕ್ಷುಲ್ಲಕ ರಾಜಕಾರಣ ಮಾಡುತ್ತಿವೆ. ಪಕ್ಷ ಸಂಘಟನೆ ಮಾಡುವುದೇ ನನ್ನ ಕೆಲಸವಾಗಿದೆ. ಯಾರು ಎಷ್ಟೇ ಲಘುವಾಗಿ ಮಾತಾಡಿದರೂ ಚುನಾವಣೆ ನಂತರ ಉತ್ತರ ಕೊಡುತ್ತೇನೆ. ಯಾರ ಮಾತಿನ ಬಗ್ಗೆಯೂ ಕಿವಿಗೊಡುವುದಿಲ್ಲ. ಪಕ್ಷ ಸಂಘಟನೆ ಕಡೆ ಒತ್ತು ಕೊಡುತ್ತೇನೆಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com