ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಗೆ ಮೂಹೂರ್ತ ಫಿಕ್ಸ್

ಹೊಸಕೋಟೆ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ಪಕ್ಷ ಸೇರಲು ಮುಹೂರ್ತ ಫಿಕ್ಸ್ ಆಗಿದೆ. ಈಗಾಗಲೇ ಅಂತಿಮ ಹಂತದ ಮಾತುಕತೆಯೂ ಮುಗಿದಿದ್ದು ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸರಳವಾಗಿ ಪಕ್ಷ ಸೇರಲು ತಯಾರಿ ನಡೆದಿದೆ ಎನ್ನಲಾಗಿದೆ.
ಶರತ್ ಬಚ್ಚೇಗೌಡ
ಶರತ್ ಬಚ್ಚೇಗೌಡ

ಬೆಂಗಳೂರು: ಹೊಸಕೋಟೆ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ಪಕ್ಷ ಸೇರಲು ಮುಹೂರ್ತ ಫಿಕ್ಸ್ ಆಗಿದೆ. ಈಗಾಗಲೇ ಅಂತಿಮ ಹಂತದ ಮಾತುಕತೆಯೂ ಮುಗಿದಿದ್ದು ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸರಳವಾಗಿ ಪಕ್ಷ ಸೇರಲು ತಯಾರಿ ನಡೆದಿದೆ ಎನ್ನಲಾಗಿದೆ.

ಹೊಸಕೋಟೆ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ಬಳಿಕ ಶರತ್ ಬಚ್ಚೇಗೌಡ ಅವರು ಮೂರು ಪಕ್ಷಗಳ ಬಾಗಿಲು ಬಡಿದಿದ್ದರು. ಆದರೆ ಅಂತಿಮವಾಗಿ ಇದೀಗ ಕಾಂಗ್ರೆಸ್ ಪಕ್ಷ ಸೇರಲು ವೇದಿಕೆ ರೆಡಿಯಾಗಿದೆ. 

ಶರತ್ ಅವರು ಇದೇ ಅಕ್ಟೋಬರ್ 25 ರಂದು ಭಾನುವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ. ವಿಜಯದಶಮಿಯ ಶುಭ ಮುಹೂರ್ತದಲ್ಲಿ ಪಕ್ಷೇತರ ಶಾಸಕ 'ಕೈ' ಹಿಡಿಯಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸೂಚನೆಯಂತೆ ಮಾಜಿ ಸಚಿವ ಕೃಷ್ಣ ಭೈರೇಗೌಡ ಅವರು ಶರತ್ ಬಚ್ಚೇಗೌಡ ಅವರೊಂದಿಗೆ ಮಾತುಕತೆ ನಡೆಸಿದ್ದರು. ಇದೀಗ ಕಾಂಗ್ರೆಸ್ ಸೇರಲು ಶರತ್ ಒಪ್ಪಿದ್ದಾರೆ ಎಂದು ಮಾಜಿ ಸಚಿವ ಕೃಷ್ಣ ಭೈರೇಗೌಡ ಸ್ಪಷ್ಟಪಡಿಸಿದ್ದಾರೆ. 

ಬಿಜೆಪಿ ಸೇರುವ ಪ್ರಯತ್ನ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಉಪ ಚುನಾವಣೆಯಲ್ಲಿ ಗೆದ್ದ ಬಳಿಕ ಮಾತೃ ಪಕ್ಷ ಸೇರಲು ಶರತ್ ಇನ್ನಿಲ್ಲದ ಕಸರತ್ತು ನಡೆಸಿದ್ದರು. ಆದರೆ ಎಂಬಿಟಿ ನಾಗರಾಜ್ ಅವರ ವಿರೋಧದಿಂದಾಗಿ ಬಿಜೆಪಿ ಸೇರುವ ಅವರ ಪ್ರಯತ್ನ ಕೈಗೂಡಲಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com